ಎಕ್ಸ್‌ಪ್ರೆಸ್ ಕೆನಾಲ್ ಕಾಮಗಾರಿ ವಿರೋಧಿಸುವ ಶಕ್ತಿ ಡಿಕೆಶಿಗಿದೆ: ಮಾಜಿ ಶಾಸಕ ಎ.ಮಂಜುನಾಥ್
ರೈತ ಸಂಘದ ಮುಖಂಡರು ಹೇಮಾವತಿ ಯೋಜನೆಯ ಎಕ್ಸ್‌ಪ್ರೆಸ್ ಕೆನಾಲ್ ಕಾಮಗಾರಿಗೆ ತೀವ್ರ ವಿರೋಧ ವ್ಯಕ್ತಪಡಿಸುತ್ತಿದ್ದು ಈ ವಿರೋಧಗಳನ್ನು ಎದುರಿಸುವ ಶಕ್ತಿ ಉಪ ಮುಖ್ಯಮಂತ್ರಿ ಹಾಗೂ ಜಲ ಸಂಪನ್ಮೂಲ ಸಚಿವರೂ ಆದ ಡಿ.ಕೆ.ಶಿವಕುಮಾರ್ ಅವರಿಗಿದೆ ಎಂದು ಮಾಜಿ ಶಾಸಕ ಎ.ಮಂಜುನಾಥ್ ಹೇಳಿದರು.
ಮಾಗಡಿ (ಮೇ.08): ತುಮಕೂರು ಜಿಲ್ಲೆಯ ಶಾಸಕರು, ಮಾಜಿ ಸಚಿವರು, ರೈತ ಸಂಘದ ಮುಖಂಡರು ಹೇಮಾವತಿ ಯೋಜನೆಯ ಎಕ್ಸ್‌ಪ್ರೆಸ್ ಕೆನಾಲ್ ಕಾಮಗಾರಿಗೆ ತೀವ್ರ ವಿರೋಧ ವ್ಯಕ್ತಪಡಿಸುತ್ತಿದ್ದು ಈ ವಿರೋಧಗಳನ್ನು ಎದುರಿಸುವ ಶಕ್ತಿ ಉಪ ಮುಖ್ಯಮಂತ್ರಿ ಹಾಗೂ ಜಲ ಸಂಪನ್ಮೂಲ ಸಚಿವರೂ ಆದ ಡಿ.ಕೆ.ಶಿವಕುಮಾರ್ ಅವರಿಗಿದೆ ಎಂದು ಮಾಜಿ ಶಾಸಕ ಎ.ಮಂಜುನಾಥ್ ಹೇಳಿದರು.
ಸುದ್ದಿಗರೊಂದಿಗೆ ಮಾತನಾಡಿದ ಅವರು, ಮಾಗಡಿ ತಾಲೂಕಿನ 63 ಕೆರೆಗಳಿಗೆ ಮತ್ತು ಕುಣಿಗಲ್ ಹೋಬಳಿಯ ಕೆರೆಗಳಿಗೆ ಹೇಮಾವತಿ ನೀರು ತುಂಬಿಸುವ ಯೋಜನೆಗಾಗಿ ಜಲಸಂಪನ್ಮೂಲ ಸಚಿವರಾದ ಡಿ.ಕೆ.ಶಿವಕುಮಾರ್ ಅವರು ಎಕ್ಸ್‌ಪ್ರೆಸ್ ಕೆನಾಲ್ ಕಾಮಗಾರಿಗೆ ಚಾಲನೆ ನೀಡಿದ್ದಾರೆ. ಈಗ ತುಮಕೂರಿನ ಶಾಸಕರು ತೀವ್ರ ವಿರೋಧ ವ್ಯಕ್ತಪಡಿಸುತ್ತಿದ್ದು, ಇದನ್ನು ಎದುರಿಸುವ ಶಕ್ತಿ, ಅಧಿಕಾರ ಜನ ಡಿ.ಕೆ.ಶಿವಕುಮಾರ್‌ಗೆ ನೀಡಿದ್ದಾರೆ.
