Asianet Suvarna News Asianet Suvarna News

ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಕಾರ್ಯಕರ್ತರ ಬಹಿರಂಗ ಸಭೆ

ನಯನ ಮೋಟಮ್ಮಗೆ ಟಿಕೆಟ್ ನೀಡಿದ್ದಂತೆ ಸಭೆ ಸೇರಿದ ಕಾಂಗ್ರೆಸ್ ಮುಖಂಡರು, ಮಾಜಿ ಸಚಿವೆ ಮೋಟಮ್ಮ ಹಾಗೂ ಪುತ್ರಿ ನಯನ ಮೋಟಮ್ಮ ವಿರುದ್ಧ ಆಕ್ರೋಶ

Dissent in Chikkamagaluru Congress grg
Author
First Published Nov 2, 2022, 2:30 PM IST

ವರದಿ: ಆಲ್ದೂರು ಕಿರಣ್, ಏಷ್ಯಾನೆಟ್‌ ಸುವರ್ಣ ನ್ಯೂಸ್, ಚಿಕ್ಕಮಗಳೂರು 

ಚಿಕ್ಕಮಗಳೂರು(ನ.02): ವಿಧಾನಸಭೆ ಚುನಾವಣೆಗೆ ಆರು ತಿಂಗಳಿರುವಾಗಲೇ ರಾಜಕೀಯ ಚಟುವಟಿಕೆಗಳು ಗರಿಗದರಿದ್ದು ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಮೀಸಲು ಕ್ಷೇತ್ರದಲ್ಲಿ ಕಾಂಗ್ರೇಸ್ ಪಕ್ಷದಲ್ಲಿ ಭಿನ್ನಮತ ಸ್ಫೋಟಗೊಂಡಿದೆ. ಮಾಜಿ ಸಚಿವೆ ಮೋಟಮ್ಮ ಪುತ್ರಿ ನಯನ ಮೋಟಮ್ಮಾಗೆ ಟಿಕೆಟ್ ಬೇಡವೇ ಬೇಡ ಎಂದು ಕಾರ್ಯಕರ್ತರು ಬಹಿರಂಗ ಸಭೆ ನಡೆಸಿದ್ದಾರೆ.

