ಬಿಜೆಪಿ ಅಭ್ಯರ್ಥಿಗಳ ಪ್ರಚಾರಕ್ಕೆ ಅಡ್ಡಿ ಸಲ್ಲದು: ಕಾರ್ಯಕರ್ತರಿಗೆ ಡಿಕೆಶಿ ಮನವಿ

ನಾನು ಟೆಂಪಲ್‌ ರನ್‌ ಮಾಡುತ್ತಿಲ್ಲ. ಪ್ರಚಾರ ಮಾಡುತ್ತಿದ್ದೇನೆ. ನಮ್ಮ ಧರ್ಮ, ನಮ್ಮ ಸಂಸ್ಕೃತಿ, ನಮ್ಮ ದೇವರ ಬಗ್ಗೆ ನನಗೆ ನಂಬಿಕೆ ಇದೆ. ನಾನು ಹೋದ ಕ್ಷೇತ್ರಗಳಲ್ಲಿರುವ ದೇವಸ್ಥಾನಗಳಿಗೆ ಭೇಟಿ ಕೊಟ್ಟು ಪ್ರಾರ್ಥನೆ ಮಾಡುತ್ತಿದ್ದೇನೆ ಎಂದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌. 

DK Shivakumar Request For Campaign of BJP Candidates should not be Hindered grg

ಕುಂದಾಪುರ(ಏ.24):  ಕನಕಪುರದಲ್ಲಿ ನಮ್ಮ ಎದುರಾಳಿಗಳು ಎಷ್ಟು ಬೇಕಾದರೂ ಪ್ರಚಾರ ಮಾಡಲಿ. ಅವರಿಗೆ ದೊಡ್ಡ ಅವಕಾಶ ಇದೆ. ಯಾರ ಮನವನ್ನು ಬೇಕಾದರೂ ಒಲಿಸಲಿ. ಮತದಾರರ ಬಳಿ ಏನು ಬೇಕಾದರೂ ಕೇಳಿಕೊಳ್ಳಲಿ. ಆರ್‌. ಅಶೋಕ್‌ ಅವರಿಗೆ ನಾವು ಯಾವುದೇ ಅಡಚಣೆ ಮಾಡುವುದಿಲ್ಲ. ಕಾಂಗ್ರೆಸ್‌ ಕಾರ್ಯಕರ್ತರು ಯಾರು ಮಾತನಾಡಬಾರದು. ಗೌರವದಿಂದ ನಡೆದುಕೊಳ್ಳಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌, ಕನಕಪುರದ ಕಾಂಗ್ರೆಸ್‌ ಕಾರ್ಯಕರ್ತರಲ್ಲಿ ಮನವಿ ಮಾಡಿದ್ದಾರೆ.

ಕನಕಪುರದಲ್ಲಿ ಆರ್‌. ಅಶೋಕ್‌ ಅವರು ಕೆಲ ನಿಮಿಷದ ಮತ ಪ್ರಚಾರದ ಸುದ್ದಿ ಕುರಿತಂತೆ ಬೈಂದೂರಿನಲ್ಲಿ ಡಿಕೆಶಿ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದರು. ನಾನು ಟೆಂಪಲ್‌ ರನ್‌ ಮಾಡುತ್ತಿಲ್ಲ. ಪ್ರಚಾರ ಮಾಡುತ್ತಿದ್ದೇನೆ. ನಮ್ಮ ಧರ್ಮ, ನಮ್ಮ ಸಂಸ್ಕೃತಿ, ನಮ್ಮ ದೇವರ ಬಗ್ಗೆ ನನಗೆ ನಂಬಿಕೆ ಇದೆ. ನಾನು ಹೋದ ಕ್ಷೇತ್ರಗಳಲ್ಲಿರುವ ದೇವಸ್ಥಾನಗಳಿಗೆ ಭೇಟಿ ಕೊಟ್ಟು ಪ್ರಾರ್ಥನೆ ಮಾಡುತ್ತಿದ್ದೇನೆ ಎಂದರು.