ವಿರೋಧಿಗಳನ್ನು ಮೆಟ್ಟಿ ನಿಂತಿ ಎಕ್ಸ್‌ಪ್ರೆಸ್ ಕೆನಾಲ್ ಕಾಮಗಾರಿ ಪೂರ್ಣಗೊಳಿಸಿ ಮಾಗಡಿ ತಾಲೂಕಿನ ಕೆರೆಗಳಿಗೆ ನೀರು ತುಂಬಿಸುವುದಾದರೆ ನಮ್ಮ ಸಂಪೂರ್ಣ ಸಹಕಾರ ನೀಡುತ್ತೇವೆ. ಅಲ್ಲಿ ವಿರೋಧಿಸುತ್ತಿರುವ ಶಾಸಕರು ಅಲ್ಲಿನ ಜನಗಳ ಹಿತಾಸಕ್ತಿ ಕಾಯುತ್ತಿದ್ದಾರೆ. ಜಲ ಸಂಪನ್ಮೂಲ ಸಚಿವರು ಮಾಗಡಿ ತಾಲೂಕಿನ ಕೆರೆಗಳಿಗೆ ಹೇಮಾವತಿ ಯೋಜನೆ ಪೂರ್ಣಗೊಳಿಸಿ ರೈತರಿಗೆ ಅನುಕೂಲ ಮಾಡಿಕೊಟ್ಟು ಅವರ ಹಿತ ಕಾಯುವ ನಂಬಿಕೆ ನಮಗಿದೆ ಎಂದು ತಿಳಿಸಿದರು.
ಪ್ರಜ್ವಲ್ ರೇವಣ್ಣ ಲೈಂಗಿಕ ಪ್ರಕರಣ ನ್ಯಾಯಾಂಗ ತನಿಖೆಗೆ: ಜಿ.ಟಿ.ದೇವೇಗೌಡ
ಕಾಮಗಾರಿ ನಿಲ್ಲಿಸಲು ಮೂರು ದಿನ ಗಡವು: ತುಮಕೂರಲ್ಲಿ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮಾಜಿ ಸಚಿವ ಸೊಗಡು ಶಿವಣ್ಣ, ಶಾಸಕ ಎಂ.ಟಿ. ಕೃಷ್ಣಪ್ಪ, ಮಾಜಿ ಶಾಸಕ ಹೆಚ್.ನಿಂಗಪ್ಪ, ಎಪಿಎಂಸಿ ಮಾಜಿ ಅಧ್ಯಕ್ಷ ಪಂಚಾಕ್ಷರಯ್ಯ ಹಾಗೂ ರೈತ ಮುಖಂಡರು ಯಾವುದೇ ಕಾರಣಕ್ಕೂ ಎಕ್ಸ್‌ಪ್ರೆಸ್ ಕೆನಾಲ್ ಮೂಲಕ ರಾಮನಗರ ಜಿಲ್ಲೆಗೆ ನೀರು ಹರಿಸುವ ಕಾಮಗಾರಿ ಮಾಡಬಾರದು. ಇದರಿಂದ ಗುಬ್ಬಿ ಸೇರಿದಂತೆ ಇತರ ತಾಲೂಕುಗಳಿಗೆ ನೀರಿನ ಅಭಾವ ಹೆಚ್ಚಾಗಲಿದೆ. ಕೆಡಿಪಿ ಸಭೆಯಲ್ಲೂ ವಿರೋಧ ವ್ಯಕ್ತವಾಗಿದ್ದರೂ ಕಾಮಗಾರಿ ಆರಂಭವಾಗಿದೆ. ಕಾಮಗಾರಿ ಮುಂದುವರೆಸಿದರೆ ಗುಬ್ಬಿಯ ಡಿ.ರಾಂಪುರ ಬಳಿ ಆರಂಭವಾಗುತ್ತಿರುವ ಕಾಮಗಾರಿಗೆ ಮುತ್ತಿಗೆ ಹಾಕಲಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.