Asianet Suvarna News Asianet Suvarna News

ಎತ್ತಿನಹೊಳೆಯಿಂದ ನೀರೆತ್ತುವ ಕಾರ್‍ಯಕ್ಕೆ ಡಿ.ಕೆ.ಶಿವಕುಮಾರ್‌ ಪ್ರಾಯೋಗಿಕ ಚಾಲನೆ

ತಾಲೂಕಿನ ಎತ್ತಿನಹಳ್ಳ ಗ್ರಾಮದಲ್ಲಿ ಬುಧವಾರ ಎತ್ತಿನಹೊಳೆ ಯೋಜನೆಗೆ ನಿರ್ಮಿಸಲಾಗಿರುವ ಚೆಕ್ ಡ್ಯಾಮ್‌ಗೆ ಭೇಟಿ ನೀಡಿ ಪ್ರಾಯೋಗಿಕವಾಗಿ ನೀರೆತ್ತುವ ಕಾರ್ಯಕ್ಕೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಚಾಲನೆ ನೀಡಿದರು. 

DK Shivakumar experimental inaugurated for irrigation work from yettinahole gvd
Author
First Published Aug 30, 2024, 8:05 AM IST | Last Updated Aug 30, 2024, 8:05 AM IST

ಸಕಲೇಶಪುರ (ಆ.30): ತಾಲೂಕಿನ ಎತ್ತಿನಹಳ್ಳ ಗ್ರಾಮದಲ್ಲಿ ಬುಧವಾರ ಎತ್ತಿನಹೊಳೆ ಯೋಜನೆಗೆ ನಿರ್ಮಿಸಲಾಗಿರುವ ಚೆಕ್ ಡ್ಯಾಮ್‌ಗೆ ಭೇಟಿ ನೀಡಿ ಪ್ರಾಯೋಗಿಕವಾಗಿ ನೀರೆತ್ತುವ ಕಾರ್ಯಕ್ಕೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಚಾಲನೆ ನೀಡಿದರು. ನಂತರ ಮಾತನಾಡಿದ ಅವರು, ಪೂರ್ವ ನಿಗದಿಯಂತೆ ಎತ್ತಿನಹೊಳೆಯಿಂದ ನೀರೆತ್ತಲು ಸರ್ಕಾರ ಯಶಸ್ವಿಯಾಗಿದೆ. ನಮ್ಮ ಸರ್ಕಾರ ಅಸ್ತಿತ್ವಕ್ಕೆ ಬಂದ ನಂತರ ಎತ್ತಿನಹೊಳೆ ಕಾಮಗಾರಿಗೆ ವೇಗ ನೀಡಲಾಗಿದೆ. ಕಳೆದ ವರ್ಷ ಇದೇ ಪ್ರದೇಶಕ್ಕೆ ಭೇಟಿ ನೀಡಿದ ವೇಳೆ ಮುಂದಿನ ವರ್ಷದ ಆರಂಭದಲ್ಲಿ ಎತ್ತಿನಹೊಳೆಯಿಂದ ನೀರೆತ್ತಲಾಗುವುದು ಎಂದು ಭರವಸೆ ನೀಡಿದ್ದೆ. 

ಆದರೆ, ಅದರ ಪ್ರಾಯೋಗಿಕ ಪರೀಕ್ಷೆಗೆ ಒಂದೆರಡು ತಿಂಗಳು ವಿಳಂಬವಾದರೂ ಯೋಜನೆ ಯಶಸ್ವಿಯಾಗಿದೆ. ಈಗಾಗಲೇ ೮ ಜಲಾಶಯಗಳ ಪೈಕಿ ಐದು ಜಲಾಶಯಗಳಿಂದ ಯಶಸ್ವಿಯಾಗಿ ನೀರೆತ್ತುವ ಮೂಲಕ ಬಯಲು ಸೀಮೆಗೆ ನೀರು ಹರಿಸಲಾಗಿದೆ ಎಂದು ಹೇಳಿದರು. ಅರಸೀಕೆರೆ ತಾಲೂಕಿನಲ್ಲಿ ಸುಮಾರು ೧.೫ ಕಿ.ಮೀ. ಕಾಲುವೆ ಕಾಮಗಾರಿಗೆ ಅರಣ್ಯ ಇಲಾಖೆ ಅಡ್ಡಿಯಾಗಿದ್ದು, ಸಂಬಂಧಿಸಿದ ಸಚಿವರೊಂದಿಗೆ ಮಾತನಾಡಿ ಶೀಘ್ರ ಕಾಮಗಾರಿ ಆರಂಭಿಸಲಾಗುವುದು. ಈಗಾಗಲೇ ಕಳೆದೊಂದು ತಿಂಗಳಿನಿಂದ ಸುಮಾರು ೧೫ ಸಾವಿರ ಕ್ಯುಸೆಕ್‌ ನೀರು ಮೇಲೆತ್ತಲಾಗಿದ್ದು, ಸಾಕಷ್ಟು ಕೆರೆಗಳಿಗೆ ನೀರು ಹರಿಸಲಾಗುತ್ತಿದೆ. 