ಜನಸಂಖ್ಯೆ ಆಧಾರದಲ್ಲಿ ಮೀಸಲಾತಿ ಇರಬೇಕು, 50% ಮೀಸಲಾತಿ ತೆಗೆದು ಹಾಕಿ: ಬಿಜೆಪಿ ವಿರುದ್ಧ ರಾಹುಲ್ ವಾಗ್ದಾಳಿ

ಕಾಂಗ್ರೆಸ್‌ ಗ್ಯಾರಂಟಿ ಕಾರ್ಡ್‌ ಉಪ್ಪಿನಕಾಯಿ ಹಾಕಲು ಎಂದು ಹೇಳಿಕೆ ಕೊಟ್ಟಸಿಎಂ ಬೊಮ್ಮಾಯಿ ಹೇಳಿಕೆಗೆ ತಿರುಗೇಟು ನೀಡಿದ ಡಿಕೆಶಿ, ಬಿಜೆಪಿ ರಾಜ್ಯಾದ್ಯಂತ ಜಾಹೀರಾತನ್ನು ಕೊಟ್ಟಿದೆ ಯಾತಕ್ಕಾಗಿ? ಮಹಿಳೆಯರಿಗೆ 2-3 ಸಾವಿರ ಹಣ ಕೊಡುವ ಭರವಸೆ ಕೊಟ್ಟಿದ್ದಾರೆ. ಬಜೆಟ್‌ನಲ್ಲಿ 1000 ಕೊಡುವುದಾಗಿ ಘೋಷಣೆ ಮಾಡಿದ್ದಾರೆ. ಪ್ರಣಾಳಿಕೆಯಲ್ಲಿ ಏಳರಿಂದ ಹತ್ತು ಗಂಟೆಗೆ ಕರೆಂಟ್‌ ಕೊಡುತ್ತೇವೆ ಎಂದಿದ್ದಾರೆ ರೈತರ ಆದಾಯ ಡಬಲ್‌ ಮಾಡುತ್ತೇವೆ ಎಂದಿದ್ದಾರೆ. ಹಾಗಾದರೆ ಬಿಜೆಪಿಯವರು ನೀಡಿರುವ ಈ ಭರವಸೆಗಳೆಲ್ಲ ಯಾವ ಕಾರ್ಡು ಎಂದು ಪ್ರಶ್ನಿಸಿದರು.

ಮೈಸೂರಿನಲ್ಲಿ ಸೋಮಣ್ಣ ಕಾರಿಗೆ ಕಾಂಗ್ರೆಸ್‌ ಕಾರ್ಯಕರ್ತರ ಮುತ್ತಿಗೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿ, ಪ್ರಜಾಪ್ರಭುತ್ವದಲ್ಲಿ ಎಲ್ಲರಿಗೂ ಮತಯಾಚನೆ ಮಾಡುವ ಹಕ್ಕಿದೆ. ಕಾಂಗ್ರೆಸ್‌ ಕಾರ್ಯಕರ್ತರು ಮುತ್ತಿಗೆ ಹಾಕಲು ಹೋಗಬಾರದು. ಯಾರು ಎಲ್ಲಿ ಬೇಕಾದರೂ ಪ್ರಚಾರ ಮಾಡಬಹುದು ಎಂದು ಮೈಸೂರು ಕಾಂಗ್ರೆಸ್‌ ಕಾರ್ಯಕರ್ತರಿಗೆ ಡಿಕೆಶಿ ಸೂಚನೆ ನೀಡಿದರು.

ಕರ್ನಾಟಕದಲ್ಲಿ ಒಂದೇ ಹಂತದಲ್ಲಿ ಮೇ 10ರಂದು ಮತದಾನ ನಡೆಯಲಿದ್ದು, ಮೇ 13ಕ್ಕೆ ಮತ ಎಣಿಕೆ ನಡೆಯಲಿದೆ. ಏಪ್ರಿಲ್ 13ಕ್ಕೆ ಚುನಾವಣೆ ಅಧಿಸೂಚನೆ ಹೊರಡಿಸಲಿದ್ದು, ಏಪ್ರಿಲ್ 13ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ. ನಾಮಪತ್ರ ಹಿಂಪಡೆಯಲು ಏಪ್ರಿಲ್ 24 ಕಡೆಯ ದಿನಾಂಕ.

Latest Videos
Follow Us:
Download App:
  • android
  • ios