ಅಧಿಕಾರ ಹಂಚಿಕೆ ತಡೆಗೆ ಡಿನ್ನರ್‌ ಮೀಟಿಂಗ್ ಅಸ್ತ್ರ?

ದಲಿತ ಮುಖ್ಯಮಂತ್ರಿ ಕಾರ್ಡ್ ಕೂಡ ಮುನ್ನೆಲೆಗೆ ಬರಲಿದೆ ಎಂಬ ಸಂದೇಶ ರವಾನಿಸುವ ಪ್ರಯತ್ನ ಆರಂಭಗೊಂಡಿದೆ. ಇದರ ಭಾಗವಾಗಿಯೇ ಇತ್ತೀಚೆಗೆ ಸಚಿವ ಸತೀಶ್ ಜಾರಕಿಹೊಳಿ ನಿವಾಸದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನೂ ಒಳಗೊಂಡಂತೆ ದಲಿತ ಶಾಸಕರು, ಸಚಿವರ ಡಿನ್ನರ್‌ ಸಭೆ ನಡೆಸಲಾಗಿದೆ.  ಡಿ.ಕೆ.ಶಿವಕುಮಾರ್ ವಿದೇಶ ಪ್ರವಾಸದಲ್ಲಿದ್ದಾಗಲೇ ನಡೆದ ಸಭೆ ತೀವ್ರ ಸಂಚಲನ ಮೂಡಿಸಿತ್ತು

Dinner meeting is a weapon to prevent Power Sharing in Karnataka

ಬೆಂಗಳೂರು(ಜ.10): ಹೈಕಮಾಂಡ್ ಮಟ್ಟದಲ್ಲಿ ಏರ್ಪಟ್ಟಿದೆ ಎನ್ನಲಾದ ಅಧಿಕಾರ ಹಂಚಿಕೆ ಒಪ್ಪಂದ ವಿಚಾರ ಮುಂದು ಮಾಡಿ ಹಾಲಿ ನಾಯಕತ್ವ ಬದಲಾವಣೆ ಪ್ರಶ್ನೆ ಹುಟ್ಟುಹಾಕಿದರೆ ಹಿರಿಯ ಸಚಿವರೇ ತಿರುಗಿ ಬೀಳುತ್ತಾರೆ. ಹೀಗಾಗಿ ಹಾಲಿ ವ್ಯವಸ್ಥೆಯೇ ಮುಂದುವರಿಯಲು ಬಿಡಿ. ಇಲ್ಲವೇ ಬಣ ವಿಪ್ಲವ ಎದುರಿಸಿ... ಇದು ಔತಣ ರಾಜಕಾರಣ, ದಲಿತರ ಸಭೆಯಂಥ ಬೆಳವಣಿಗೆಗಳ ಮೂಲಕ ಹಾಲಿ ನಾಯಕತ್ವ ಮುಂದುವರೆಯ ಬೇಕು ಎಂದು ಪಟ್ಟು ಹಿಡಿದಿರುವ ಕಾಂಗ್ರೆಸ್‌ನ ಬಣ (ಸಿದ್ದರಾಮಯ್ಯ ಬಣ)ವು ಹೈಕಮಾಂಡ್ ಮುಂದೆ ನಡೆದಿರುವ ಒಪ್ಪಂದದ ಪ್ರಕಾರ ಅಕ್ಟೋಬರ್‌ನಲ್ಲಿ ನಾಯಕತ್ವ ಬದಲಾವಣೆ ಖಚಿತ ಎಂದು ಬಿಂಬಿಸುತ್ತಿರುವ (ಡಿ.ಕೆ.ಶಿವಕುಮಾ‌ರ್ ಬಣ) ಬಣಕ್ಕೆ ನೀಡುತ್ತಿರುವ ಸಷ್ಟ ಸಂದೇಶ, ದಲಿತ ನಾಯಕರ ಪ್ರತ್ಯೇಕ ಸಭೆಗಳು ಹಾಗೂ ಬಹಿರಂಗ ಹೇಳಿಕೆಗಳು ಇದಕ್ಕೆ ಪುಷ್ಟಿ ನೀಡುತ್ತಿವೆ. 