ಮಾಜಿ ಸಚಿವೆ ಮೋಟಮ್ಮ ಕುಟುಂಬಕ್ಕೆ ಟಿಕೆಟ್ ಬೇಡ

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಮಾಜಿ ಸಚಿವೆ ಮೋಟಮ್ಮ ಅವರಿಗೆ ಟಿಕೆಟ್‌ ಬೇಡ ಎಂಬ ಒತ್ತಾಯ ಕಾಂಗ್ರೆಸ್‌ ಮುಖಂಡರಿಂದ ಕೇಳಿಬಂದಿತ್ತು. ಇದೀಗ ಅವರ ಪುತ್ರಿ ನಯನಾ ಅವರಿಗೆ ಟಿಕೆಟ್‌ ಕೊಡುವುದು ಬೇಡ ಎಂಬ ಮಾತುಗಳು ವ್ಯಕ್ತವಾಗುತ್ತಿವೆ. ಮೂಡಿಗೆರೆ ಮೀಸಲು ಕ್ಷೇತ್ರ. ಇಲ್ಲಿ ಮೋಟಮ್ಮ ಅವರು ಹಲವು ಬಾರಿ ಶಾಸಕರಾಗಿ, ಸಚಿವರಾಗಿ, ಕಾಂಗ್ರೆಸ್‌ನ ಸಿಡಬ್ಲ್ಯೂಸಿ ಸದಸ್ಯರಾಗಿದ್ದರು. ಆದ್ದರಿಂದ ಬೇರೆಯವರಿಗೆ ಟಿಕೆಟ್‌ ನೀಡಬೇಕೆಂದು 2018ರ ವಿಧಾನಸಭಾ ಚುನಾವಣೆಯಲ್ಲಿ ಕೆಲವು ಕಾಂಗ್ರೆಸ್‌ ಮುಖಂಡರು ಪ್ರಯತ್ನ ನಡೆಸಿದ್ದರು. ಆದರೂ ಮೋಟಮ್ಮ ಅವರಿಗೆ ಟಿಕೆಟ್‌ ನೀಡಲಾಗಿತ್ತು.ಆದರೆ, ಈ ಬಾರಿ ತನ್ನ ಮಗಳು ನಯನಾ ಅವರಿಗೆ ಟಿಕೆಟ್‌ ಕೊಡಿಸಲು ಮೋಟಮ್ಮ ಪ್ರಯತ್ನದಲ್ಲಿದ್ದಾರೆ. ಈ ಬೆಳವಣಿಗೆ ನಡುವೆ ಕ್ಷೇತ್ರದಲ್ಲಿ ಎರಡು ಭಾರೀ ಬಂಡಾಯದ ಸಭೆ ನಡೆದಿದ್ದು ನಯನ ಮೋಟಮ್ಮ ವಿರುದ್ದ ಅಸಮಾಧನವನ್ನು ಹೊರಹಾಕಿದ್ದಾರೆ.  ನಿನ್ನೆಯೂ ಚಿಕ್ಕಮಗಳೂರು ತಾಲೂಕಿನ ವಸ್ತಾರೆ ಹೋಬಳಿ ವ್ಯಾಪ್ತಿಯಲ್ಲಿ ಸಭೆ ನಡೆಸಿದ ಕಾಂಗ್ರೆಸ್ ಕಾರ್ಯಕರ್ತರು ನಯನಾಗೆ ಟಿಕೆಟ್ ನೀಡಿದಂತೆ ರಾಜ್ಯ ನಾಯಕರು ಹಾಗೂ ರಾಷ್ಟ್ರೀಯ ನಾಯಕರಿಗೂ ಮನವಿ ಮಾಡಲು ನಿರ್ಧರಿಸಿದ್ದಾರೆ. ನಯನಾಗೆ ಟಿಕೆಟ್ ನೀಡಿದರೆ ಕಾಂಗ್ರೆಸ್ ಸೋಲು ಖಚಿತ. ಕ್ಷೇತ್ರದ ಜನ ನಯನ ಅವರನ್ನು ಒಪ್ಪುತ್ತಿಲ್ಲ. ಪಕ್ಷದ ಕಾರ್ಯಕರ್ತರು ಹಾಗೂ ಮುಖಂಡರು ಕೂಡ ನಯನಾಗೆ ಟಿಕೆಟ್ ನೀಡಲು ವಿರೋಧಿಸಿದ್ದಾರೆ. ಈಗಾಗಲೇ ಮೊಟ್ಟಮ್ಮ ಐದು ಬಾರಿ ಸೋಲು ಕಂಡಿದ್ದಾರೆ. ಈ ಮಧ್ಯೆ ನಾನು ರಾಜಕೀಯದಿಂದ ನಿವೃತ್ತಿಯಾಗಿದ್ದೇನೆ ಎಂದು ಅವರೇ ಹೇಳಿಕೊಂಡಿದ್ದಾರೆ. ಅವರ ಮಗಳಿಗೆ ಟಿಕೆಟ್ ನೀಡಿದರೆ ಕಾಂಗ್ರೆಸ್ ಪಕ್ಷ ಸೋಲುವುದು ಗ್ಯಾರಂಟಿ. ಹಾಗಾಗಿ ಸ್ಥಳೀಯರು ಹಾಗೂ ಹೊಸ ಮುಖಕ್ಕೆ ಟಿಕೆಟ್ ನೀಡುವಂತೆ ಕಾರ್ಯಕರ್ತರು ಆಗ್ರಹಿಸಿ ನಯನ ವಿರುದ್ಧ ಬಹಿರಂಗ ಸಭೆ ನಡೆಸುತ್ತಿದ್ದಾರೆ.

