ಬೆಂಗಳೂರು, (ಡಿ.07): ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವನ್ನ ಸಂಘಟಿಸಲು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಅಖಾಡಕ್ಕಿಳಿದಿದ್ದು, ಕೆಲ ನಾಯಕರನ್ನು ಪಕ್ಷಕ್ಕೆ ಕರೆತರುವ ಕಾರ್ಯಕ್ಕೆ ಮುಂದಾಗಿದ್ದಾರೆ.

ಹೌದು....ಡಿಕೆ ಶಿವಕುಮಾರ್ ಅವರು ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ ಸೇರಿದಂತೆ ಇನ್ನೂ ಕೆಲ ನಾಯಕರುಗಳಿಗೆ ಗಾಳ ಹಾಕಿದ್ದು, ಶೀಘ್ರವೇ ಅವರನ್ನ ಪಕ್ಷಕ್ಕೆ ಬರಮಾಡಿಕೊಳ್ಳಲು ಎಲ್ಲಾ ರೀತಿಯ ಪ್ಲಾನ್‌ ಮಾಡುತ್ತಿದ್ದಾರೆ.

ಕಾಂಗ್ರೆಸ್‌ ಹಿರಿಯ ನಾಯಕನನ್ನು ಭೇಟಿಯಾದ ಕುಮಾರಸ್ವಾಮಿ, ಜೆಡಿಎಸ್‌ಗೆ‌ ಆಹ್ವಾನ..!

ಈ ಬಗ್ಗೆ ಸ್ವತಃ ಡಿಕೆ ಶಿವಕುಮಾರ್ ಅವರೇ ಹೇಳಿದ್ದು, ಹೊಸಪೇಟೆಯ ಪಕ್ಷೇತರ ಶಾಸಕ ಶರತ್ ಬಚ್ಚೆಗೌಡ, ಮಡಕೇರಿಯ ಜೀವಿಜಯ ಸೇರಿದಂತೆ ಅನೇಕ ನಾಯಕರು ಕಾಂಗ್ರೆಸ್ ಸೇರ್ಪಡೆಯಾಗುತ್ತಾರೆ ಎಂದು ಸ್ಪಷ್ಟಪಡಿಸಿದರು.

ಕೆಪಿಸಿಸಿ ಕಚೇರಿಯಲ್ಲಿಂದು ದೇವನಹಳ್ಳಿ ತಾಲ್ಲೂಕಿನ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಸಿ.ರಾಜಣ್ಣ ಅವರು, ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾದರು. ಈ ವೇಳೆ ಮತನಾಡಿದ ಡಿಕೆಶಿ,  ಹಂತ ಹಂತವಾಗಿ ಎಲ್ಲರನ್ನು ಪಕ್ಷಕ್ಕೆ ಬರಮಾಡಿಕೊಳ್ಳ ಲಾಗುವುದು ಎಂದು ಹೇಳಿದರು.

ಇದೇ 9ರಂದು ಮಡಕೇರಿಯ ಜೀ ವೀಜಯ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗುತ್ತಿದ್ದಾರೆ. ಕಾಂಗ್ರೆಸ್ ಸೇರ್ಪಡೆಯಾಗುವವರ ಪಟ್ಟಿ ದೊಡ್ಡದಿದೆ. ಕಾಂಗ್ರೆಸ್‍ನ ಜಾತ್ಯಾತೀತ ನಿಲುವು ಸಿದ್ಧಾಂತಗಳು ಬೇರೆ ಪಕ್ಷಗಳಲ್ಲಿ ಕಾಣಲಾಗುವುದಿಲ್ಲ ಎಂದರು.

ಕೆಲವು ಕ್ಷೇತ್ರಗಳ ಉಸ್ತುವಾರಿ ಯನ್ನು ಈಗಾಗಲೇ ಹಂಚಿಕೆ ಮಾಡಲಾಗಿದೆ. ನಾರಾ ಯಣಸ್ವಾಮಿ ಅವರನ್ನು ಶಿಡ್ಲಘಟ್ಟಕ್ಕೆ ನೇಮಿಸಿ ಆದೇಶ ಮಾಡುತ್ತಿದ್ದೇನೆ ಎಂದು ಹೇಳಿದರು. ಹೊಸಕೋಟೆಯಿಂದ ಶಾಸಕ ಶರತ್ ಬಚ್ಚೆಗೌಡ ಅವರನ್ನು ಸೇಪಡೆ ಮಾಡಿಕೊಳ್ಳಲು ಮಾತುಕತೆ ನಡೆಸಲಾಗಿದೆ ಎಂದು ತಿಳಿಸಿದರು.