ರಾಜ್ಯದಲ್ಲಿ ಪೂರ್ಣಾವಧಿ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅವರೇ ಇರಬೇಕು. ಒಂದೊಮ್ಮೆ ದೆಹಲಿಯ ಹೈಕಮಾಂಡ್ ಮುಂದೆ ನಡೆದಿದೆ ಎನ್ನಲಾದ ಒಪ್ಪಂದದ ಪ್ರಕಾರ ಸಿದ್ದರಾಮಯ್ಯ ಅವರನ್ನು ಬದಲಿಸುವ ಪ್ರಯತ್ನ ನಡೆದರೆ ಅದಕ್ಕೆ ಹಿರಿಯ ಸಚಿವರೇ ಅಡ್ಡಿಯಾಗುತ್ತಾರೆ.

ಔತಣಕೂಟ ರಾಜಕಾರಣ: ಕಾಂಗ್ರೆಸ್‌ನಲ್ಲಿ ಸಚಿವರ ಡಿನ್ನರ್ ಸಭೆ, ಬಿಜೆಪಿಯಲ್ಲೂ ಭೋಜನ ಸಭೆ ಪರ್ವ!

ದಲಿತ ಮುಖ್ಯಮಂತ್ರಿ ಕಾರ್ಡ್ ಕೂಡ ಮುನ್ನೆಲೆಗೆ ಬರಲಿದೆ ಎಂಬ ಸಂದೇಶ ರವಾನಿಸುವ ಪ್ರಯತ್ನ ಆರಂಭಗೊಂಡಿದೆ. ಇದರ ಭಾಗವಾಗಿಯೇ ಇತ್ತೀಚೆಗೆ ಸಚಿವ ಸತೀಶ್ ಜಾರಕಿಹೊಳಿ ನಿವಾಸದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನೂ ಒಳಗೊಂಡಂತೆ ದಲಿತ ಶಾಸಕರು, ಸಚಿವರ ಡಿನ್ನರ್‌ ಸಭೆ ನಡೆಸಲಾಗಿದೆ. 

