Asianet Suvarna News Asianet Suvarna News

ಕೊಪ್ಪಳ ಕ್ಷೇತ್ರದ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ ಸಿದ್ದರಾಮಯ್ಯಗೆ ಡಿಕೆಶಿ ತಿರುಗೇಟು

ಕೊಪ್ಪಳ ಜಿಲ್ಲೆಯ ಐದು ಕ್ಷೇತ್ರಗಳ ಅಭ್ಯರ್ಥಿಗಳ ಹೆಸರನ್ನು ಸಿದ್ದರಾಮಯ್ಯ ಘೋಷಿಸಿದ್ದು, ಇದಕ್ಕೆ ಕೆಪಿಸಿಸಿ  ಅಧ್ಯಕ್ಷ  ಡಿಕೆಶಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.  ಅಭ್ಯರ್ಥಿಗಳನ್ನು ಘೋಷಣೆ ಮಾಡುವ ಹಕ್ಕು ಸಿದ್ದರಾಮಯ್ಯ ಅವರಿಗೆ ಇಲ್ಲ ಎಂದಿದ್ದಾರೆ.   

dk shivakumar opposed for Siddaramaiah announced candidates for Koppal Constituency gow
Author
First Published Nov 21, 2022, 11:00 AM IST

ಬೆಂಗಳೂರು (ನ.21): 2023ರಲ್ಲಿ ನಡೆಯುವ ವಿಧಾನಸಭಾ ಚುನಾವಣೆಗೆ ಜಿಲ್ಲೆಯ ಐದು ಕ್ಷೇತ್ರಗಳ ಅಭ್ಯರ್ಥಿಗಳ ಹೆಸರನ್ನು ಸಿದ್ದರಾಮಯ್ಯ ಘೋಷಿಸಿದ್ದು ಈಗ ಸ್ವಪಕ್ಷದವರ ಅಸಮಾಧಾನಕ್ಕೆ ಕಾರಣವಾಗಿದೆ. ಈ ಬಗ್ಗೆ ಮಾತನಾಡಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್  ಅಭ್ಯರ್ಥಿಗಳನ್ನು ಘೋಷಣೆ ಮಾಡುವ ಹಕ್ಕು ಸಿದ್ದರಾಮಯ್ಯ ಅವರಿಗೆ ಇಲ್ಲ ಎಂದಿದ್ದಾರೆ.  ಮಾತ್ರವಲ್ಲ ನನಗೂ ಅಭ್ಯರ್ಥಿಗಳನ್ನು ಘೋಷಣೆ ಮಾಡುವ ಹಕ್ಕಿಲ್ಲ. ಎಐಸಿಸಿಗೆ ಮಾತ್ರ ಅಭ್ಯರ್ಥಿಗಳ ಘೋಷಣೆ ಮಾಡುವ ಹಕ್ಕು ಇರುವುದು. ಅವರು ಯಾವ ಅರ್ಥದಲ್ಲಿ ಹೇಳಿದ್ದಾರೆ ಗೊತ್ತಿಲ್ಲ ಎಂದು ತಿರುಗೇಟು ನೀಡಿದ್ದಾರೆ.   ಕೆಲ ಸಂದರ್ಭಗಳಲ್ಲಿ ಕಳೆದ ಸೋಲು ಕಂಡವರಿಗೆ ಪ್ರೋತ್ಸಾಹ ಮಾಡಲು ಹೇಳಿರಬಹುದು. ಅದನ್ನು ಬಿಟ್ಟರೆ ಮಲ್ಲಿಕಾರ್ಜುನ ಅವರೇ ನಮಗೆ ಹೈಕಮಾಂಡ್. ಅವರಿಗೆ  ಘೋಷಣೆ ಮಾಡುವ ಹಕ್ಕಿದೆ. ನನಗೂ ಕೂಡ ಆ ಹಕ್ಕಿಲ್ಲ ಎಂದು  ಡಿಕೆ ಶಿವಕುಮಾರ್ ಹೇಳಿದ್ದಾರೆ.  ಕೊಪ್ಪಳ ಕ್ಷೇತ್ರದಲ್ಲಿ ರಾಘವೇಂದ್ರ ಹಿಟ್ನಾಳ, ಗಂಗಾವತಿಯಲ್ಲಿ ಇಕ್ಬಾಲ ಅನ್ಸಾರಿ, ಕನಕಗಿರಿಯಲ್ಲಿ ಶಿವರಾಜ ತಂಗಡಗಿ, ಕುಷ್ಟಗಿಯಲ್ಲಿ ಅಮರೇಗೌಡ ಭಯ್ಯಾಪುರ, ಯಲಬುರ್ಗಾದಲ್ಲಿ ಬಸವರಾಜ ರಾಯರಡ್ಡಿ ಅವರನ್ನು ಗೆಲ್ಲಿಸುವ ಹೊಣೆಗಾರಿಗೆ ನಿಮ್ಮದು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ನಿನ್ನೆ ಕೊಪ್ಪಳದಲ್ಲಿ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ್ದರು.

