ಸದ್ಯ ಸಿಎಂ ಸ್ಥಾನದಲ್ಲಿ ಸಿದ್ದರಾಮಯ್ಯನವರಿದ್ದು, ಹೀಗಾಗಿ ರಾಜ್ಯದಲ್ಲಿ ಸಿಎಂ ಬದಲಾವಣೆ ಚರ್ಚೆ ಅಗತ್ಯವಿಲ್ಲ ಎಂದು ಸಚಿವ ದಿನೇಶ ಗುಂಡೂರಾವ್ ಹೇಳಿದ್ದಾರೆ. 

ಬಾಗಲಕೋಟೆ (ಫೆ.18): ಸದ್ಯ ಸಿಎಂ ಸ್ಥಾನದಲ್ಲಿ ಸಿದ್ದರಾಮಯ್ಯನವರಿದ್ದು, ಹೀಗಾಗಿ ರಾಜ್ಯದಲ್ಲಿ ಸಿಎಂ ಬದಲಾವಣೆ ಚರ್ಚೆ ಅಗತ್ಯವಿಲ್ಲ ಎಂದು ಸಚಿವ ದಿನೇಶ ಗುಂಡೂರಾವ್ ಹೇಳಿದ್ದಾರೆ. ಅವರು ಬಾಗಲಕೋಟೆ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಸಿಎಂ ಬದಲಾವಣೆ ಚರ್ಚೆ ಅಗತ್ಯ ಇಲ್ಲ, ಒಬ್ಬರು ಸಿಎಂ ಇದ್ದಾಗ ಇದನ್ಯಾಕೆ ಚರ್ಚೆ ಮಾಡಬೇಕು ಎಂದು ಪ್ರಶ್ನಿಸಿದ್ದಾರೆ. 

ಸಿದ್ಧರಾಮಯ್ಯನವರು ಈ ಹಿಂದೆ ಐದು ವರ್ಷ ಸಿಎಂ ಅಗಿದ್ದವರು, ಅವರೇನು ಸಾಮಾನ್ಯಾನಾ ಎಂದು ಪ್ರಶ್ನಿಸಿ, ಇವೆಲ್ಲ ಗುಸುಗುಸು ಸುದ್ದಿಗಳು ಇರ್ತಾವೆ, ಪಕ್ಷದಲ್ಲಿ ಯಾವುದೇ ಗೊಂದಲಗಳು, ಭಿನ್ನಾಭಿಪ್ರಾಯಗಳು ಇಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ. ಇನ್ನು ಜಾರಕಿಹೊಳಿ, ರಾಜಣ್ಣ ಅವರ ಆಕ್ಷೇಪಣೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿರುವ ಅವರು ರಾಜಕೀಯದಲ್ಲಿ ಪೈಪೋಟಿ ಇದ್ದೇ ಇರುತ್ತೆ, ಆಸೆಗಳಿದ್ರೇನೆ ಎಲ್ಲರೂ ರಾಜಕೀಯಕ್ಕೆ ಬರೋದು. ಇದು ದೊಡ್ಡ ವಿಷಯವಲ್ಲ.ಪಕ್ಷದಲ್ಲಿ ಯಾವುದೇ ಬಿರುಕು ಇಲ್ಲ , ಎಲ್ಲವೂ ಸರಿ ಹೋಗಲಿದೆ ಎಂದು ಹೇಳಿದ್ದಾರೆ.