ಡಿ.ಕೆ.ಶಿವಕುಮಾರ್ ವಿದೇಶ ಪ್ರವಾಸದಲ್ಲಿದ್ದಾಗಲೇ ನಡೆದ ಸಭೆ ತೀವ್ರ ಸಂಚಲನ ಮೂಡಿಸಿತ್ತು. ಇದರ ಬೆನ್ನಲ್ಲೇ ಡಾ.ಜಿ.ಪರಮೇಶ್ವರ್ ನೇತೃತ್ವದಲ್ಲಿ ದಲಿತಶಾಸಕರು, ಸಚಿವರ ಔತಣ ಕೂಟ ಸಭೆ ಆಯೋಜಿಸಲಾಗಿತ್ತು. ಇದರಿಂದ ಎಚ್ಚೆತ್ತ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೈಕಮಾಂಡ್ ಮೂಲಕ ಸೂಚನೆ ನೀಡಿಸಿ ಸಭೆಗೆ ಬ್ರೇಕ್ ಹಾಕಿಸಿದ್ದಾರೆ. ಆದರೂ, ಡಾ.ಜಿ.ಪರಮೇಶ್ವರ್ ಅವರು ಔತಣಕೂಟದ ಸಭೆ ರದ್ದಾಗಿಲ್ಲ. ಬದಲಿಗೆ ಮುಂದೂಡಿದ್ದೇವೆ ಅಷ್ಟೇ. ಸುರ್ಜೇವಾಲಾ ಅವರನ್ನೂ ಸೇರಿಸಿಕೊಂಡು ಸಭೆ ನಡೆಸುತ್ತೇವೆ ಎಂದು ಸ್ಪಷ್ಟಪಡಿಸಿದ್ದಾರೆ. ಜತೆಗೆ ಸತೀಶ್ ಜಾರಕಿಹೊಳಿ, ಡಾ.ಎಚ್.ಸಿ.ಮಹದೇವಪ್ಪ, ಕೆ.ಎನ್. ರಾಜಣ್ಣ ಸೇರಿ ಹಲವರು ಈ ಬಗ್ಗೆ ಪದೇಪದೇ ಹೇಳಿಕೆಗಳನ್ನು ನೀಡುತ್ತಿ ದ್ದಾರೆ. ಅಷ್ಟೇ ಅಲ್ಲ, ದಲಿತರ ಸಭೆ ವಿರುದ್ದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾ‌ರ್ ಹೈಕಮಾಂಡ್‌ಗೆ ದೂರು ನೀಡಿದ್ದಾರೆ ಎಂಬ ವಿಚಾರಕ್ಕೂ ಈ ನಾಯಕರು ನೇರಾನೇರ ತಿರುಗೇಟು ನೀಡತೊಡಗಿದ್ದಾರೆ. ಹಿರಿಯ ಸಚಿವರಾದ ಡಾ.ಜಿ.ಪರಮೇಶ್ವರ್, ಸತೀಶ್ ಜಾರಕಿಹೊಳಿ, ಮಹದೇವಪ್ಪ, ರಾಜಣ್ಣರಂಥವರು ನಾವು ಸಭೆ ನಡೆಸಿದರೆ ಯಾರಿಗೆ ಏಕೆ ಬೇಸರ? ಬೇಸರ ಪಟ್ಟುಕೊಂಡರೂ ನಾವು ಕ್ಯಾರೇ ಎನ್ನುವುದಿಲ್ಲ. ಸಭೆ ಮುಂದೂಡಿಕೆಯಾಗಿದೆ. ಮುಂದೆ ನಡೆದೇ ನಡೆಯುತ್ತದೆ ಎಂದು ತಿರುಗೇಟು ನೀಡಿದಾರೆ

ಪ್ರತಿಕ್ರಿಯಿಸದ ಡಿಕೆಶಿ ಬಣ: 

ಈ ಹೇಳಿಕೆಗಳಿಗೆ ಡಿ.ಕೆ.ಶಿವಕುಮಾರ್ ಬಣದಿಂದ ಯಾವ ಪ್ರತಿಕ್ರಿಯೆಯೂ ಬರುತ್ತಿಲ್ಲ. ಖುದ್ದು ಡಿ.ಕೆ.ಶಿವ ಕುಮಾ‌ರ್ ಅವರು ಟೆಂಪಲ್ ರನ್ ನಡೆಸಿದ್ದರೆ, ಸಾಮಾನ್ಯವಾಗಿ ಇಂಥ ಹೇಳಿಕೆಗಳಿಗೆ ಕಠಿಣ ಪ್ರತಿಕ್ರಿಯೆ ನೀಡುವ ಮಾಜಿ ಸಂಸದಡಿ.ಕೆ.ಸುರೇಶ್ ಅವರೂ ಸಂಯಮದ ಹೇಳಿಕೆಗಳನ್ನು ಮಾತ್ರ ನೀಡುತ್ತಿದ್ದಾರೆ.

ಮಂತ್ರಿಗಳಿಂದ ಸರಣಿ ಔತಣ: ಕಾಂಗ್ರೆಸ್‌ ಬಣ ರಾಜಕಾರಣ ಉಲ್ಬಣ!

ಅಕ್ಟೋಬ‌ರ್ ಕ್ರಾಂತಿಗೆ ಈಗಲೇ ತಾಲೀಮು?