' ಆಂತರಿಕ ಸಮಸ್ಯೆಯಿಂದ ಕಳೆದ ಬಾರಿ ಸೋತಿದ್ದೇವೆ: ಈಗ ಕಾಂಗ್ರೆಸ್‌ ಸೋಲುವುದಿಲ್ಲ'

ನಯನ ಮೋಟಮ್ಮ ವಿರುದ್ಧ ತೀವ್ರಗೊಂಡ ಬಂಡಾಯದ ಸಭೆಗಳು 

ಕಳೆದೊಂದು ವಾರದ ಹಿಂದೆ ಕಾಂಗ್ರೆಸ್ ಕಾರ್ಯಕರ್ತರು ಮೂಡಿಗೆರೆಯಲ್ಲೂ ಸಭೆ ಸೇರಿ ಅಸಮಾಧಾನ ಹೊರಹಾಕಿದ್ದರು. ಮುಂದಿನ ವಾರದಲ್ಲಿ ಗೋಣಿಬೀಡು ಹೋಬಳಿಯಲ್ಲೂ ಸಭೆ ಸೇರುವುದಾಗಿ ತೀರ್ಮಾನಿಸಿದ್ದಾರೆ. 
ನಯನಾ ಮೋಟಮ್ಮ ಅವರು ಚುನಾವಣೆ ಅಭ್ಯರ್ಥಿ ಆಗೋದು ಬೇಡ. ಈ ನಿಟ್ಟಿನಲ್ಲಿ ಕ್ಷೇತ್ರದಲ್ಲಿ ಹೋಬಳಿ ಮಟ್ಟದಲ್ಲಿ ಸಭೆ ನಡೆಸಿ ಪಕ್ಷದ ವರಿಷ್ಠರ ಗಮನಕ್ಕೆ ತರೋಣ ಎನ್ನುವ ಅಭಿಪ್ರಾಯವನ್ನ ಸಭೆಯಲ್ಲಿ ಮುಖಂಡರು ಹೊರಹಾಕಿದ್ದಾರೆ.

ಅಲ್ಲದೆ. ಯಾವುದೇ ಕಾಲೋನಿ, ಊರಿಗೆ ಹೋದ್ರು ನಯನಾ ಮೋಟಮ್ಮ ಅವರಿಗೆ ಜನರು ಒಪ್ಪುತ್ತಿಲ್ಲ. ಸೋಲುವ ಅಭ್ಯರ್ಥಿ ಜತೆ ರಾಜಿ ಇಲ್ಲ. ಅವರಿಗೆ 20 ಬಾರಿ ಟಿಕೆಟ್‌ ಕೊಟ್ಟರೂ ಗೆಲ್ಲೋದಿಲ್ಲ. ದಯವಿಟ್ಟು ಅವರು ಜಾಗ ಖಾಲಿ ಮಾಡಬೇಕೆಂದು ಕೋರಿಕೊಂಡಿದ್ದಾರೆ. ರಾಜ್ಯ ವಿಧಾನಸಭಾ ಚುನಾವಣೆ ಇನ್ನು 6 ತಿಂಗಳು ಬಾಕಿ ಇರುವಾಗಲೇ ಈ ಬೆಳವಣಿಗೆ ಮೂಡಿಗೆರೆ ಕ್ಷೇತ್ರದ ಕಾಂಗ್ರೆಸ್‌ ಪಾಳೆಯದಲ್ಲಿ ಆಗಿರುವುದು ಮೋಟಮ್ಮ ಅವರಿಗೆ ಹಿನ್ನಡೆಗೆ ಮುನ್ನುಡಿ ಬರೆದಂತಾಗಿದೆ.ನಯನ ವಿರುದ್ಧ ಕಾಂಗ್ರೆಸ್ ಹೋಬಳಿಗಳಿಗೆ ಹೋಗಿ ಸಭೆ ನಡೆಸಿ ಅಸಮಾಧಾನ ಹೊರಹಾಕುತ್ತಿದ್ದಾರೆ. ಹೊಸ ಮುಖಕ್ಕೆ ಮಣೆ ಹಾಕುವಂತೆ ರಾಜ್ಯ ನಾಯಕರಿಗೆ ಆಗ್ರಹಿಸಿದ್ದಾರೆ. ಸಭೆಯಲ್ಲಿ ಹಾಲಿ ,ಮಾಜಿ ಗ್ರಾ.ಪಂ ಸದಸ್ಯರು, ಮಾಜಿ ಜಿ.ಪಂ ಸದಸ್ಯರು ಭಾಗಿಯಾಗಿದ್ದರು.
 

Follow Us:
Download App:
  • android
  • ios