ಔತಣಕೂಟ ರಾಜಕಾರಣ: ಕಾಂಗ್ರೆಸ್‌ನಲ್ಲಿ ಸಚಿವರ ಡಿನ್ನರ್ ಸಭೆ, ಬಿಜೆಪಿಯಲ್ಲೂ ಭೋಜನ ಸಭೆ ಪರ್ವ!
ಮಾಜಿ ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ಬಿಜೆಪಿಯ ತಟಸ್ಥ ನಾಯಕರು ಸಭೆ ನಡೆಸಿದ ಬೆನ್ನಲ್ಲೇ ಶುಕ್ರವಾರ ರಾಜ್ಯಾಧ್ಯಕ್ಷ ವಿಜಯೇಂದ್ರ ಕೂಡ ಮಾಜಿ ಶಾಸಕರು, ಮಾಜಿ ಸಚಿವರು, ಪರಾಜಿತ ಅಭ್ಯರ್ಥಿಗಳ ಭೋಜನ ಸಭೆ ಆಯೋಜಿಸಿರುವುದು ಚರ್ಚೆಗೆ ಕಾರಣವಾಗಿದೆ.
ಬೆಂಗಳೂರು(ಜ.09): ಕಾಂಗ್ರೆಸ್‌ನಲ್ಲಿ ಸಚಿವರ 'ಡಿನ್ನರ್ ಸಭೆ' ರಾಜಕೀಯ ಸ್ವರೂಪ ಪಡೆದಿರುವಾಗಲೇ, ಅತ್ತ ಬಿಜೆಪಿಯಲ್ಲೂ ಭೋಜನ ಸಭೆ ಪರ್ವ ಆರಂಭವಾಗಿದೆ. ಮಾಜಿ ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ಬಿಜೆಪಿಯ ತಟಸ್ಥ ನಾಯಕರು ಸಭೆ ನಡೆಸಿದ ಬೆನ್ನಲ್ಲೇ ಶುಕ್ರವಾರ ರಾಜ್ಯಾಧ್ಯಕ್ಷ ವಿಜಯೇಂದ್ರ ಕೂಡ ಮಾಜಿ ಶಾಸಕರು, ಮಾಜಿ ಸಚಿವರು, ಪರಾಜಿತ ಅಭ್ಯರ್ಥಿಗಳ ಭೋಜನ ಸಭೆ ಆಯೋಜಿಸಿರುವುದು ಚರ್ಚೆಗೆ ಕಾರಣವಾಗಿದೆ.
ಮಾಜಿ ಸಚಿವರು, ಶಾಸಕರ ವಿಶ್ವಾಸಕ್ಕೆ ಬಿವೈವಿ ತಂತ್ರ
ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಔತಣಕೂಟದ ಭರಾಟೆ ಆರಂಭವಾಗಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರೂ ಇದೀಗ ಪಕ್ಷದ ಮಾಜಿ ಸಚಿವರು ಹಾಗೂ ಶಾಸಕರಿಗೆ ಶುಕ್ರವಾರ ಔತಣಕೂಟ ಆಯೋ ಜಿಸಿದ್ದಾರೆ. ಯತ್ನಾಳ ಬಣದ ಮುಖಂಡರು ಕಳೆದ 3 ದಿನಗಳಿಂದ ದೆಹಲಿಯಲ್ಲಿ ಪಕ್ಷದ ವರಿಷ್ಠರನ್ನು ಭೇಟಿ ಮಾಡಿ ವಿಜಯೇಂದ್ರ ವಿರುದ್ದ ದೂರು ನೀಡಿದ ಬೆನ್ನಲ್ಲೇ ಈ ಔತಣಕೂಟ ಆಯೋಜಿಸಿರುವುದು ಸಹಜ ವಾಗಿಯೇ ಕುತೂಹಲ ಮೂಡಿಸಿದೆ.
ರಾಜ್ಯ ಕಾಂಗ್ರೆಸ್‌ನಲ್ಲಿ ಒಂದು ಊಟದ ಕಥೆ, ಡಿನ್ನರ್ ಪಾರ್ಟಿಗೆ ಬಂಡೆಯಾದ ಡಿಕೆಶಿ!
