Asianet Suvarna News Asianet Suvarna News

ಜಾತಿಗಣತಿ ವರದಿ ಸ್ವೀಕರಿಸಿದ ನಿತೀಶ್ ಕುಮಾರ್ ಸಮಾಜ ಒಡೆದಿದ್ದಾರಾ?: ಸಿದ್ದರಾಮಯ್ಯ

ಜಾತಿ ಜನಗಣತಿ ವರದಿ ಸಲ್ಲಿಸುವ ಮುನ್ನವೇ ಚರ್ಚೆ ಶುರುವಾಗಿದೆ. ವರದಿಯಲ್ಲಿ ಏನಿದೆ ಎಂದು ಅದನ್ನು ಬೇಡ ಎನ್ನುವವರಿಗೂ ಗೊತ್ತಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಾತಿ ಜನಗಣತಿ ವರದಿ ವಿರೋಧಿಸುವವರಿಗೆ ಪರೋಕ್ಷವಾಗಿ ತಿವಿದರು. 

Did Nitish Kumar divide the society after receiving the caste census report Says Siddaramaiah gvd
Author
First Published Nov 24, 2023, 4:00 AM IST

ಬಾಗಲಕೋಟೆ (ನ.24): ಜಾತಿ ಜನಗಣತಿ ವರದಿ ಸಲ್ಲಿಸುವ ಮುನ್ನವೇ ಚರ್ಚೆ ಶುರುವಾಗಿದೆ. ವರದಿಯಲ್ಲಿ ಏನಿದೆ ಎಂದು ಅದನ್ನು ಬೇಡ ಎನ್ನುವವರಿಗೂ ಗೊತ್ತಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಾತಿ ಜನಗಣತಿ ವರದಿ ವಿರೋಧಿಸುವವರಿಗೆ ಪರೋಕ್ಷವಾಗಿ ತಿವಿದರು. ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಊಹೆಗಳ ಮೇಲೆ ಮಾತನಾಡುವುದು ಒಳ್ಳೆಯ ಬೆಳವಣಿಗೆಯಲ್ಲ. ಹಾಗಾಗಿ ವರದಿ ಸಲ್ಲಿಕೆಯಾದ ನಂತರ ನೋಡೋಣ ಎಂದರು. ಇನ್ನು, ಜಾತಿ ಜನಗಣತಿ ಮೂಲ ವರದಿ ಕಳೆದಿದೆ ಎಂಬ ಹಾಲಿ ಆಯೋಗದ ಅಧ್ಯಕ್ಷ ಜಯಯಪ್ರಕಾಶ್ ಹೆಗ್ಡೆ ಹೇಳಿಕೆ ಪ್ರತಿಕ್ರಿಯಿಸಿ ಅವರನ್ನು ಕರೆದು ಮಾತನಾಡುತ್ತೇನೆ ಎಂದರು.

ಸತ್ಯಾಂಶ ಇರಲಿ: ಜಾತಿ ಜನಗಣತಿ ಸಮಾಜವನ್ನು ಒಡೆಯುತ್ತದೆ ಎಂದಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ಅವರಿಗೆ ವರದಿಯಲ್ಲಿ ಏನಿದೆ ಎಂದು ಗೊತ್ತಿದೆಯೇ? ಯಾರೇ ಆಗಲಿ ವಿಷಯ ಗೊತ್ತಿಲ್ಲದೆ ಮಾತನಾಡಬಾರದು. ನಿತೀಶ್ ಕುಮಾರ್ ಬಿಹಾರದಲ್ಲಿ ಜಾತಿಗಣತಿ ವರದಿ ಸ್ವೀಕರಿಸಿದ್ದಾರೆ. ಸಮಾಜ ಒಡೆದುಬಿಟ್ಟಿದ್ದಾರೆ ಎಂದರೆ ಹೇಗೆ? ಯಾವುದೇ ಹೇಳಿಕೆ ನೀಡುವಾಗ ಅದು ಸತ್ಯಾಂಶದ ಮೇಲೆ ಅವಲಂಬಿತವಾಗಿರಬೇಕು ಎಂದರು.

