ಬೆಂಗಳೂರು (ಮಾ.03):  ಸಚಿವ ಈಶ್ವರಪ್ಪ ಅವರು ಮುಖ್ಯಮಂತ್ರಿಗಳ ವಿರುದ್ಧವೇ ಸಿಡಿದೆದ್ದು, ರಾಜ್ಯಪಾಲರಿಗೆ ಪತ್ರ ಬರೆದ ಮೇಲೆ ಅವರು ಯಾರಿಗೆ ನಿಷ್ಠೆ ತೋರುತ್ತಿದ್ದಾರೆ? ಇಲ್ಲಿರುವವರೆಲ್ಲ ಚಿಕ್ಕ ಮಕ್ಕಳೇ? ಸಾಮಾನ್ಯ ಪ್ರಜ್ಞೆ ಇರುವ ಹಳ್ಳಿ ಜನರಿಗೂ ಇದರ ಬಗ್ಗೆ ಅರ್ಥವಾಗುತ್ತದೆ. 

ಮುಖ್ಯಮಂತ್ರಿ ವಿರುದ್ಧ ಬೇಸತ್ತು, ಎಲ್ಲ ಕಾನೂನು ನಿಯಮಗಳನ್ನು ನಮೂದಿಸಿ ರಾಜ್ಯಪಾಲರಿಗೆ ಪತ್ರ ಬರೆದು ಅವರು ಅವರ ಪಕ್ಷಕ್ಕೆ ನಿಷ್ಠರಿರಬಹುದು. ಆದರೆ ಮುಖ್ಯಮಂತ್ರಿಗಳಿಗೆ ನಿಷ್ಠೆ ತೋರುತ್ತಿಲ್ಲ. ಯಡಿಯೂರಪ್ಪ ಅವರು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಹೇಳಿದ್ದಾರೆ.

ರಾಸಲೀಲೆ ಸಿಡಿ ಕೇಸ್ : ಡಿಕೆಶಿ-ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಶುರುವಾಯ್ತು ಸಂಕಷ್ಟ..!? .

ಶುಕ್ರವಾರ ಬೆಂಗಳೂರಿನಲ್ಲಿ ಈ ಬಗ್ಗೆ ಪ್ರತಿಕ್ರಿಯಿಸಿದ ಅವರು, ಇಲ್ಲಿ ಸರ್ಕಾರದ ಆಡಳಿತ ಸಂಪೂರ್ಣವಾಗಿ ಕುಸಿದಿದೆ. ಮುಖ್ಯಮಂತ್ರಿಗಳು ಯಾಕೆ ಈಶ್ವರಪ್ಪ ಅವರನ್ನು ಸಂಪುಟದಿಂದ ವಜಾಗೊಳಿಸದೇ ಸುಮ್ಮನೆ ಕೂತಿದ್ದಾರೆ? ಆ ಮೂಲಕ ಮುಖ್ಯಮಂತ್ರಿಗಳೇ ತಾವು ತಪ್ಪು ಮಾಡಿರುವುದಾಗಿ ಒಪ್ಪಿಕೊಳ್ಳುತ್ತಿದ್ದಾರೆ.

ಹೀಗಾಗಿ ಯಡಿಯೂರಪ್ಪ ಅವರೇ ರಾಜೀನಾಮೆ ನೀಡಲಿ ಎಂದು ಒತ್ತಾಯಿಸಿದರು. ಶನಿವಾರ ನಾನು ಕೇರಳಕ್ಕೆ ತೆರಳಲಿದ್ದು, ಐದು ಕಡೆ ಸಭೆಯಲ್ಲಿ ಪಾಲ್ಗೊಳ್ಳಲಿದ್ದೇನೆ. ಆ ನಂತರ ರಾಜ್ಯಕ್ಕೆ ಮರಳಿ ಬೆಳಗಾವಿ, ಮಸ್ಕಿಯಲ್ಲಿ ಪ್ರಚಾರ ನಡೆಸಲಿದ್ದೇನೆ ಎಂದು ಹೇಳಿದರು.