ನಾನು ಸಿಎಂ ಆಗಬೇಕೆಂಬ ಕೂಗು ಎದ್ದಿರಬಹುದು, ಅದಿಲ್ಲಿ ಗೌಣ: ಡಿಕೆಶಿ

ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವಿನ ಬೆನ್ನಲ್ಲೇ ಡಿಕೆಶಿ ಮುಖ್ಯಮಂತ್ರಿ ಹುದ್ದೆಯ ಆಕಾಂಕ್ಷೆಯನ್ನು ತಳ್ಳಿ ಹಾಕಿದ್ದಾರೆ. ಕ್ಷೇತ್ರದ ಅಭಿವೃದ್ಧಿಗೆ ಆದ್ಯತೆ ನೀಡುವುದಾಗಿ ಹೇಳಿದರು. ಸಂಪುಟ ಪುನರ್ ರಚನೆಯ ಸುದ್ದಿಯನ್ನು ಅಲ್ಲಗಳೆದರು.

Dk Shivakumar on Chief Minister Post After Channapatna By Election Win san

ಕನಕಪುರ (ನ.25):ಉಪ ಚುನಾವಣೆಯಲ್ಲಿ ಕಾಂಗ್ರೆಸ್‌ ಗೆದ್ದಿರುವ ಹೊತ್ತಿನಲ್ಲಿ ಕಾರ್ಯಕರ್ತರು ನಾನು ಮುಖ್ಯಮಂತ್ರಿ ಆಗಬೇಕೆಂದು ಕೂಗು ಹಾಕಿರಬಹುದು. ಆದರೆ, ಅವರು ಮುಖ್ಯಮಂತ್ರಿಯಾಗಬೇಕು, ಇವರು ಮುಖ್ಯಮಂತ್ರಿಯಾಗಬೇಕು ಎಂಬುದೆಲ್ಲ ಇಲ್ಲಿ ಗೌಣ. ನಮ್ಮ ಮೇಲೆ ಜನ ವಿಶ್ವಾಸ ಇಟ್ಟು ಮತ ಹಾಕಿದ್ದಾರೆ. ನಮಗೆ ಕ್ಷೇತ್ರದ ಅಭಿವೃದ್ಧಿ ಮುಖ್ಯ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಹೇಳಿದರು. ಸುದ್ದಿಗಾರರ ಜೊತೆ ಮಾತನಾಡಿ, ಸಂಪುಟ ಪುನರ್‌ ರಚನೆ ಸಾಧ್ಯತೆಯನ್ನೂ ತಳ್ಳಿ ಹಾಕಿದರು. ಸಂಪುಟ ಪುನರ್‌ ರಚನೆ ಎಲ್ಲ ಸುಳ್ಳು. ಅಂಥದ್ದು ಯಾವುದೂ ಇಲ್ಲ. ಹಾಗೇನಾದರೂ ಇದ್ದರೆ ಮುಖ್ಯಮಂತ್ರಿ ಅವರನ್ನೇ ಕೇಳಬೇಕು ಎಂದರು.

ಚನ್ನಪಟ್ಟಣದಲ್ಲಿ ಬಿಜೆಪಿ-ಜೆಡಿಎಸ್ ಸಹಕಾರದಿಂದಲೇ ನಮಗೆ ಜಯ ಸಿಕ್ಕಿದೆ: ಡಿಕೆಶಿ

ಚನ್ನಪಟ್ಟಣದ ಗೆಲುವಿನ ಕೀರ್ತಿ ಕ್ಷೇತ್ರದ ಮತದಾರರಿಗೆ ಹಾಗೂ ಎಲ್ಲಾ ಕಾರ್ಯಕರ್ತರಿಗೆ ಸೇರಬೇಕು. ಇದರಲ್ಲಿ ನಮ್ಮ ಸಾಧನೆ ಏನೂ ಇಲ್ಲ. ಇದು ಒಬ್ಬರಿಗೆ ಸೇರುವ ಗೆಲುವಲ್ಲ, ಎಲ್ಲರೂ ಸೇರಿ ಶ್ರಮಪಟ್ಟ ಕಾರಣಕ್ಕೆ ಅಭೂತಪೂರ್ವ ಗೆಲುವು ದೊರೆತಿದೆ. ಅಪೂರ್ವ ಸಹೋದರರಿಗೆ ಮಾತ್ರ ಗೆಲುವಿನ ಗರಿಯಲ್ಲ. ನಮ್ಮ ಸರ್ಕಾರ ಅಧಿಕಾರದಲ್ಲಿರುವುದರಿಂದ ಯೋಗೇಶ್ವರ್ ಗೆಲ್ಲಿಸಿದರೆ ಕ್ಷೇತ್ರದ ಅಭಿವೃದ್ಧಿ ಸಾಧ್ಯ ಎಂದು ಮತದಾರರು ನಮ್ಮ ಪರ ನಿಂತು ನಮ್ಮ ಮೇಲೆ ವಿಶ್ವಾಸವಿಟ್ಟು ಬೆಂಬಲಿಸಿದ್ದಾರೆ. ಇದಕ್ಕಾಗಿ ಜನರಿಗೆ ಅಭಾರಿಯಾಗಿದ್ದೇನೆ. ಜಿಲ್ಲೆಯನ್ನು ಜೆಡಿಎಸ್ ಮುಕ್ತ ಮಾಡುವುದು ನಮಗೆ ಮುಖ್ಯವಲ್ಲ. 19 ಇದ್ದ ಆ ಪಕ್ಷದ ಶಾಸಕರ ಸಂಖ್ಯೆ 18ಕ್ಕೆ ಇಳಿದಿರುವುದು ಸಮಾಧಾನ ತಂದಿದೆ ಎಂದು ಹೇಳಿದರು.

Shiggaon By Election ಬೊಮ್ಮಾಯಿ ಕುಟುಂಬಕ್ಕೆ ಬೆಂಬಿಡದ ಮೊದಲ ಸೋಲು!


 

Latest Videos
Follow Us:
Download App:
  • android
  • ios