ಬೆಂಗಳೂರು (ಮೇ.02):  ರಾಜಕೀಯದಲ್ಲಿ ಹಲವು ನೋವು-ನಲಿವು ಕಂಡಿರುವ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಅವರ ಪಯಣ ನಮ್ಮಂತಹ ಯುವ ಪೀಳಿಗೆಗೆ ದಾರಿ ದೀಪ ಎಂದು ಜೆಡಿಎಸ್‌ ಯುವ ಘಟಕ ಅಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ಅಭಿಪ್ರಾಯಪಟ್ಟಿದ್ದಾರೆ.

ಈ ಕುರಿತು ಟ್ವಿಟ್‌ ಮಾಡಿರುವ ಅವರು, ಜೂ.1ರ ದಿನ ಮಣ್ಣಿನ ಮಗ, ಕರ್ನಾಟಕದ ಹೆಮ್ಮೆಯ ಸುಪುತ್ರ ಎಚ್‌.ಡಿ.ದೇವೇಗೌಡ ಅವರು ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿದ ದಿನ. ಭರ್ತಿ 25 ವರ್ಷ ಪೂರೈಸಿ ಬೆಳ್ಳಿ ಹಬ್ಬದ ಸಂಭ್ರಮದಲ್ಲಿದ್ದೇವೆ. ಅ​ಧಿಕಾರದ ಅವ​ಧಿ ಸಣ್ಣದಾದರೂ ಮಾಡಿದ ಸಾಧನೆ ದೊಡ್ಡದು. ಇಡೀ ದೇಶದಲ್ಲಿ ಐಟಿ ಉದ್ಯಮಕ್ಕೆ ಹತ್ತು ವರ್ಷಗಳ ಕಾಲ ತೆರಿಗೆ ರಜೆ, ಬಾಂಗ್ಲಾದೇಶ ಹಾಗೂ ಭಾರತದ ನಡುವಿನ ಗಂಗಾ ನದಿ ವಿವಾದ ಬಗೆಹರಿಸಿದ್ದು, ಈಶಾನ್ಯದ ಏಳು ರಾಜ್ಯಗಳಿಗೆ ಭೇಟಿ ನೀಡಿ ಒಟ್ಟು 6 ಸಾವಿರ ಕೋಟಿ ರು. ಪ್ಯಾಕೇಜ್‌ ಘೋಷಣೆ ಮಾಡಿದ್ದರು ಎಂದಿದ್ದಾರೆ.

ಮೊಮ್ಮಗ ನಿಖಿಲ್ ಕೃಷಿ ಕಾರ್ಯ ಮೆಚ್ಚಿ ಭೇಷ್ ಎಂದ ದೇವೇಗೌಡರು!

ಏರ್‌ಪೋರ್ಟ್‌, ರೈಲ್ವೆ ಯೋಜನೆ ರಾಷ್ಟ್ರೀಯ ಹೆದ್ದಾರಿಗಳು, ವಿಶ್ವವಿದ್ಯಾಲಯಗಳನ್ನು ನಿರ್ಮಿಸಲು ವಿಶೇಷ ಅನುದಾನ ಮಂಜೂರು, ಕಾಶ್ಮೀರಕ್ಕೆ ಐದು ಬಾರಿ ಭೇಟಿ ನೀಡಿ 3000 ಕೋಟಿ ರು. ಪ್ಯಾಕೇಜ್‌, ನೆನೆಗುದಿಗೆ ಬಿದ್ದಿದ್ದ ದೆಹಲಿ ಮೆಟ್ರೋಗೆ ಚಾಲನೆ, ನಾಗಾ ಬಂಡುಕೋರರೊಂದಿಗೆ ಶಾಂತಿ ಮಾತುಕತೆ ನಡೆಸಿ ಯುದ್ಧವಿರಾಮ ಘೋಷಣೆ ಮಾಡಿದ್ದರು ಎಂದು ಹೇಳಿದ್ದಾರೆ.

 

ಇನ್ನೂ ತವರಿಗೂ ದೇವೇಗೌಡರ ಕೊಡುಗೆ ಅಷ್ಟಿಷ್ಟಲ್ಲ. ರೈಲ್ವೆ, ನೀರಾವರಿ, ವಿದ್ಯುತ್‌, ಕೈಗಾರಿಕೆ ಸೇರಿದಂತೆ ರಾಜ್ಯದ ಸಮಗ್ರ ಅಭಿವೃದ್ಧಿಗೆ ಸಾಕಷ್ಟುಕೊಡುಗೆಗಳನ್ನು ನೀಡಿದ್ದಾರೆ ಎಂದು ತಿಳಿಸಿದ್ದಾರೆ.