ಭೇಟಿಯ ವಿವರ ತಿಳಿದು ಬಂದಿಲ್ಲವಾದರೂ ಕ್ಷೇತ್ರದ ಅಭಿವೃದ್ಧಿ ಮತ್ತು ಅನುದಾನ ಕುರಿತಂತೆ ಮಾತುಕತೆ ನಡೆಸಿರಬಹುದು. ಜತೆಗೆ ಮುಂಬರುವ ಲೋಕಸಭಾ ಚುನಾವಣೆಗೆ ಪೂರಕವಾಗಿ ಸಮಾಲೋಚನೆ ನಡೆದಿರಬಹುದು ಎಂದು ಮೂಲಗಳು ತಿಳಿಸಿವೆ.
ಬೆಂಗಳೂರು(ಡಿ.29): ಬಿಜೆಪಿ ಮತ್ತು ಆಡಳಿತಾರೂಢ ಕಾಂಗ್ರೆಸ್ ನಡುವಣ ಬೇಲಿ ಮೇಲೆ ಕುಳಿತಿರುವ ಶಾಸಕ ಎಸ್.ಟಿ.ಸೋಮಶೇಖರ್ ಅವರು ಮತ್ತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ್ದಾರೆ.
ಭೇಟಿಯ ವಿವರ ತಿಳಿದು ಬಂದಿಲ್ಲವಾದರೂ ಕ್ಷೇತ್ರದ ಅಭಿವೃದ್ಧಿ ಮತ್ತು ಅನುದಾನ ಕುರಿತಂತೆ ಮಾತುಕತೆ ನಡೆಸಿರಬಹುದು. ಜತೆಗೆ ಮುಂಬರುವ ಲೋಕಸಭಾ ಚುನಾವಣೆಗೆ ಪೂರಕವಾಗಿ ಸಮಾಲೋಚನೆ ನಡೆದಿರಬಹುದು ಎಂದು ಮೂಲಗಳು ತಿಳಿಸಿವೆ.
ಕಾಂಗ್ರೆಸ್ ಶಾಸಕಾಂಗ ಸಭೆಗೆ ಹೋಗಿಲ್ಲ, ಊಟಕ್ಕೆ ಹೋಗಿದ್ದೆ: ಶಾಸಕ ಎಸ್.ಟಿ.ಸೋಮಶೇಖರ್
ಬೆಳಗಾವಿ ಅಧಿವೇಶನ ವೇಳೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯ ಬಳಿಕ ನಡೆದ ಔತಣ ಕೂಟದಲ್ಲಿ ಭಾಗಿಯಾಗಿದ್ದ ಸೋಮಶೇಖರ್ ಅವರು ಬಿಜೆಪಿ ತೊರೆಯುವ ಬಗ್ಗೆ ಮಾನಸಿಕವಾಗಿ ಸಿದ್ಧರಾಗಿದ್ದಾರೆ. ಅದರ ಭಾಗವಾಗಿ ಆಗಾಗ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡುತ್ತಲೇ ಇರುತ್ತಾರೆ ಎನ್ನಲಾಗಿದೆ.