ಖಾಸಗೀಕರಣದಿಂದ ಮೀಸಲಾತಿ ಕಣ್ಮರೆ: ಸಿದ್ದರಾಮಯ್ಯ ಆತಂಕ
ಕೇಂದ್ರ ಸರ್ಕಾರದ ಖಾಸಗೀಕರಣ ನೀತಿಯಿಂದ ಒಂದೊಂದೇ ಕ್ಷೇತ್ರದಲ್ಲಿ ಮೀಸಲಾತಿ ಮರೆಯಾಗುತ್ತಿದೆ. ಭವಿಷ್ಯದಲ್ಲಿ ಮೀಸಲಾತಿಯು ಮಹತ್ವ ಕಳೆದುಕೊಳ್ಳಬಹುದು ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಆತಂಕ ವ್ಯಕ್ತಪಡಿಸಿದರು.
ಬೆಂಗಳೂರು (ಆ.09): ಕೇಂದ್ರ ಸರ್ಕಾರದ ಖಾಸಗೀಕರಣ ನೀತಿಯಿಂದ ಒಂದೊಂದೇ ಕ್ಷೇತ್ರದಲ್ಲಿ ಮೀಸಲಾತಿ ಮರೆಯಾಗುತ್ತಿದೆ. ಭವಿಷ್ಯದಲ್ಲಿ ಮೀಸಲಾತಿಯು ಮಹತ್ವ ಕಳೆದುಕೊಳ್ಳಬಹುದು ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಆತಂಕ ವ್ಯಕ್ತಪಡಿಸಿದರು. ವಸಂತನಗರದ ಅಂಬೇಡ್ಕರ್ ಭವನದಲ್ಲಿ ಸೋಮವಾರ ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟದಿಂದ ಏರ್ಪಡಿಸಿದ್ದ ‘ಹಾವನೂರು ಆಯೋಗ’ದ ಸುವರ್ಣ ಮಹೋತ್ಸವ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಕೇಂದ್ರ ಸರ್ಕಾರ ಖಾಸಗೀಕರಣಕ್ಕೆ ಆದ್ಯತೆ ನೀಡುತ್ತಿದ್ದು ಇದರಿಂದಾಗಿ ಹಿಂದುಳಿದ ಜಾತಿಗಳಿಗೆ ಅವಕಾಶಗಳು ಕಡಿಮೆಯಾಗಲಿವೆ.
ಇದು ಹೀಗೆಯೇ ಮುಂದುವರೆದರೆ ಮೀಸಲಾತಿಯು ತನ್ನ ನೈಜ ಮಹತ್ವವನ್ನೇ ಕಳೆದುಕೊಳ್ಳಲಿದೆ. ಇನ್ನು, ರಾಜ್ಯ ಸರ್ಕಾರವು ಸ್ಥಳೀಯ ಸಂಸ್ಥೆಗಳಲ್ಲಿ ಹಿಂದುಳಿದವರಿಗೆ ಮೀಸಲಾತಿ ನೀಡಲು ರಚಿಸಿರುವ ನ್ಯಾ.ಭಕ್ತವತ್ಸಲ ಸಮಿತಿಯೂ ಸರಿಯಾಗಿ ಸಮೀಕ್ಷೆ ಮಾಡಿಲ್ಲ. ಸಮಿತಿಯಿಂದಲೂ ನ್ಯಾಯ ಸಿಗುವ ಸಾಧ್ಯತೆ ಕಡಿಮೆಯಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು. ಮಾಜಿ ಸಭಾಪತಿ ವಿ.ಆರ್.ಸುದರ್ಶನ್, ಹಿರಿಯ ನ್ಯಾಯವಾದಿ ರವಿವರ್ಮ ಕುಮಾರ್, ಮಾಜಿ ಸಚಿವ ಎಚ್.ಎಂ.ರೇವಣ್ಣ, ಹಿಂದುಳಿದ ಜಾತಿಗಳ ಒಕ್ಕೂಟದ ಅಧ್ಯಕ್ಷ ರಾಮಚಂದ್ರಪ್ಪ, ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಮಾಜಿ ಅಧ್ಯಕ್ಷ ಕಾಂತರಾಜ್ ಮತ್ತಿತರರು ಹಾಜರಿದ್ದರು.
ಈ ದೇಶಕ್ಕೆ ಬಿಜೆಪಿ ಕೊಡುಗೆಯಾದರೂ ಏನು?: ಸಿದ್ದರಾಮಯ್ಯ ಪ್ರಶ್ನೆ
ನಮ್ಮವರಿಂದಲೇ ಅಧಿಕಾರಕ್ಕೆ ಮೋದಿಗೆ ಜೈಕಾರ!: ಕಾಂಗ್ರೆಸ್‌ನಲ್ಲಿ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಟಿಕೆಟ್ ಸಿಗದವರು ಮತ್ತು ಸಚಿವ ಸ್ಥಾನದ ಮೇಲೆ ಕಣ್ಣಿಟ್ಟನಮ್ಮವರು ಬಿಜೆಪಿ ಸೇರ್ಪಡೆ ಆಗುತ್ತಿದ್ದಾರೆ. ಬಿಜೆಪಿಯವರು ಮೀಸಲಾತಿ ವಿರೋಧಿಗಳಾಗಿದ್ದರೂ ಪ್ರಧಾನಿ ನರೇಂದ್ರ ಮೋದಿಗೆ ಜೈಕಾರ ಕೂಗುತ್ತಾರೆ ಎಂದು ಸಿದ್ದರಾಮಯ್ಯ ಬೇಸರ ವ್ಯಕ್ತಪಡಿಸಿದರು.