ಈ ಮಳೆಗಾಲ ಮುಗಿಯುವ ಮುನ್ನ ಎಲ್ಲ ಟ್ರಯಲ್ ರನ್ ಆರಂಭಿಸಲಾಗುವುದು. ನಂತರ ಶುಭದಿನ ನೋಡಿ ಮುಖ್ಯಮಂತ್ರಿಗಳಿಂದ ಯೋಜನೆಯನ್ನು ಉದ್ಘಾಟಿಸಲಾಗುವುದು ಎಂದು ತಿಳಿಸಿದರು. ತಾಲೂಕಿನಲ್ಲಿ ಎತ್ತಿನಹೊಳೆ ಕಾಮಗಾರಿಯಿಂದ ಹಾನಿಯಾಗಿರುವ ರಸ್ತೆ ದುರಸ್ತಿಗೆ ಅಗತ್ಯವಿರುವ ಹಣ ಬಿಡುಗಡೆ ಮಾಡಲಾಗುವುದು ಎಂದು ಇದೇ ವೇಳೆ ಪ್ರಶ್ನೆಯೊಂದಕ್ಕೆ ಉತ್ತರಿಸಿದರು. ಶಾಸಕ ಸಿಮೆಂಟ್ ಮಂಜು ಮಾತನಾಡಿ ಒಂದೆಡೆ ಎತ್ತಿನಹೊಳೆ, ಮತ್ತೊಂದೆಡೆ ಹೆದ್ದಾರಿ ಕಾಮಗಾರಿಯಿಂದ ಸಾಕಷ್ಟು ಭೂಮಿ ಕುಸಿದಿದ್ದು ಅಪಾರ ನಷ್ಟ ಸಂಭವಿಸಿದೆ. ಅಧಿಕ ಮಳೆಯಿಂದ ಜನ ಸಾಕಷ್ಟು ಬೆಳೆ ಕಳೆದುಕೊಂಡಿದ್ದಾರೆ. 

ಬಿಜೆಪಿಗರು, ಆರೆಸ್ಸೆಸ್‌ ವಿರುದ್ಧ ರಾಜ್ಯ ಸರ್ಕಾರ ಕೆಐಎಡಿಬಿ ಭೂ ಪ್ರತ್ಯಸ್ತ್ರ: ಸಚಿವ ಎಂ.ಬಿ.ಪಾಟೀಲ್‌

ಏಳು ಜಿಲ್ಲೆಗಳಿಗೆ ಎತ್ತಿನಹೊಳೆಯಿಂದ ನೀರು ಹರಿಸಲಾಗುವುದು. ಆದರೆ ಇದಕ್ಕೆ ನಮ್ಮದೇನೂ ವಿರೋಧವಿಲ್ಲ. ಸಾಕಷ್ಟು ತ್ಯಾಗ ಮಾಡಿರುವ ತಾಲೂಕಿನ ಅಭಿವೃದ್ಧಿಗಾಗಿ ಕನಿಷ್ಠ ಒಂದು ಸಾವಿರ ಕೋಟಿ ರುಪಾಯಿ ಅನುದಾನ ಸರ್ಕಾರ ಘೋಷಿಸಬೇಕು. ತಕ್ಷಣ ಕನಿಷ್ಠ ೫೦೦ ಕೋಟಿ ರು. ಅನುದಾನ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿದರು. ಶಾಸಕನಾಗಿ ಒಂದೂವರೆ ವರ್ಷದಲ್ಲಿ ತಾಲೂಕಿನ ಅಭಿವೃದ್ಧಿಗೆ ಸರ್ಕಾರದಿಂದ ನಯಾ ಪೈಸೆ ಬಿಡುಗಡೆ ಮಾಡಿಲ್ಲ. ಅಭಿವೃದ್ಧಿಗಾಗಿ ಅನುದಾನ ನೀಡಿ ಎಂದು ತಾಲೂಕಿಗೆ ಭೇಟಿ ನೀಡಿದ್ದ ವೇಳೆ ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದೆ. ಯಾವುದೇ ಪ್ರಯೋಜವಾಗಿಲ್ಲ. ಉಪಮುಖ್ಯಮಂತ್ರಿಗಳ ಬಳಿಯೂ ಪ್ರಸ್ತಾವ ಮಾಡುತ್ತೇನೆ. ನಮ್ಮ ಮನವಿಗೆ ಸ್ಪಂದನೆ ಮಾಡಲಿಲ್ಲವೆಂದರೆ ತಾಲೂಕಿನ ಜನರೊಂದಿಗೆ ಅನುದಾನಕ್ಕಾಗಿ ಹೋರಾಟ ನಡೆಸಲಿದ್ದೇನೆ ಎಂದರು.

Latest Videos
Follow Us:
Download App:
  • android
  • ios