ಕಾಂಗ್ರೆಸ್‌ನ ಸುಳ್ಳು ಆಶ್ವಾಸನೆಗೆ ಮರುಳಾಗಬೇಡಿ: ಬಿ.ಎಸ್.ಯಡಿಯೂರಪ್ಪ

ಬಿಜೆಪಿಯಲ್ಲಿ ಬೆಂಕಿ ಎದ್ದಿದೆ: ಅರವಿಂದ್ ಲಿಂಬಾವಳಿ ವಿರೋಧ ಪಕ್ಷದ ನಾಯಕನ ಆಯ್ಕೆ ಹಾಗೂ ಪಕ್ಷದ ಅಧ್ಯಕ್ಷರ ಆಯ್ಕೆ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿರುವ ಕುರಿತು ಮಾತನಾಡಿ, ವಿ.ಸೋಮಣ್ಣ 6ನೇ ತಾರೀಖಿನ ನಂತರ ತಮ್ಮ ಅಭಿಪ್ರಾಯ ತಿಳಿಸುವ ಬಗ್ಗೆ ಹೇಳಿದ್ದಾರೆ. ಬಿಜೆಪಿಯಲ್ಲಿ ವಿಜಯೇಂದ್ರನನ್ನು ಅಧ್ಯಕ್ಷ ಹಾಗೂ ಆರ್.ಅಶೋಕ್ ರನ್ನು ವಿಪಕ್ಷದ ನಾಯಕರಾಗಿ ನೇಮಿಸಿದ ಮೇಲೆ ಬೆಂಕಿ ಹತ್ತಿಕೊಂಡಿದೆ. ಮುಂದೆ ಏನಾಗುತ್ತದೆ ಎಂಬುವುದು ಗೊತ್ತಿಲ್ಲ. ಅದು ಜ್ವಾಲೆಯಾಗುತ್ತದೆಯೋ ಅವರ ಬುಡಕ್ಕೆ ಬೆಂಕಿ ಹತ್ತಿಕೊಳ್ಳುತ್ತದೆಯೋ ಕಾದು ನೋಡಬೇಕಿದೆ. ಸದ್ಯಕ್ಕಂತೂ ಬೆಂಕಿ ಹತ್ತಿಕೊಂಡಿದೆ ಎಂದರು.

ಲೋಕಸಭೆ ಚುನಾವಣೆ ಬಳಿಕ ಕಾಂಗ್ರೆಸ್‌ ಅಧಿಕಾರದಲ್ಲಿರುವುದು ಅನುಮಾನ: ಆರ್‌.ಅಶೋಕ್‌

ಬರೋವ್ರಿಗೆ ಸ್ವಾಗತ: ನಾವು ಯಾರನ್ನೂ ಕಾಂಗ್ರೆಸಿಗೆ ಬನ್ನಿ ಎಂದು ಕರೆಯಲ್ಲ. ಅವರಾಗಿಯೇ ಬಂದರೆ ಸೇರಿಸಿಕೊಳ್ಳುತ್ತೇವೆ. ನಾನು ಯಾರನ್ನೂ ಸಂಪರ್ಕಿಸಿಲ್ಲ. ನನ್ನ ರಾಜಕೀಯ ಜೀವನದಲ್ಲಿ ಯಾರನ್ನೂ ಬನ್ನಿ ಎಂದು ಕರೆಯಲು ಹೋಗಿಲ್ಲ. ಇನ್ನು ನಮ್ಮ ಸಿದ್ಧಾಂತಕ್ಕೆ ಬದ್ಧರಾಗಿರಬೇಕಲ್ಲ. ಬಿಜೆಪಿಯಲ್ಲಿ ಬಹಳ ವರ್ಷ ಇದ್ದವರು ಆ ಸಿದ್ಧಾಂತ ಒಪ್ಪಿರುತ್ತಾರೆ. ಅದನ್ನು ಬಿಟ್ಟು ಕಾಂಗ್ರೆಸ್ ಸಿದ್ಧಾಂತ ಒಪ್ಪಿಕೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

Follow Us:
Download App:
  • android
  • ios