ದಿಲ್ಲಿ ಚಲೋಗೆ ಹೊರಟ ಹುಬ್ಬಳ್ಳಿ ರೈತರ ಬಂಧನ; ಮೋದಿಯ ಕ್ರಿಮಿನಲ್ ಮೈಂಡ್ ಕಾರಣವೆಂದ ಸಿಎಂ ಸಿದ್ದರಾಮಯ್ಯ

ದಿಲ್ಲಿ ಚಲೋ ಪ್ರತಿಭಟನೆಗೆ ತೆರಳುತ್ತಿದ್ದ ಹುಬ್ಬಳ್ಳಿ ರೈತರನ್ನು ಮಧ್ಯಪ್ರದೇಶ ಪೊಲೀಸರು ಬಂಧಿಸಿರುವ ಹಿಂದೆ ಪ್ರಧಾನಿ ಮೋದಿ ಕ್ರಿಮಿನಲ್ ಮೈಂಡ್ ಕೆಲಸ ಮಾಡಿದೆ ಎಂದು ಸಿಎಂ ಸಿದ್ದರಾಮಯ್ಯ ಆರೋಪಿಸಿದ್ದಾರೆ.

Delhi Chalo going Hubli farmers Arrest behind PM Modi criminal mind worked says CM Siddaramaiah sat

ಬೆಂಗಳೂರು (ಫೆ.12): ದೆಹಲಿಯಲ್ಲಿ ನಾಳೆ ನಡೆಯಲಿರುವ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಹೋಗುತ್ತಿದ್ದ ಹುಬ್ಬಳ್ಳಿಯ ರೈತರನ್ನು ಭೋಪಾಲ್ ನಲ್ಲಿ ಬಂಧಿಸಿರುವ ಮಧ್ಯಪ್ರದೇಶ ಸರ್ಕಾರದ ಕ್ರಮ ಖಂಡನೀಯವಾಗಿದೆ. ಈ ದುಷ್ಕೃತ್ಯದ ಹಿಂದೆ ಕ್ರಿಮಿನಲ್ ಮೈಂಡ್ ಮೋದಿ ಸರ್ಕಾರದ ಕೈವಾಡವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಅವರು 'ದೆಹಲಿಯಲ್ಲಿ ನಾಳೆ ನಡೆಯಲಿರುವ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಹುಬ್ಬಳ್ಳಿ ರೈತರನ್ನು ಮಧ್ಯಪ್ರದೇಶ ಪೊಲೀಸರು ಬಂಧಿಸಿದ ಕ್ರಮ ಖಂಡನೀಯ. ಬಂಧಿಸಲಾದ ರಾಜ್ಯದ ನಮ್ಮ ಎಲ್ಲ ರೈತರನ್ನು ತಕ್ಷಣ ಬಿಡುಗಡೆಗೊಳಿಸಿ ನಾಳೆ ದೆಹಲಿಯ ಜಂತರ್ ಮಂತರ್ ನಲ್ಲಿ ನಡೆಯಲಿರುವ ಪ್ರತಿಭಟನೆಯಲ್ಲಿ ಭಾಗವಹಿಸಿಕೊಳ್ಳಲು ಕಳಿಸಿಕೊಡಬೇಕು ಎಂದು‌ ಮಧ್ಯಪ್ರದೇಶ ಸರ್ಕಾರವನ್ನು ಒತ್ತಾಯಿಸುತ್ತಿದ್ದೇನೆ. ಬಂಧಿಸಿರುವುದು ಮಧ್ಯಪ್ರದೇಶದ ಸರ್ಕಾರವಾದರೂ ಈ  ದುಷ್ಕೃತ್ಯದ ಹಿಂದಿನ ಕ್ರಿಮಿನಲ್  ಮೆದುಳು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಬಿಜೆಪಿ ಸರ್ಕಾರ ಎನ್ನುವುದು ಸ್ಪಷ್ಟವಾಗಿದೆ.

ದಿಲ್ಲಿ ಚಲೋಗೆ ಹೊರಟ ಕರ್ನಾಟಕ ರೈತರ ಬಂಧಿಸಿದ ಭೋಪಾಲ್ ಪೊಲೀಸರು; ಕುರುಬೂರು ಶಾಂತಕುಮಾರ್ ಪತ್ನಿ ತಲೆಗೆ ಗಾಯ!