ವಿಜಯೇಂದ್ರ ನಾಯಕತ್ವದ ವಿರುದ್ಧ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಬಣದ ಮುಖಂಡರು ಅಭಿಪ್ರಾಯ ಸಂಗ್ರಹಿಸಲು ಜಿಲ್ಲಾ ಪ್ರವಾಸ ಆರಂಭಿಸುತ್ತಾರೆ ಎಂಬ ಸುದ್ದಿಯ ಹಿನ್ನೆಲೆಯಲ್ಲಿ ಪಕ್ಷದ ಮಾಜಿ ಸಚಿವರು ಹಾಗೂ ಶಾಸಕರ ವಿಶ್ವಾಸ ಗಳಿಸಲು ಈ ಔತಣಕೂಟ ಏರ್ಪಡಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಆದರೆ, ಪಕ್ಷದ ಸಂಘಟನೆ ಹಾಗೂ ಮುಂಬರುವ ಜಿ.ಪಂ., ತಾ.ಪಂ. ಚುನಾವಣೆಗಳನ್ನು ಎದುರಿಸಲು ಸಜ್ಜಾಗುವ ಉದ್ದೇಶದಿಂದ ಈ ಔತಣಕೂಟ ಕರೆಯ ಲಾಗಿದೆ ಎಂಬ ಸಮಜಾಯಿಷಿಯನ್ನು ವಿಜಯೇಂದ್ರ ಆಪ್ತರು ನೀಡುತ್ತಿದ್ದಾರೆ. ಈ ಔತಣಕೂಟ ಸಂಬಂಧ ಎಲ್ಲ ಮಾಜಿ ಸಚಿವರು, ಮಾಜಿ ಶಾಸಕರು ಹಾಗೂ ಕಳೆದ ಚುನಾವಣೆಯಲ್ಲಿ ಸ್ಪರ್ಧಿಸಿ ಸೋಲು ಅನುಭವಿಸಿದ ಅಭ್ಯರ್ಥಿಗಳಿಗೂ ಆಹ್ವಾನ ತಲುಪಿದೆ.
ಶುಕ್ರವಾರ ಮಧ್ಯಾಹ್ನ ನಗರದ ಹೋಟೆಲ್‌ವೊಂದರಲ್ಲಿ ಭೋಜನಕೂಟ ನಡೆಯಲಿದೆ. ಕಳೆದ ಹಲವು ತಿಂಗಳುಗಳಿಂದ ಮಾಜಿ ಸಚಿವರಾದ ಎಂ.ಪಿ.ರೇಣುಕಾಚಾರ್ಯ, ಕಟ್ಟಾ ಬಿ.ಸಿ.ಪಾಟೀಲ್ ಸುಬ್ರಮಣ್ಯನಾಯ್ಡು, ಮೊದಲಾದವರು ವಿಜಯೇಂದ್ರ ಪರ ಹಾಗೂ ಯತ್ನಾಳ ಬಣದ ವಿರುದ್ಧ ಹಲವು ಸುತ್ತಿನ ಸಭೆಗಳನ್ನು ನಡೆಸಿದ್ದರು. ಯತ್ನಾಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ದೆಹಲಿಗೆ ತೆರಳಿ ವರಿಷ್ಠರನ್ನು ಭೇಟಿ ಮಾಡುವ ಉದ್ದೇಶವನ್ನೂ ಹೊಂದಿದ್ದರು. ಆದರೆ, ಇದಕ್ಕೆ ವಿಜಯೇಂದ್ರ ಅವರೇ ತಡೆಯೊಡ್ಡಿ ಸಂಘಟನಾ ಪರ್ವ ಯಶಸ್ವಿಗೊಳಿಸುವಂತೆ ಮನವಿ ಮಾಡಿದ್ದರು.
ಡಿನ್ನರ್ ಬಿಸಿ ಬೆನ್ನಲ್ಲೇ 13ಕ್ಕೆ ಕಾಂಗ್ರೆಸ್ ಶಾಸಕಾಂಗ ಸಭೆ
ಬೆಂಗಳೂರು: ಕಾಂಗ್ರೆಸ್ ಪಕ್ಷದಲ್ಲಿ ಬಣ ರಾಜಕೀಯ ಜೋರಾಗಿರುವ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜ.13ರಂದು ಶಾಸಕಾಂಗ ಪಕ್ಷದ ಸಭೆ ಕರೆದಿದ್ದು, ಈ ಸಭೆ ತೀವ್ರ ಕುತೂಹಲ ಕೆರಳಿಸಿದೆ.
