Asianet Suvarna News Asianet Suvarna News

ರಾಜ್ಯಸಭಾ ಎಲೆಕ್ಷನ್: ಬಿಜೆಪಿ ಅಭ್ಯರ್ಥಿ ಪ್ರಕಟವಾಗುತ್ತಿದ್ದಂತೆಯೇ ಅಖಾಡಕ್ಕಿಳಿದ ದೇವೇಗೌಡ್ರು...!

ಪಕ್ಷದ ನಾಯಕರ ಒತ್ತಾಯಕ್ಕೆ ಮಣಿದು ಕೊನೆಗೂ ಜೆಡಿಎಸ್‌ ವರಿಷ್ಠ ಎಚ್.ಡಿ. ದೇವೇಗೌಡ ಅವರು ರಾಜ್ಯಸಭಾ ಅಖಾಡಕ್ಕಿಳಿಯಲು ಮುಂದಾಗಿದ್ದು, ನಾಮಪತ್ರ ಸಲ್ಲಿಕೆಗೆ ಮುಹೂರ್ತ ಫಿಕ್ಸ್ ಆಗಿದೆ.

devegowda to file nomination on June 9th To Rajya Sabha Elections Says HDK
Author
Bengaluru, First Published Jun 8, 2020, 2:17 PM IST

ಬೆಂಗಳೂರು, (ಜೂನ್,08): ಪ್ರಭಾವಿ ಲಿಂಗಾಯತ ನಾಯಕರಾದ ಹಾಲಿ ರಾಜ್ಯಸಭಾ ಸದಸ್ಯ ಪ್ರಭಾಕರ ಕೋರೆ ಹಾಗೂ ಮಾಜಿ ಸಂಸದ ರಮೇಶ್ ಕತ್ತಿ ಹೆಸರು ಬದಿಗಿಟ್ಟು ಬಿಜೆಪಿ ಹೈಕಮಾಂಡ್, ಕರ್ನಾಟಕ ರಾಜ್ಯಸಭಾ ಚುನಾವಣೆಗೆ ಈರಣ್ಣ ಕಡಾಡಿ ಮತ್ತು ಅಶೋಕ್ ಗಸ್ತಿ ಎನ್ನುವ ಸಾಮಾನ್ಯ ಕಾರ್ಯರ್ತರಿಗೆ ಟಿಕೆಟ್ ನೀಡಿದೆ.

ಇದು ರಾಜ್ಯ ಬಿಜೆಪಿಯಲ್ಲಿ ಅಚ್ಚರಿಗೆ ಕಾರಣವಾಗಿದೆ. ಇನ್ನು ಮತ್ತೊಂದೆಡೆ ಎಚ್.ಡಿ. ದೇವೇಗೌಡ ಸಹ ರಾಜ್ಯಸಭಾ ಚುನಾವಣೆಗೆ ಸ್ಪರ್ಧಿಸಲು ಗ್ರೀನ್ ಸಿಗ್ನಲ್ ನೀಡಿದ್ದಾರೆ. 

ರಾಜ್ಯಸಭೆ ಚುನಾವಣೆ: ಬಿಜೆಪಿಯಿಂದ ಅನಿರೀಕ್ಷಿತ ಅಭ್ಯರ್ಥಿಗಳ ಘೋಷಣೆ!

ಈ ಬಗ್ಗೆ ಟ್ವೀಟ್ ಮಾಡಿರುವ ಎಚ್‌.ಡಿ.ಕುಮಾರಸ್ವಾಮಿ, ನಮ್ಮ ಪಕ್ಷದ ಶಾಸಕರು, ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ರಾಷ್ಟ್ರದ ಹಲವು ನಾಯಕರ ಮನವಿಯ ಮೇರೆಗೆ ಮಾಜಿ ಪ್ರಧಾನಿ ಹೆಚ್​.ಡಿ ದೇವೇಗೌಡ ಅವರು ರಾಜ್ಯಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ನಿರ್ಧರಿಸಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಎಚ್‌​.ಡಿ ಕುಮಾರಸ್ವಾಮಿ ಖಚಿತಪಡಿಸಿದ್ದಾರೆ.

ನಾಳೆ ಅಂದ್ರೆ ಜೂನ್ 09ರಂದು ದೇವೇಗೌಡ್ರು ನಾಮಪತ್ರ ಸಲ್ಲಿಕೆ ಮಾಡುವರು. ಎಲ್ಲರ ಒಮ್ಮತದ ಅಭಿಪ್ರಾಯಕ್ಕೆ ಸಮ್ಮತಿಸಿದ ದೇವೇಗೌಡರಿಗೆ ಧನ್ಯವಾದಗಳು ತಿಳಿಸಿದ್ದಾರೆ.

ರಾಜಕೀಯದಲ್ಲಿ ಜನರಿಂದಲೇ ಗೆಲುವು ಸೋಲುಗಳನ್ನು ಕಂಡಿರುವ, ಜನರಿಂದಲೇ ದೇಶದ ಅತ್ಯುನ್ನತ ಸ್ಥಾನಕ್ಕೇರಿದ್ದ ಜನನಾಯಕ ದೇವೇಗೌಡರನ್ನು ರಾಜ್ಯಸಭೆ ಪ್ರವೇಶಿಸುವಂತೆ ಮನವೊಲಿಸುವುದು ಸುಲಭದ ಕೆಲಸವಾಗಿರಲಿಲ್ಲ. ಆದರೆ, ಎಲ್ಲರ ಆಶೋತ್ತರಗಳಿಗೆ ಪ್ರೀತಿಪೂರ್ವಕವಾಗಿ ಮಣಿದಿದ್ದಾರೆ. ರಾಜ್ಯಸಭೆಯಲ್ಲಿ ದೇವೇಗೌಡರು ರಾಜ್ಯದ ಅಗ್ರ ಪ್ರತಿನಿಧಿಯಾಗಲಿದ್ದಾರೆ ಎಂದು ಹೆಚ್​.ಡಿ ಕುಮಾರಸ್ವಾಮಿ ಅವರು ಟ್ವಿಟರ್​ನಲ್ಲಿ ಬರೆದುಕೊಂಡಿದ್ದಾರೆ.

ಇದೇ ಜೂನ್ 19ರಂದು ಕರ್ನಾಟಕದ ನಾಲ್ಕು ಸ್ಥಾನಗಳಿಗೆ ಚುನಾವಣೆ ನಡೆಯಲಿದ್ದು, ಅಂದೇ ಫಲಿತಾಂಶ ಪ್ರಕಟವಾಗಲಿದೆ. ಈಗಾಗಲೇ ಕಾಂಗ್ರೆಸ್‌ನಿಂದ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಅಖಾಡದಲ್ಲಿದ್ದಾರೆ. ಇದೀಗ ದೇವೇಗೌಡ್ರು ಸಹ ತಮ್ಮ ಪಕ್ಷದ ಜತೆಗೆ ಕಾಂಗ್ರೆಸ್ ಬೆಂಬಲದೊಂದಿಗೆ ಸ್ಪರ್ಧಿಸಲು ಮುಂದಾಗಿದ್ದಾರೆ.

Follow Us:
Download App:
  • android
  • ios