ಬೆಂಗಳೂರು, (ನ.5): 2006ರಲ್ಲಿ ಮುಖ್ಯಮಂತ್ರಿಯಾಗಿದ್ದಾಗ ಎಚ್ ಡಿ ಕುಮಾರಸ್ವಾಮಿ ಅವರು ಹಲಗೆವಡೆರಹಳ್ಳಿಯಲ್ಲಿ ಅಕ್ರಮವಾಗಿ ಜಮೀನು ಡಿನೋಟಿಫೈ ಮಾಡಿದ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ನೀಡಲಾಗಿದೆ.

ಕುಮಾರಸ್ವಾಮಿ ಅವರು ಬಿಜೆಪಿ ಜತೆಗೂಡಿ 20-20 ಸರ್ಕಾರ ರಚಿಸಿದ್ದ ವೇಳೆ ಮೊದಲ ಬಾರಿಗೆ ಮುಖ್ಯಮಂತ್ರಿಯಾಗಿದ್ದಾಗ ಅಕ್ರಮವಾಗಿ ಡಿನೋಟಿಫೈ ಮಾಡಲಾಗಿದೆ ಎಂದು ಆರೋಪಿಸಲಾಗಿತ್ತು.

ಕುಮಾರಸ್ವಾಮಿಗೆ ಭೂಕಂಟಕ: ವಿಚಾರಣೆಗೆ ಬರುವಂತೆ ಕೋರ್ಟ್ ಸಮನ್ಸ್

ಈ ಪ್ರಕರಣ ಸಂಬಂಧ ಜನಪ್ರತಿನಿಧಿಗಳ ನ್ಯಾಯಾಲಯವು ಕುಮಾರಸ್ವಾಮಿ ಅವರಿಗೆ ಇಂದು (ಮಂಗಳವಾರ) ಸಮನ್ಸ್ ಜಾರಿ ಮಾಡಿದ್ದು, ಡಿಸೆಂಬರ್ 12ರಂದು ಖುದ್ದು ವಿಚಾರಣೆಗೆ ಹಾಜರಾಗುವಂತೆ ಸಮನ್ಸ್‌ನಲ್ಲಿ ಸೂಚಿಸಲಾಗಿದೆ.

ಮಾರಸ್ವಾಮಿ ಅವರು ಮೊದಲ ಬಾರಿಗೆ ಮುಖ್ಯಮಂತ್ರಿಯಾಗಿದ್ದಾಗ 2006ರಲ್ಲಿ ಬೆಂಗಳೂರಿನ ಬನಶಂಕರಿಯ 5ನೇ ಹಂತದಲ್ಲಿರುವ ಹಲಗೆವಡೆರಹಳ್ಳಿಯಲ್ಲಿ 2.24 ಎಕರೆ ಜಮೀನನ್ನು ಅಕ್ರಮವಾಗಿ ಡಿನೋಟಿಫಿಕೇಷನ್ ಮಾಡಿದ್ದಾರೆ ಎಂದು ಆರೋಪಿಸಲಾಗಿತ್ತು. 

ಈ ಬಗ್ಗೆ 2012ರಲ್ಲಿ ಅಧಿಕೃತವಾಗಿ ಲೋಕಾಯುಕ್ತ ಪೊಲೀಸರಿಗೆ ದೂರು ಸಲ್ಲಿಸಲಾಗಿತ್ತು. ಚಾಮರಾಜನಗರದ ಸಂತೇಮರಹಳ್ಳಿಯ ಮಹದೇವಸ್ವಾಮಿ ಎಂಬುವವರು ದೂರು ಸಲ್ಲಿಸಿದ್ದರು.