ಡಿ.5ರ ಮುಹೂರ್ತ ಫಿಕ್ಸ್: ದೇವೇಂದ್ರ ಫಡ್ನವೀಸ್ ಮಹಾರಾಷ್ಟ್ರ ಸಿಎಂ?

ಸಿಎಂ ಸ್ಥಾನ ಯಾವ ಪಕ್ಷದ ಪಾಲಾಗಲಿದೆ ಎಂಬ ಕುತೂಹಲಗಳಿಗೆ ತೆರೆ ಎಳೆದಿದ್ದಾರೆ. ಹೀಗಾಗಿ ಬಿಜೆಪಿಯಲ್ಲಿ ಸಿಎಂ ಹುದ್ದೆ ರೇಸ್ ನಲ್ಲಿ ಮುಂಚೂಣಿಯಲ್ಲಿದ್ದ ದೇವೇಂದ್ರ ಫಡ್ನವೀಸ್ ಅವರೇ ನೂತನ ಮುಖ್ಯಮಂತ್ರಿಯಾಗುವ ಸಾಧ್ಯತೆ ನಿಚ್ಚಳವಾಗಿದೆ. 
 

Devendra Fadnavis is likely to become the new Chief Minister of Maharashtra grg

ಮುಂಬೈ(ಡಿ.01):  ಫಲಿತಾಂಶ ಘೋಷಣೆಯಾಗಿ ಎರಡು ವಾರ ಕಳೆದರೂ ಕಗ್ಗಂಟಾಗಿಯೇ ಉಳಿದಿದ್ದ ಮಹಾರಾಷ್ಟ್ರ ಸರ್ಕಾರ ಕೊನೆಗೂ ಮುಹೂರ್ತ ಕೂಡಿ ಬಂದಿದೆ. ಡಿ.5ರಂದು ಸಂಜೆ 5 ಗಂಟೆಗೆ ಮುಂಬೈನ ಆಜಾದ್ ಮೈದಾನದಲ್ಲಿ ಮಹಾಯುತಿ ಮೈತ್ರಿಕೂಟದ ನೂತನ ಸರ್ಕಾರ ರಚನೆಯಾಗಲಿದೆ. ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿಯಾಗಿ ಎನ್‌ಡಿಎ ಮೈತ್ರಿಕೂಟದ ಪ್ರಮುಖ ನಾಯಕರು ಭಾಗಿಯಾಗಲಿದ್ದಾರೆ ಎಂದು ಮಹಾರಾಷ್ಟ್ರ ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ಚಂದ್ರಶೇಖರ್ ಬಾವನ್ ಕುಲೆ ತಿಳಿಸಿದ್ದಾರೆ.

ಈ ನಡುವೆ ನೂತನ ಸರ್ಕಾರದಲ್ಲಿ ಬಿಜೆಪಿ ನಾಯಕರು ಮುಖ್ಯಮಂತ್ರಿಯಾಗಲಿದ್ದಾರೆ, ಮೈತ್ರಿಕೂಟದ ಶಿವಸೇನೆ ಮತ್ತು ಎನ್‌ಸಿಪಿಗೆ ಉಪಮುಖ್ಯಮಂತ್ರಿ ಪಟ್ಟ ಸಿಗಲಿದೆ ಎಂದು ಎನ್‌ಸಿಪಿ ನಾಯಕ ಅಜಿತ್ ಪವಾರ್ ಮಾಹಿತಿ ನೀಡಿದ್ದಾರೆ. ಈ ಮೂಲಕ ಸಿಎಂ ಸ್ಥಾನ ಯಾವ ಪಕ್ಷದ ಪಾಲಾಗಲಿದೆ ಎಂಬ ಕುತೂಹಲಗಳಿಗೆ ತೆರೆ ಎಳೆದಿದ್ದಾರೆ. ಹೀಗಾಗಿ ಬಿಜೆಪಿಯಲ್ಲಿ ಸಿಎಂ ಹುದ್ದೆ ರೇಸ್ ನಲ್ಲಿ ಮುಂಚೂಣಿಯಲ್ಲಿದ್ದ ದೇವೇಂದ್ರ ಫಡ್ನವೀಸ್ ಅವರೇ ನೂತನ ಮುಖ್ಯಮಂತ್ರಿಯಾಗುವ ಸಾಧ್ಯತೆ ನಿಚ್ಚಳವಾಗಿದೆ. 