ದಲಿತ ಸಮಾವೇಶ ಬೇಡ ಎಂದು ಯಾರೂ ಹೇಳಿಲ್ಲ: ಸಚಿವ ದಿನೇಶ್‌ ಗುಂಡೂರಾವ್‌

ತೇಲುವ ಜೆಟ್ಟಿ ಮಂಜೂರು: ಮಂಗಳೂರು ಹಳೆ ಬಂದರು ವ್ಯಾಪ್ತಿಯಲ್ಲಿ 11 ತೇಲುವ ಜೆಟ್ಟಿ ಕಾಮಗಾರಿಗಳು ಮಂಜೂರಾಗಿವೆ. ಉಳ್ಳಾಲ ಕೋಡಿಯಲ್ಲಿ ನಾಡದೋಣಿಗಳು ತಂಗಲು ಜೆಟ್ಟಿ ನಿರ್ಮಾಣಕ್ಕೆ ರಾಜ್ಯ ಸರ್ಕಾರ ಅನುಮತಿ ನೀಡಿದೆ ಎಂದು ಆರೋಗ್ಯ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್‌ ಗುಂಡೂರಾವ್‌ ತಿಳಿಸಿದ್ದಾರೆ. ನಗರದ ನೆಹರೂ ಮೈದಾನದಲ್ಲಿ ದ.ಕ. ಜಿಲ್ಲಾ ಮಟ್ಟದ ಗಣರಾಜ್ಯೋತ್ಸವ ದಿನಾಚರಣೆ ಪ್ರಯುಕ್ತ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ, ಗೌರವ ವಂದನೆ ಸ್ವೀಕರಿಸಿ ಅವರು ಸಂದೇಶ ನೀಡಿದರು. ಮಂಗಳೂರು ಮೀನುಗಾರಿಕಾ ಬಂದರಿನ 3ನೇ ಹಂತದ ಕಾಮಗಾರಿಗೆ ಈಗಾಗಲೇ ಟೆಂಡರ್‌ ಪ್ರಕ್ರಿಯೆ ಪೂರ್ಣಗೊಂಡಿದೆ ಎಂದರು.

ಬಡವರಿಗೆ ಅಂಗಕಸಿ ಯೋಜನೆ: ಈಗಾಗಲೇ ಅಸ್ತಿತ್ವದಲ್ಲಿರುವ ಜೀವ- ಸಾರ್ಥಕತೆ ಅಂಗಕಸಿ ಯೋಜನೆ ವಿಸ್ತರಣೆಗೆ ರಾಜ್ಯ ಸರ್ಕಾರ ತೀರ್ಮಾನಿಸಿದ್ದು, ರಾಜ್ಯದ ಆದ್ಯತಾ ಕಾರ್ಡ್‌ ಹೊಂದಿರುವವರಿಗೆ ಈ ಯೋಜನೆಯಡಿ ಹೃದಯ, ಶ್ವಾಸಕೋಶ ಮತ್ತು ಮೂಳೆ ಮಜ್ಜೆಯ ಕಸಿಯ ಸೌಲಭ್ಯ ವಿಸ್ತರಿಸಲು 30 ಕೋಟಿ ರು. ಒದಗಿಸಲು ತೀರ್ಮಾನಿಸಲಾಗಿದೆ. ಇದಕ್ಕಾಗಿ 15, 18 ಮತ್ತು 21 ಲಕ್ಷ ರು.ಗಳ ಮೂರು ಪ್ಯಾಕೇಜ್‌ಗಳಲ್ಲಿ ಅವಕಾಶ ಕಲ್ಪಿಸಲಾಗಿದೆ ಎಂದು ಸಚಿವರು ಹೇಳಿದರು.

ಮಾಗಡಿ ಆಸ್ಪತ್ರೆ ಉನ್ನತೀಕರಣಕ್ಕೆ 40 ಕೋಟಿ ಅನುದಾನ: ಸಚಿವ ದಿನೇಶ್ ಗುಂಡೂರಾವ್

ಮನಪಾಕ್ಕೆ 165 ಕೋಟಿ ರು. ಅನುದಾನ: ರಾಜ್ಯದ ಮಹಾನಗರ ಪಾಲಿಕೆಗಳ ವ್ಯಾಪ್ತಿಯಲ್ಲಿ ಸಮಗ್ರ ಮೂಲಭೂತ ಸೌಕರ್ಯ ಕಲ್ಪಿಸುವ ಉದ್ದೇಶದಿಂದ 2024-25ನೇ ಸಾಲಿನಲ್ಲಿ ಒಟ್ಟು 165 ಕೋಟಿ ರು. ಅನುದಾನ ಮಂಗಳೂರು ಮಹಾನಗರ ಪಾಲಿಕೆಗೆ ಹಂಚಿಕೆ ಮಾಡಲಾಗಿದೆ. ಈ ಯೋಜನೆಯಲ್ಲಿ ಒಟ್ಟು 25 ಕಾಮಗಾರಿಗಳನ್ನು ಪ್ರಸ್ತಾವಿಸಲಾಗಿದ್ದು, ಕಾಮಗಾರಿಗಳ ಅಂದಾಜು ಪಟ್ಟಿ ತಯಾರಿಕೆ ಹಂತದಲ್ಲಿದೆ. ಶೀಘ್ರ ಕಾಮಗಾರಿ ಆರಂಭಿಸಲಾಗುವುದು ಎಂದು ಮಾಹಿತಿ ನೀಡಿದರು.