ಸಿದ್ದರಾಮಯ್ಯನವರೇ ಆಹ್ವಾನ ಇಲ್ಲದಿದ್ರೂ ಯಾಕೆ ಬಂದ್ರಿ : ಉಗ್ರಪ್ಪ ಪ್ರಶ್ನೆ

 

ಬಿಜೆಪಿಯಿಂದ ಮತ ಕಳ್ಳತನ ಕೆಲಸ: ಸಿದ್ದು
ಮುಂಬರುವ ಚುನಾವಣೆಯಲ್ಲಿ ಸೋಲುತ್ತೇವೆ ಎಂಬ ಭಯದಲ್ಲಿ ಬಿಜೆಪಿಯವರು ತಮಗೆ ಓಟ್‌ ಹಾಕದ ಅಹಿಂದ ವರ್ಗದ ಮತದಾರರ ಹೆಸರುಗಳನ್ನು ಡಿಲಿಟ್‌ ಮಾಡಿದ್ದಾರೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಆರೋಪಿಸಿದರು.

 

ಎಸ್‌ಸಿ, ಎಸ್‌ಟಿ ಅಭಿವೃದ್ಧಿ ಬಗ್ಗೆ ಬಿಜೆಪಿ ಆರೋಪ ಅಲ್ಲಗಳೆದ ಸಿದ್ದರಾಮಯ್ಯ

ಕೊಪ್ಪಳ ತಾಲೂಕಿನ ವಣಬಳ್ಳಾರಿಯಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿ, ಬಿಜೆಪಿಗೆ ಸೋಲಿನ ಭಯ ಶುರುವಾಗಿದೆ. ಹೀಗಾಗಿ, 28 ಕ್ಷೇತ್ರಗಳಲ್ಲಿ ಮತದಾರರ ಹೆಸರನ್ನು ಡಿಲಿಟ್‌ ಮತ್ತು ಸೇರ್ಪಡೆ ಮಾಡಿದ್ದಾರೆ. ಒಂದೊಂದು ಕ್ಷೇತ್ರದಲ್ಲಿ 50-60 ಸಾವಿರ ಜನರ ಹೆಸರು ಡಿಲಿಟ್‌ ಆಗಿದೆ. ಅವರಿಗೆ ಮತ ಹಾಕಲ್ಲ ಎನ್ನುವವರನ್ನು ನೋಡಿ ಡಿಲಿಟ್‌ ಮಾಡಿದ್ದಾರೆ. ಹೆಚ್ಚಾಗಿ ಅಹಿಂದ ವರ್ಗದವರ ಮತಗಳೆ ಡಿಲಿಟ್‌ ಆಗಿವೆ. ಹೀಗಾಗಿ, ಈ ಬಗ್ಗೆ ನ್ಯಾಯಾಂಗ ತನಿಖೆ ಮಾಡಿ ಎಂದು ಒತ್ತಾಯ ಮಾಡಿದ್ದೇವೆ. ಹೈಕೋರ್ಟ್ ಅಥವಾ ಸುಪ್ರೀಂಕೋರ್ಚ್‌ನ ನ್ಯಾಯಮೂರ್ತಿಗಳಿಂದ ತನಿಖೆ ಮಾಡಿಸಲಿ ಎಂದರು

Follow Us:
Download App:
  • android
  • ios