ಶಾಸಕಾಂಗ ಪಕ್ಷದ ಸದಸ್ಯರಿಗೆ ನೀಡಿರುವ ಸೂಚನೆ ಪ್ರಕಾರ, ಗಾಂಧಿ ಭಾರತ ಕಾಠ್ಯಕ್ರಮ ಅಂಗವಾಗಿ ಜ.21 ರಂದು ಬೆಳಗಾವಿಯಲ್ಲಿ ನಡೆಯಲಿರುವ ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಸಮಾವೇಶ ಯಶಸ್ವಿಗೊಳಿಸುವ ಕುರಿತು ಚರ್ಚಿಸಲು ಸಭೆ ಕರೆಯಲಾಗಿದೆ. ಡಿ.26 ರಂದು ಸುವರ್ಣಸೌಧದಲ್ಲಿನ ಗಾಂಧಿ ಪ್ರತಿಮೆ ಉದ್ಘಾಟನೆ ಸೇರಿ ಸಾರ್ವಜನಿಕ ಸಮಾವೇಶ ಹಮ್ಮಿಕೊಳ್ಳಲಾಗಿತ್ತು. ಆದರೆ ಮನಮೋಹನ್ ಸಿಂಗ್ ನಿಧನದಿಂದ ಸಭೆ ಮುಂದೂಡಲಾಗಿತ್ತು. ಇದೀಗ ಜ.21 ರಂದು ಸಮಾವೇಶ ನಡೆಯಲಿದ್ದು, ಎಲ್ಲಾ ವಿಧಾನಸಭಾ ಕ್ಷೇತ್ರಗಳಿಂದಲೂ ಕಾರ್ಯಕ ರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಶಾಸಕಾಂಗ ಪಕ್ಷದ ಸಭೆಯಲ್ಲಿ ಜವಾಬ್ದಾರಿಗಳನ್ನು ಹಂಚಿಕೆ ಮಾಡುವ ನಿರೀಕ್ಷೆ ಇದೆ ಎಂದು ಮೂಲಗಳು ತಿಳಿಸಿವೆ.
ಜೆಡಿಎಸ್ ಕಾರ್ಯಕರ್ತರು, ಮುಖಂಡರಿಗೆ ಧೈರ್ಯ ಹೇಳಿದ ನಿಖಿಲ್ ಕುಮಾರಸ್ವಾಮಿ
ಬಣ ರಾಜಕೀಯವೂ ಚರ್ಚೆ?:
ಪಕ್ಷದಲ್ಲಿ ಇತ್ತೀಚಿನ ಬೆಳವಣಿಗೆಗಳ ಬಗ್ಗೆಯೂ ಸಭೆಯಲ್ಲಿ ಚರ್ಚೆ ನಡೆಯುವಸಾಧ್ಯತೆಯಿದೆಎನ್ನಲಾಗಿದೆ. ಬಿಜೆಪಿಯಲ್ಲಿ ಬಿಜೆಪಿಯಲ್ಲಿ ಒಳ ಜಗಳ, ಬಣ ರಾಜಕೀಯದಿಂದ ಆ ಪಕ್ಷದ ವರ್ಚಸ್ಸು ಕುಂದುತ್ತಿದೆ. ಇದರ ಲಾಭ ಪಡೆಯುವ ಸ್ಥಿತಿಯಲ್ಲಿರುವ ಕಾಂಗ್ರೆಸ್‌ನಲ್ಲೂ ಅಂತಹುದೇ ಪರಿಸ್ಥಿತಿ ನಿರ್ಮಾಣವಾದರೆ ಅದರಿಂದ ತೀವ್ರ ನಷ್ಟ ಅನುಭವಿಸಬೇಕಾಗುತ್ತದೆ. ಅಧಿಕಾರ ಹಂಚಿಕೆ ಬಗ್ಗೆ ಹೈಕಮಾಂಡ್ ನಿರ್ಧಾರ ಮಾಡ ಲಿದೆ. ಹೀಗಾಗಿ ಯಾರೂ ಬಣ ರಾಜಕೀಯ ದಂತಹ ಚಟುವಟಿಕೆಯಲ್ಲಿ ಭಾಗವಹಿಸಬಾ ರದು ಎಂದು ಸಭೆ ಮೂಲಕ ಸಂದೇಶ ನೀಡುವ ಸಾಧ್ಯತೆಯಿದೆ ಎಂದು ಮೂಲಗಳು ಹೇಳಿವೆ
ಡಿನ್ನರ್ ಸಭೆ ರದ್ದಾಗಿಲ್ಲ, ಮುಂದೂಡಿಕೆ ಆಗಿದೆ ದಲಿತ ಶಾಸಕ ರು. ಸಂಸದರು ಮತ್ತು ಮುಖ ಏರ್ಪಡಿಸಿದ್ದ ಔತಣಕೂಟ ವನ್ನು ರದ್ದು ಮಾಡಿಲ್ಲ. ಮುಂದೂಡಿಕೆ ಮಾಡಿದ್ದೇವೆ ಅಷ್ಟೆ. ನಮ್ಮ ಔತಣ ಕೂಟಕ್ಕೆ ಹೈಕಮಾಂಡ್ ವಿರೋಧ ಇಲ್ಲ ಎಂದು ಗೃಹ ಸಚಿವ ಡಾ|ಜಿ.ಪರಮೇಶ್ವರ್ ತಿಳಿಸಿದ್ದಾರೆ.