ಬಿಜೆಪಿ ವರಿಷ್ಠರ ಭೇಟಿಗಾಗಿ ಅತೃಪ್ತ ಸೋಮಣ್ಣ ದೆಹಲಿಗೆ
ಬಿ.ಎಲ್.ಸಂತೋಷ್‌ರನ್ನು ಭೇಟಿ ಮಾಡಿ ಕಳೆದ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಸೋಲಿಗೆ ಕಾರಣ ರಾದವರ ಬಗ್ಗೆ ದೂರು ನೀಡಲಿದ್ದಾರೆ ಎನ್ನಲಾಗಿದೆ.
ಬೆಂಗಳೂರು(ಜ.09): ಅಸಮಾಧಾನಗೊಂಡಿರುವ ಮಾಜಿ ಸಚಿವ ವಿ.ಸೋಮಣ್ಣ ಅವರು ವರಿಷ್ಠರ ಭೇಟಿಗಾಗಿ ದೆಹಲಿ ತಲುಪಿದ್ದಾರೆ. ಸೋಮ ವಾರ ಸಂಜೆ ದೆಹಲಿಗೆ ಪ್ರಯಾಣಿಸಿದ ಅವರು 2 ಅಥವಾ 3 ದಿನ ದೆಹಲಿಯಲ್ಲಿ ವಾಸ್ತವ್ಯ ಹೂಡಲಿದ್ದು, ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ, ಕೇಂದ್ರ ಗೃಹ ಸಚಿವ ಅಮಿತ್ ಶಾ, ರಾಷ್ಟ್ರೀಯ ಸಂಘಟನಾ ಪ್ರಧಾನಕಾವ್ಯದರ್ಶಿ ಬಿ.ಎಲ್.ಸಂತೋಷ್‌ರನ್ನು ಭೇಟಿ ಮಾಡಿ ಕಳೆದ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಸೋಲಿಗೆ ಕಾರಣ ರಾದವರ ಬಗ್ಗೆ ದೂರು ನೀಡಲಿದ್ದಾರೆ ಎನ್ನಲಾಗಿದೆ.
ಸೋಮಣ್ಣ ಮುನಿಸು ಶಮನಕ್ಕೆ ದೇವೇಗೌಡ..!
ಸೋಲಿಗೆ ಕಾರಣರಾದವರ ವಿರುದ್ಧ ಕ್ರಮ, ಅವರ ಹಿಂದಿರುವವರಿಗೆ ತಾಕೀತು ಮಾಡಬೇಕು ಮತ್ತು ತಮ್ಮ ಸೋಲಿಗೆ ಪರ್ಯಾಯವಾಗಿ ಸೂಕ್ತ ಸ್ಥಾನ ನೀಡಬೇಕು ಎಂಬುದರ ಬಗ್ಗೆ ವರಿಷ್ಠರ ಬಳಿ ಪ್ರಸ್ತಾಪಿಸುವ ನಿರೀಕ್ಷೆಯಿದೆ.