ಸಿದ್ದರಾಮಯ್ಯ ಭವಿಷ್ಯದ ಆಶಾಕಿರಣ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭವಿಷ್ಯದ ಆಶಾಕಿರಣವಾಗಿದ್ದಾರೆ ಎಂದು ದ್ರಾವಿಡ ಕಳಗಂ ಅಧ್ಯಕ್ಷ ಡಾ.ಕೆ.ವೀರಮಣಿ ಮೆಚ್ಚುಗೆ ವ್ಯಕ್ತಪಡಿಸಿದರು. ಖಾಸಗಿ ಕ್ಷೇತ್ರದಲ್ಲೂ ಮೀಸಲಾತಿ ಪಡೆಯಲು ಹೋರಾಟ ನಡೆಸಬೇಕಿದೆ. ಈ ನಿಟ್ಟಿನಲ್ಲಿ ಕರ್ನಾಟಕ ಮಾತ್ರವಲ್ಲ ಇಡೀ ದೇಶದ ಹಿಂದುಳಿದ ವರ್ಗಕ್ಕೆ ಸಿದ್ದರಾಮಯ್ಯ ಆಶಾಕಿರಣವಾಗಿದ್ದಾರೆ. ಇವರ ಮೇಲೆ ನಮಗೆ ನಂಬಿಕೆ ಇದೆ. ಜಾತ್ಯತೀತತೆಯನ್ನು ಉಳಿಸುವುದು ಸಿದ್ದರಾಮಯ್ಯ ಅವರಿಂದ ಮಾತ್ರ ಸಾಧ್ಯ ಎಂದು ಪ್ರಶಂಸಿಸಿದರು.
ಸಿದ್ದರಾಮೋತ್ಸವದಿಂದ ವಾಪಸ್ ಆಗುತ್ತಿದ್ದಾಗ ಮೃತಪಟ್ಟಿದ್ದ ಅಭಿಮಾನಿ ನಿವಾಸಕ್ಕೆ ಸಿದ್ದು ಭೇಟಿ
ಸಿದ್ದು@75 ನೆನಪಿಗೆ ಮೈಸೂರು ವಿವಿಯಲ್ಲಿ ಚಿನ್ನದ ಪದಕ ಪ್ರಶಸ್ತಿ: ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ 75ನೇ ಹುಟ್ಟಹಬ್ಬ ಅಂಗವಾಗಿ ಅಮೃತ ಮಹೋತ್ಸವ ಚಿನ್ನದ ಪದಕದ ದತ್ತಿ ಸ್ಥಾಪಿಸಲಾಗಿದೆ. ತಗಡೂರಿನಲ್ಲಿ ನಡೆದ ಸ್ವಾತಂತ್ರ್ಯ ಅಮೃತ ಮಹೋತ್ಸವದ ಸಮಾರಂಭದಲ್ಲಿ 75 ವರ್ಷ ತುಂಬಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ 75ನೇ ವರ್ಷದ ಹುಟ್ಟುಹಬ್ಬದ ಅಮೃತ ಮಹೋತ್ಸವದ ಸಂದರ್ಭದಲ್ಲಿ ಮೈಸೂರು ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಎಲ್‌ಎಲ್‌ಬಿ ಪದವಿಯಲ್ಲಿ ರಾರಯಂಕ್ ಗಳಿಸಿದ ವಿದ್ಯಾರ್ಥಿ ಅಥವಾ ವಿದ್ಯಾರ್ಥಿನಿಗೆ ಸಿದ್ದರಾಮಯ್ಯ 75 ಅಮೃತ ಮಹೋತ್ಸವ ಚಿನ್ನದ ಪದಕದ ದತ್ತಿ ಘೋಷಿಸಿ, ಮಹಾತ್ಮ ಗಾಂಧಿಯವರ ದಂಡಿ ಸತ್ಯಾಗ್ರಹದ ನೆನಪಿನ ಕಾಣಿಕೆ ನೀಡಿ ಮೈಸೂರು ಜಿಲ್ಲಾ ಕಾಂಗ್ರೆಸ್ ಸಮಿತಿ ಅವರನ್ನು ಗೌರವಿಸಿದೆ. ಸ್ವತಃ ಸಿದ್ದರಾಮಯ್ಯ ಮೈಸೂರು ವಿಶ್ವವಿದ್ಯಾಲಯದ ವಿದ್ಯಾರ್ಥಿಯಾಗಿದ್ದು, ಎಲ್‌ಎಲ್‌ಬಿ ಪದವಿಯನ್ನು ವಿದ್ಯಾವರ್ಧಕ ಲಾ ಕಾಲೇಜಿನಲ್ಲಿ ಪೂರೈಸಿದ್ದಾರೆ.