ಪರಮೇಶ್ವರ್ ಮನೆಗೆ ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌ ಡಾ.ಜಿ.ಪರಮೇಶ್ವರ್‌ ಅವರ ನಿವಾಸಕ್ಕೆ ಭೇಟಿ ನೀಡಿ ಚರ್ಚೆ  ನಮ್ಮ ಭೇಟಿಗೆ ರಾಜಕೀಯ ಅರ್ಥ ಕಲ್ಪಿಸುವುದು ಬೇಡ ಎಂದ ಪರಮೇಶ್ವರ್

ಬೆಂಗಳೂರು (ಜೂ.28): ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌ ಅವರು ಭಾನುವಾರ ಮಾಜಿ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್‌ ಅವರ ನಿವಾಸಕ್ಕೆ ಭೇಟಿ ನೀಡಿ ಚರ್ಚೆ ನಡೆಸಿದ್ದಾರೆ.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಪರಮೇಶ್ವರ್‌, ನಮ್ಮ ಭೇಟಿಗೆ ರಾಜಕೀಯ ಅರ್ಥ ಕಲ್ಪಿಸುವುದು ಬೇಡ. ಇದೊಂದು ಸೌಜನ್ಯವಾದ ಭೇಟಿಯಷ್ಟೆ. ಇದಕ್ಕೆ ದೊಡ್ಡ ರಾಜಕೀಯ ಬೆಳವಣಿಗೆ ಎನ್ನುವ ಅರ್ಥ ಕಲ್ಪಿಸುವುದು ಬೇಡ ಎಂದರು. 

ರಾಜ್ಯ, ಕೇಂದ್ರದ್ದು ಶಾಪಗ್ರಸ್ತ ಸರ್ಕಾರ : ದಿನೇಶ್‌ ಗುಂಡೂರಾವ್‌ ವಾಗ್ದಾಳಿ .

ಕೊರೋನಾ ಕುರಿತು ರಾಜ್ಯ ಸರ್ಕಾರ ಹೇಗೆ ನಡೆದುಕೊಳ್ಳುತ್ತಿದೆ, ಮುಂದೆ ಏನು ಮಾಡಬೇಕು ಎನ್ನುವುದರ ಬಗ್ಗೆ ಚರ್ಚೆ ಮಾಡಿದ್ದೇವೆ ಎಂದರು. ಮುಂದಿನ ಮುಖ್ಯಮಂತ್ರಿ ಕುರಿತ ಚರ್ಚೆಗೆ ಪ್ರತಿಕ್ರಿಯಿಸಿದ ಅವರು, ಇವೆಲ್ಲಾ ಮಾಧ್ಯಮಗಳ ಸೃಷ್ಟಿಎಂದಷ್ಟೇ ಹೇಳಿದರು.