ವಕ್ಫ್‌ ಬೋರ್ಡ್‌ಗೆ 10 ಕೋಟಿ ಅನುದಾನ ಮೀಸಲಿಟ್ಟ ಮಹಾರಾಷ್ಟ್ರ ಸರ್ಕಾರ, ವಿಎಚ್‌ಪಿ ವಿರೋಧ!

ಇನ್ನು ಎನ್‌ಸಿಪಿಯಿಂದ ಅಜಿತ್ ಪವಾರ್‌ಡಿಸಿಎಂ ಪಟ್ಟ ಏರುವುದು ಖಚಿತವಾಗಿದೆ. ಆದರೆ ಶಿವಸೇನೆಯಿಂದ ಮಾಜಿ ಸಿಎಂ ಏಕನಾಥ್ ಶಿಂಧೆ ಡಿಸಿಎಂ ಆಗುವ ಕುರಿತು ಪಕ್ಷ ಇನ್ನೂ ಯಾವುದೇ ಸುಳಿವು ನೀಡಿಲ್ಲ. ಹೀಗಾಗಿ ಆ ಕುರಿತ ಕುತೂಹಲ ಹಾಗೆಯೇ ಉಳಿದಿದೆ. 

ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯ ಫಲಿತಾಂಶ ನ.23ರಂದೇ ಪ್ರಕಟವಾಗಿತ್ತು. 288ರ ಪೈಕಿ 230 ಸ್ಥಾನ ಗೆದ್ದಿರುವ ಬಿಜೆಪಿ, ಶಿವಸೇನೆ (ಶಿಂಧೆ ಬಣ), ಎನ್‌ಸಿಪಿ (ಅಜಿತ್ ಪವಾರ್) ಒಳಗೊಂಡ ಮಹಾಯುತಿ ಮೈತ್ರಿಕೂಟ ಸರ್ಕಾರ ರಚಿಸುವುದು ಖಚಿತವಾಗಿತ್ತು. ಆದರೆ ಸಿಎಂ ಪಟ್ಟ ಕಳೆದುಕೊಂಡ ಮಾಜಿ ಸಿಎಂ ಏಕನಾಥ್ ಶಿಂಧೆ, ಡಿಸಿಎಂ ಪಟ್ಟ ವಹಿಸಿಕೊಳ್ಳುವ ಬಗ್ಗೆ ತಮ್ಮ ನಿರ್ಧಾರ ಪ್ರಕಟಿಸದ ಹಿನ್ನೆಲೆಯಲ್ಲಿ ಸರ್ಕಾರ ರಚನೆ ವಿಳಂಬವಾಗಿತ್ತು. ಜೊತೆಗೆ ಡಿಸಿಎಂ ಪಟ್ಟ ಒಪ್ಪಿದರೆ ಗೃಹ ಸೇರಿದಂತೆ ಕೆಲವೊಂದು ಮಹತ್ವದ ಖಾತೆಗೆ ತಮಗೆ ನೀಡಬೇಕು ಎಂದು ಪಟ್ಟುಹಿಡಿದಿದ್ದಾರೆ ಎನ್ನಲಾಗಿದೆ.

ಸಿಎಂ ತೀವ್ರ ಅಸ್ವಸ್ಥ

ಶುಕ್ರವಾರದ ಮಹಾಯುತಿ ಕೂಟದ ಸಭೆ ದಿಢೀ‌ರ್ ರದ್ದುಗೊಳಿಸಿ ಸತಾರಾದಲ್ಲಿನ ತಮ್ಮ ಸ್ವಗ್ರಾಮಕ್ಕೆ ತೆರಳಿದ್ದ ಮುಖ್ಯಮಂತ್ರಿ ಏಕನಾಥ್ ಶಿಂಧೆ ಶನಿವಾರ ತೀವ್ರ ಅನಾರೋಗ್ಯಕ್ಕೆ ತುತ್ತಾಗಿದ್ದಾರೆ. ದೇರ್ ನಲ್ಲಿರುವ ಅವರ ಮನೆಗೇ ವೈದ್ಯರ ತಂಡ ಧಾವಿಸಿ ಚಿಕಿತ್ಸೆ ನೀಡಿದೆ. ಶಿಂಧೆ ಯಾರನ್ನೂ ಭೇಟಿಯಾ ಗುತ್ತಿಲ್ಲ ಎಂದು ಮೂಲಗಳು ತಿಳಿಸಿವೆ.

