ಕಾಂಗ್ರೆಸ್‌ನಲ್ಲಿ 'ಸಂ'ಕ್ರಾಂತಿ: ಕುತೂಹಲ ಮೂಡಿಸಿದ ಸಿದ್ದು ಡಿಕೆಶಿ ಭೇಟಿ

ಲೋಕಸಭಾ ಚುನಾವಣೆ ಮತ್ತು ವಿಧಾನಸಭೆ ಉಪಚುನಾವಣೆಯಲ್ಲಿ ಹೀನಾಯವಾಗಿ ಸೋಲುಕಂಡಿರುವ ಕರ್ನಾಟಕ ಕಾಂಗ್ರೆಸ್‌ಗೆ ಶಕ್ತಿ ತುಂಬಲು ಹೈಕಮಾಂಡ್ ಪ್ರಯತ್ನಿಸುತ್ತಿದೆ. ಸಂಕ್ರಾಂತಿಗೆ ರಾಜ್ಯ ಕಾಂಗ್ರೆಸ್‌ಗೆ ಹೊಸ ಕ್ರಾಂತಿ ತರಲು ಮುಂದಾಗಿದೆ. ಈ ಹಿನ್ನೆಲೆಯಲ್ಲಿ ಸರಣಿ ಸಭೆಗಳನ್ನು ಮಾಡುತ್ತಿದೆ. ಇದರ ಮಧ್ಯೆ ಡಿಕೆಶಿ ದಿಢೀರ್ ಸಿದ್ದರಾಮಯ್ಯ ಮನೆಗೆ ದೌಡಾಯಿಸಿರುವುದು ಭಾರೀ ಕುತೂಹಲ ಮೂಡಿಸಿದೆ. 

dk shivakumar meets opposition Leader siddaramaiah In Bengaluru

ಬೆಂಗಳೂರು, (ಜ.05): ರಾಜ್ಯ ಕಾಂಗ್ರೆಸ್ ಪಾಳಯದಲ್ಲಿ ಕೆಪಿಸಿಸಿ ಅಧ್ಯಕ್ಷ ಸ್ಥಾನ ಕುರಿತು ಗೊಂದಲಗಳು ಮುಂದುವರೆದಿದ್ದು, ಈ ನಡುವಲ್ಲೇ ಡಿಕೆ.ಶಿವಕುಮಾರ್  ದಿಢೀರ್  ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.

ಶನಿವಾರ ಡಾ.ಜಿ.ಪರಮೇಶ್ವರ್ ನಿವಾಸದಲ್ಲಿ ಕಾಂಗ್ರೆಸ್‌ ಹಿರಿಯ ನಾಯಕ, ವರಿಷ್ಠ ಬಳಗದಲ್ಲಿ ಗುರುತಿಸಿಕೊಂಡಿರುವ ಗುಲಾಮ್‌ ನಬಿ ನೇತೃತ್ವದಲ್ಲಿ ಸಭೆ ನಡೆಸಿದ್ದರು.

ಇದರ ಬೆನ್ನಲ್ಲೇ ಭಾನುವಾರ ಕಾವೇರಿ ನಿವಾಸದಲ್ಲಿ ಡಿ. ಕೆ. ಶಿವಕುಮಾರ್ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿರುವುದು ಕುತೂಹಲಕ್ಕೆ ಕಾರಣವಾಗಿದೆ.

ಡಿಕೆಶಿ ಕೆಪಿಸಿಸಿ ಪಟ್ಟ ಕಟ್ಟುವುದು ಬಹುತೇಕ ಖಚಿತ ಎನ್ನಲಾಗಿದೆ. ಆದ್ರೆ, ಮತ್ತೊಂದೆಡೆ ಕೆ. ಎಚ್. ಮುನಿಯಪ್ಪ, ಬಿ. ಕೆ. ಹರಿಪ್ರಸಾದ್ ಸೇರಿದಂತೆ ಇನ್ನಷ್ಟು ಕೆಲ ಮೂಲ ಕಾಂಗ್ರೆಸ್ಸಿಗರು ನಮಗೂ ಬೇಕೆಂದು ಪಟ್ಟುಹಿಡಿದಿದ್ದಾರೆ. ಈ ಹಿನ್ನೆಲೆಯಲ್ಲಿ ಇದನ್ನು ಬಗೆಹರಿಸಿ ಎಂದು ಡಿಕೆಶಿ ಸಿದ್ದರಾಮಯ್ಯನವರ ಮೊರೆ ಹೋಗಿದ್ದಾರೆ.

ಪರಂ ನಿವಾಸದಲ್ಲಿ ನಡೆದ ಸಭೆ
ಶನಿವಾರ ಡಾ.ಜಿ.ಪರಮೇಶ್ವರ್ ನಿವಾಸದಲ್ಲಿ ಕಾಂಗ್ರೆಸ್‌ ಹಿರಿಯ ನಾಯಕ, ವರಿಷ್ಠ ಬಳಗದಲ್ಲಿ ಗುರುತಿಸಿಕೊಂಡಿರುವ ಗುಲಾಮ್‌ ನಬಿ ನೇತೃತ್ವದಲ್ಲಿ ಸಭೆ ನಡೆದಿದೆ. ಈ ವೇಳೆ ಕೆಪಿಸಿಸಿ ಹಾಗೂ ಶಾಸಕಾಂಗ ನಾಯಕ ಆಯ್ಕೆ ಬಗ್ಗೆ ಸುದೀರ್ಘ ಚರ್ಚೆಗಳು ನಡೆದಿವೆ.  

ಸಿಎಲ್‌ಪಿ ನಾಯಕ ಮತ್ತು ಪ್ರತಿಪಕ್ಷ ನಾಯಕ ಸ್ಥಾನವನ್ನು ಪ್ರತ್ಯೇಕಿಸುವ ಬಗ್ಗೆ ಚರ್ಚೆ ನಡೆದಿದ್ದು, ಇದಕ್ಕೆ ಸಿದ್ದರಾಮಯ್ಯ ಆಕ್ಷೇಪ ವ್ಯಕ್ತಪಡಿಸಿದ್ದಾರೆ ಎಂದು ತಿಳಿದುಬಂದಿದೆ. ಸಿಎಲ್‌ಪಿ ನಾಯಕರು ಆಗುವವರೇ ಪ್ರತಿಪಕ್ಷ ನಾಯಕರಾಗಿರುತ್ತಾರೆ. ಇಲ್ಲಿವರೆಗೆ ಅದೇ ರೀತಿ ನಡೆದುಕೊಂಡು ಬಂದಿದೆ. ಇದೀಗ ಅದನ್ನು ಬದಲಿಸುವುದು ಬೇಡ ಎಂದು ಸಿದ್ದರಾಮಯ್ಯ ಅವರು ಶನಿವಾರ ನಡೆದ ಸಭೆಯಲ್ಲಿ ಅಭಿಪ್ರಾಯ ತಿಳಿಸಿದ್ದಾರೆ.

Latest Videos
Follow Us:
Download App:
  • android
  • ios