Asianet Suvarna News Asianet Suvarna News

ಡಿ.ಕೆ.ಶಿವಕುಮಾರ್ ಸಿಬಿಐ ತನಿಖೆ ವಾಪಸ್‌: ಏ.5ರಿಂದ ಹೈಕೋರ್ಟ್‌ ವಿಚಾರಣೆ

ಆದಾಯ ಮೀರಿ ಆಸ್ತಿ ಗಳಿಕೆ ಆರೋಪ ಸಂಬಂಧ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ಧದ ತನಿಖೆಗೆ ನೀಡಿದ್ದ ಅನುಮತಿ ಹಿಂಪಡೆದಿರುವ ರಾಜ್ಯ ಸರ್ಕಾರದ ಕ್ರಮ ಪ್ರಶ್ನಿಸಿ ಸಿಬಿಐ ಹಾಗೂ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸಲ್ಲಿಸಿರುವ ಅರ್ಜಿಗಳ ಕುರಿತ ಅಂತಿಮ ವಿಚಾರಣೆಯನ್ನು ಏ.5ರಿಂದ ನಡೆಸುವುದಾಗಿ ಹೈಕೋರ್ಟ್‌ ತಿಳಿಸಿದೆ. 

DK Shivakumar CBI investigation withdrawn High Court hearing from Apr 5th gvd
Author
First Published Mar 23, 2024, 6:23 AM IST

ಬೆಂಗಳೂರು (ಮಾ.23): ಆದಾಯ ಮೀರಿ ಆಸ್ತಿ ಗಳಿಕೆ ಆರೋಪ ಸಂಬಂಧ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿರುದ್ಧದ ತನಿಖೆಗೆ ನೀಡಿದ್ದ ಅನುಮತಿ ಹಿಂಪಡೆದಿರುವ ರಾಜ್ಯ ಸರ್ಕಾರದ ಕ್ರಮ ಪ್ರಶ್ನಿಸಿ ಸಿಬಿಐ ಹಾಗೂ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸಲ್ಲಿಸಿರುವ ಅರ್ಜಿಗಳ ಕುರಿತ ಅಂತಿಮ ವಿಚಾರಣೆಯನ್ನು ಏ.5ರಿಂದ ನಡೆಸುವುದಾಗಿ ಹೈಕೋರ್ಟ್‌ ತಿಳಿಸಿದೆ. ನ್ಯಾಯಮೂರ್ತಿ ಕೆ.ಸೋಮಶೇಖರ್ ಅವರ ನೇತೃತ್ವದ ವಿಭಾಗೀಯ ಪೀಠದ ಮುಂದೆ ಶುಕ್ರವಾರ ಅರ್ಜಿಯ ವಿಚಾರಣೆ ನಡೆಯಿತು.

ಕೆಲ ಕಾಲ ಡಿ.ಕೆ. ಶಿವಕುಮಾರ್‌, ಸಿಬಿಐ ಮತ್ತು ಯತ್ನಾಳ್‌ ಪರ ವಕೀಲರ ವಾದಾಂಶ ಆಲಿಸಿದ ನ್ಯಾಯಪೀಠ, ವಿಚಾರಣೆಯನ್ನು ಏ.5ಕ್ಕೆ ಮುಂದೂಡಿತು. ಅಂದಿನಿಂದ ಅರ್ಜಿ ಸಂಬಂಧ ಅಂತಿಮ ವಾದ-ಪ್ರತಿವಾದ ಆಲಿಸಲಾಗುವುದು ಎಂದು ಪೀಠ ತಿಳಿಸಿದೆ. ಇದಕ್ಕೂ ಮುನ್ನ ಸಿಬಿಐ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಲವೊಂದು ಬೆಳವಣಿಗೆಗಳು ನಡೆದಿವೆ. ಆ ಕುರಿತು ಮುಂದಿನ ವಿಚಾರಣೆ ವೇಳೆ ಮಾಹಿತಿ ನೀಡಲಾಗುವುದು ಎಂದು ಡಿ.ಕೆ. ಶಿವಕುಮಾರ್ ಪರ ವಕೀಲರು ನ್ಯಾಯಪೀಠಕ್ಕೆ ತಿಳಿಸಿದರು.

ಒಬಿಸಿ ವೋಟ್‌ಬ್ಯಾಂಕ್ ಮಾಡಿಕೊಳ್ಳುವ ಕಾಂಗ್ರೆಸ್‌ ಹುನ್ನಾರ ಫಲಿಸುವುದಿಲ್ಲ: ಮಾಜಿ ಸಿಎಂ ಬೊಮ್ಮಾಯಿ

ಪ್ರಕರಣದ ಹಿನ್ನೆಲೆ: ಆದಾಯ ಮೀರಿ ಆಸ್ತಿ ಗಳಿಕೆ ಆರೋಪ ಸಂಬಂಧ ಡಿ.ಕೆ.ಶಿವಕುಮಾರ್‌ ವಿರುದ್ಧ ಸಿಬಿಐ ತನಿಖೆಗೆ ಅನುಮತಿ ನೀಡಿ ಹಿಂದಿನ ಬಿಜೆಪಿ ರಾಜ್ಯ ಸರ್ಕಾರ 2022ರ ಸೆ.25ರಂದು ಆದೇಶಿಸಿತ್ತು. ಈ ಆದೇಶ ರದ್ದತಿ ಕೋರಿ ಶಿವಕುಮಾರ್‌ ಸಲ್ಲಿಸಿದ್ದ ತಕರಾರು ಅರ್ಜಿಯನ್ನು 2023ರ ಏ.20ರಂದು ಹೈಕೋರ್ಟ್‌ ಏಕಸದಸ್ಯ ನ್ಯಾಯಪೀಠ ವಜಾಗೊಳಿಸಿತ್ತು. ಈ ತೀರ್ಪು ಪ್ರಶ್ನಿಸಿ ಶಿವಕುಮಾರ್‌ ವಿಭಾಗೀಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಿದ್ದರು. ಏಕ ಸದಸ್ಯ ನ್ಯಾಯಪೀಠದ ಆದೇಶ ಮತ್ತು ಸಿಬಿಐ ತನಿಖೆಗೆ ವಿಭಾಗೀಯ ಪೀಠ ತಡೆ ನೀಡಿತ್ತು ಈ ಮಧ್ಯೆ ಹಾಲಿ ಕಾಂಗ್ರೆಸ್‌ ಸರ್ಕಾರ, ಸಿಬಿಐ ತನಿಖೆಗೆ ನೀಡಿದ್ದ ಅನುಮತಿಯನ್ನು 2023ರ ನ.28ರಂದು ಹಿಂಪಡೆದಿತ್ತು. ಜತೆಗೆ, ತನಿಖೆಯನ್ನು ಲೋಕಾಯುಕ್ತ ಪೊಲೀಸರಿಗೆ ವಹಿಸಿತ್ತು. ಅದನ್ನು ಪ್ರಶ್ನಿಸಿ ಸಿಬಿಐ ಮತ್ತು ಯತ್ನಾಳ್‌ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

Follow Us:
Download App:
  • android
  • ios