ಮಹಾರಾಷ್ಟ್ರ ಸೋತ ಬೆನ್ನಲ್ಲೇ ಕಾಂಗ್ರೆಸ್ ವಿರುದ್ಧ ಮೈತ್ರಿ ಪಕ್ಷ ಗರಂ, ಇಂಡಿಯಾ ಒಕ್ಕೂಟದಲ್ಲಿ ಬಿರುಕು!

ಮತ್ತೆ ಬ್ಯಾಲೆಟ್ ಪೇಪರ್‌ ಪದ್ಧತಿಯನ್ನೇ ಜಾರಿಗೊಳಿಸಿ: ಇವಿಎಂ ವಿರುದ್ಧ ಆಘಾಡಿ 3 ಹಂತದ ಮಹಾಸಮರ

ಮುಂಬೈ: ಮಹಾರಾಷ್ಟ್ರ ವಿಧಾನಸಭೆಯಲ್ಲಿ ಸೋಲು ಅನುಭವಿಸಿದ ಮಹಾ ವಿಕಾಸ ಅಘಾಡಿ (ಎಂವಿಎ), ತನ್ನ ಪರಾಜಿತ ಅಭ್ಯರ್ಥಿಗಳಿಗೆ ವಿವಿಪ್ಯಾಟ್ ಮತಚೀಟಿ ಪರಿಶೀಲನೆಗೆ ಕೋರಿಕೆ ಸಲ್ಲಿಸಲು ಸೂಚಿಸಿದೆ. ಈ ಮೂಲಕ ಮತ ಎಣಿಕೆಯಲ್ಲಿ ಏನಾದರೂ ವ್ಯತ್ಯಾಸ ಮಾಡಲಾಗಿದೆಯೇ ಎಂಬುದನ್ನು ಅರಿಯಲು ಅದು ಉದ್ದೇಶಿಸಿದೆ. 

ಇದೇ ವೇಳೆ, ಇವಿಎಂ ವಿರುದ್ಧ ಪ್ರತಿಭಟನೆ ನಡೆಸಲು ಅದು ಉದ್ದೇಶಿಸಿದೆ ಹಾಗೂ ಮತ್ತೆ ಬ್ಯಾಲೆಟ್ ಪೇಪರ್‌ ಪದ್ಧತಿಯನ್ನೇ ಜಾರಿಗೊಳಿಸಿ ಎಂದು ಕೋರ್ಟ್‌ಗೆ ಹೋಗಲು ಮುಂದಾಗಿದೆ ಎಂದು ಹೇಳಿದೆ. ಎಂವಿಎ ನಾಯಕರಾದ ಶಿವಸೇನೆ (ಯುಬಿಟಿ) ನಾಯಕ ಉದ್ದವ ಠಾಕ್ರೆ, ಎನ್‌ಸಿಪಿ (ಎಸ್ಟಿ) ನಾಯಕ ಶರದ್ ಪವಾರ್ ಅವರು ಪರಾಜಿತ ಅಭ್ಯರ್ಥಿಗಳನ್ನು ಭೇಟಿಯಾದರು. ಆಗ ಪರಾಜಿತರು, 'ಇವಿಎಂ ತಿರುಚಿದ್ದೇ ನಮ್ಮ ಸೋಲಿಗೆ ಕಾರಣ' ಎಂದು ಸಂದೇಹ ವ್ಯಕ್ತಪಡಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಠಾಕ್ರೆ ಹಾಗೂ ಪವಾರ್, 'ಪರಾಜಿತರು ವಿವಿಪ್ಯಾಟ್ (ಮತ ತಾಳೆ ಯಂತ್ರ) ಪರಿಶೀಲನೆಗೆ ಅರ್ಜಿ ಹಾಕಿ ಎಂದು ಸೂಚಿಸಿದರು' ಎಂದು ಕಾಂಗ್ರೆಸ್ ಪರಾಜಿತ ಅಭ್ಯರ್ಥಿ ಆರಿಫ್ ನಸೀಂ ಖಾನ್ ಹೇಳಿದ್ದರು. 

Latest Videos
Follow Us:
Download App:
  • android
  • ios