ಈ ರೀತಿ ಬಂಧಿಸಿ, ಬೆದರಿಸಿ ರೈತರ ಹೋರಾಟವನ್ನು ಹತ್ತಿಕ್ಕಲಾಗದು. ಇಂತಹ ದಬ್ಬಾಳಿಕೆಯಿಂದ ಇನ್ನಷ್ಟು ರೈತರು ಬೀದಿಗಿಳಿಯಬಹುದೇ ಹೊರತು ಮಣ್ಣಿನ ಮಕ್ಕಳ ಹೋರಾಟ ನಿಲ್ಲದು. ಶಾಂತಿ-ಸುವ್ಯವಸ್ಥೆಯ‌ ಕಾಳಜಿಯನ್ನು ಕೇಂದ್ರ ಸರ್ಕಾರ ಹೊಂದಿದ್ದರೆ ತಕ್ಷಣ ರೈತರ ಬೇಡಿಕೆಗಳನ್ನು ಈಡೇರಿಸಿ ಸಮಸ್ಯೆ ಬಗೆಹರಿಸಬೇಕೇ ಹೊರತು ಈ ರೀತಿ ದಮನ-ದೌರ್ಜನ್ಯ ನಡೆಸಿ ರೈತರ ಬಾಯಿ ಮುಚ್ಚಿಸುವುದಲ್ಲ. ಕೇಂದ್ರದಲ್ಲಿ ಇರಲಿ, ರಾಜ್ಯಗಳಲ್ಲಿ ಇರಲಿ‌ ಬಿಜೆಪಿ ಕೈಗೆ ಅಧಿಕಾರ ಬಂದ ಕೂಡಲೇ ಅವರು ಮೊದಲು ದಂಡ ಪ್ರಯೋಗ ಮಾಡುವುದು ಅನ್ನದಾತರ ಮೇಲೆ‌ ಎನ್ನುವುದಕ್ಕೆ ಇತಿಹಾಸ ಸಾಕ್ಷಿ. 

ಕರ್ನಾಟಕದಲ್ಲಿ ಮೊದಲ ಬಾರಿ ಅಧಿಕಾರಕ್ಕೆ ಬಂದಿದ್ದ ಬಿಜೆಪಿ ಗೊಬ್ಬರ ಕೇಳಿದ್ದ ರೈತರನ್ನು ನಿರ್ದಯವಾಗಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಸರ್ಕಾರ ಗುಂಡಿಕ್ಕಿ ಕೊಂದಿತ್ತು. ಕೇಂದ್ರದ ನರೇಂದ್ರ ಮೋದಿಯವರ ಸರ್ಕಾರ ದೆಹಲಿ ಮತ್ತು ಉತ್ತರಪ್ರದೇಶಲ್ಲಿ ಪ್ರತಿಭಟನಾನಿರತ ರೈತರ ಮೇಲೆ ನಡೆಸಿದ್ದ ದೌರ್ಜನ್ಯದಲ್ಲಿ ಹಲವಾರು ರೈತರು ಸಾವಿಗೀಡಾಗಿದ್ದರು. ನರೇಂದ್ರ ಮೋದಿ ಅವರ ಸರ್ಕಾರದ ಈಗಿನ ಕ್ರಮಗಳನ್ನು ನೋಡಿದರೆ ರೈತರನ್ನು ಬೆದರಿಸಿ ತಲೆ ಎತ್ತದಂತೆ‌ ಮಾಡುವುದೇ ಮುಖ್ಯ ಉದ್ದೇಶವಿದ್ದಂತೆ ಕಾಣುತ್ತಿದೆ' ಎಂದು ಆರೋಪ ಮಾಡಿದ್ದಾರೆ.

ಸಾಲ ಮನ್ನಾಕ್ಕೆ ಸಿಎಂಗೆ ರೈತರ ಬೇಡಿಕೆ: ದೇಶದಲ್ಲೇ ಮಾದರಿಯಾಗುವಂತೆ ಕೃಷಿಕರಿಗೆ ಯೋಜನೆ ತನ್ನಿ!

ಕೇಂದ್ರ ಸರ್ಕಾರದ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ದೆಹಲಿಯಲ್ಲಿ ರೈತರು ನಡೆಸುತ್ತಿರುವ ಡೆಲ್ಲಿ ಚಲೋ ಪ್ರತಿಭಟನೆಗೆ ಹೊರಟಿದ್ದ ಕರ್ನಾಟಕದ ರೈತರ ಗುಂಪಿನ ಮೇಲೆ ಮಧ್ಯಪ್ರದೇಶ ದಾಳಿ ಮಾಡಿ ಅವರನ್ನು ಬಂಧಿಸಿದ್ದಾರೆ. ಪೊಲೀಸರ ರಾಕ್ಷಸಿ ಕೃತ್ಯದಿಂದ ರೈತ ಮಹಿಳೆಯರಿಗೆ ಗಾಯಗಳಾಗಿದ್ದು, ಇದರಲ್ಲಿ ಕರ್ನಾಟಕ ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಕುರುಬೂರು ಶಾಂತಕುಮಾರ್ ಅವರ ಪತ್ನಿ ಪದ್ಮಾ ಶಾಂತಕುಮಾರ್ ಅವರ ಪತ್ನಿ ತಲೆಗೆ ಗಾಯವಾಗಿದೆ. ಈ ಕುರಿತು ರೈತರು ಪತ್ರಿಕಾ ಪ್ರಕಟಣೆಯ ಮೂಲಕ ಮಧ್ಯಪ್ರದೇಶ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು.

Latest Videos
Follow Us:
Download App:
  • android
  • ios