ಬೆಂಗಳೂರು: ರಾಜ್ಯ ಕಾಂಗ್ರೆಸ್‌ನಲ್ಲಿ ಹಾಲಿ ನಡೆದಿರುವ ಬಣ ರಾಜಕಾರಣದ ಮೇಲಾಟ ವಾಸ್ತವವಾಗಿ ಅಕ್ಟೋಬರ್ ಕ್ರಾಂತಿಗೆ ಪೂರ್ವಭಾವಿ ತಾಲೀಮು ಎಂದೇ ವ್ಯಾಖ್ಯಾನಿ ಸಲಾಗುತ್ತಿದೆ. ಔತಣ ಕೂಟ, ದಲಿತ ನಾಯಕರ ಸಭೆ, ಹಿರಿಯ ಸಚಿವರ ಭರ್ಜರಿಹೇಳಿಕೆಗಳೆಲ್ಲವೂ ಈ ಅಕ್ಟೋಬರ್ ಕ್ರಾಂತಿಯ ತಾಲೀಮಿನ ಭಾಗ ಎಂದು ಬಣ್ಣಿಸಲಾಗುತ್ತಿದೆ. ಕಾಂಗ್ರೆಸ್ ವಲಯದಲ್ಲಿ ಪ್ರಚಲಿತದಲ್ಲಿರುವ ವದಂತಿ ಪ್ರಕಾರ, ಪಕ್ಷ ಅಧಿಕಾರಕ್ಕೆ ಬಂದ ಸಂದರ್ಭದಲ್ಲಿ ಹೈಕಮಾಂಡ್ ಮಟ್ಟದಲ್ಲಿ ಒಪ್ಪಂದವೊಂದು ಏರ್ಪಟ್ಟಿದೆ.

ಆ ಒಪ್ಪಂದದ ಪ್ರಕಾರ ಸಿದ್ದರಾಮಯ್ಯ ಅವರು ಸರ್ಕಾರದ ಮೊದಲ ಅವಧಿಗೆ ಅಂದರೆ ಮೊದಲ ಎರಡೂವರೆ ವರ್ಷ ಮುಖ್ಯಮಂತ್ರಿಯಾಗಿರುತ್ತಾರೆ. ನಂತರ ಹಾಲಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರು ಎರಡನೇ ಅವಧಿಗೆ ಅಧಿಕಾರ ವಹಿಸಿಕೊಳ್ಳುತ್ತಾರೆ ಎಂಬುದು. ಈ ವದಂತಿ ನಿಜವೇ ಆಗಿದರೆ ಬಹುತೇಕ ಅಕ್ಟೋಬರ್‌ವೇಳೆಗೆ ಅಧಿಕಾರ ಹಸ್ತಾಂತರ ವೆಂಬ ಬೆಳವಣಿಗೆ ನಡೆಯಬೇಕು. ಇದು ಸಿದ್ದರಾಮಯ್ಯ ಆಪ್ತ ಬಣಕ್ಕೆ ಸುತಾರಾ೦ ಒಪ್ಪಿಗೆಯಿಲ್ಲ. ಹೀಗಾಗಿ ಪ್ರತಿಸ್ಪರ್ಧಿ ಬಣ ಎನಿಸಿರುವ ಡಿ.ಕೆ.ಶಿವಕುಮಾರ್‌ ಆಪ್ತ ಬಣ ಮುಖ್ಯಮಂತ್ರಿ ಹುದ್ದೆ ಕ್ಷೇಮು ಮಾಡುವ ಪ್ರಯತ್ನ ನಡೆಸಿದರೆ ಏನೆಲ್ಲ ಬೆಳವಣಿಗೆಗಳು ನಡೆಯಬಹುದುಎಂಬಸುಳಿವನ್ನು ನೀಡಲು ಔತಣಕೂಟ, ದಲಿತ ಸಭೆ ಹಾಗೂ ಹಿರಿಯ ಸಚಿವರ ಹೇಳಿಕೆಯಂತಹ ಬೆಳವಣಿಗೆ ನಡೆಯುತ್ತಿವೆ ಎನ್ನಲಾಗಿದೆ.

Latest Videos
Follow Us:
Download App:
  • android
  • ios