ಯೋಗಿ ವಿರುದ್ಧ ಕ್ರಮ ಕೈಗೊಳ್ಳಿ ಎಂದು ಸಿಎಂಗೆ ಹೇಳಿದ ಡಿಕೆಶಿ
- ಸಚಿವ ಸಿ.ಪಿ ಯೋಗೇಶ್ವರ್ ವಿರುದ್ಧ ಕೆಪಿಸಿಸಿ ಅಧ್ಯಕ್ಷ ಡಿಕೆಶಿ ವಾಗ್ದಾಳಿ
- ಸ್ವಾಭಿಮಾನ ಇದ್ದರೆ ಸಿಎಂ ಕ್ರಮ ಕೈಗೊಳ್ಳಲಿ - ಡಿಕೆಶಿ
- ಸಚಿವ ಸಿ.ಪಿ. ಯೋಗೀಶ್ವರ್ ಹೆಸರು ಪ್ರಸ್ತಾಪಿಸದೆ ಅಸಮಾಧಾನ
ಬೆಂಗಳೂರು (ಮೇ.30): ಮೂರು ಪಕ್ಷಗಳ ಹೊಂದಾಣಿಕೆ ಸರ್ಕಾರ ಎಂದಿರುವ ಸಚಿವರ ವಿರುದ್ದ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಯೇ ಭ್ರಷ್ಟಾಚಾರ ಆರೋಪ ಮಾಡಿದ್ದಾರೆ.
ಇದರ ಆಧಾರದ ಮೇಲೆಯೇ ಎಸಿಬಿ ದೂರು ದಾಖಲಿಸಬಹುದು. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಮಾನ, ಸ್ವಾಭಿಮಾನ ಇದ್ದರೆ ಕ್ರಮ ಕೈಗೊಳ್ಳಲಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಕಿಡಿ ಕಾರಿದ್ದಾರೆ.
ಯೋಗೇಶ್ವರ್ ವಿರುದ್ಧ ಬಿಜೆಪಿಯಲ್ಲಿ ಭಾರೀ ಅಸಮಾಧಾನ : ಕೈ ತಪ್ಪುತ್ತಾ ಸಚಿವ ಸ್ಥಾನ? ...
ಸಚಿವ ಸಿ.ಪಿ. ಯೋಗೀಶ್ವರ್ ಹೆಸರು ಪ್ರಸ್ತಾಪಿಸದೆ ಮಾತನಾಡಿದ ಅವರು, ಇವರು ಎಂತಹವರು ಎಂದು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ (ಎಂ.ಪಿ. ರೇಣುಕಾಚಾರ್ಯ) ಹೇಳಿದ್ದಾರೆ. ಹಿಂದೆ ಲೂಟಿ ಮಾಡಿದ್ದರು ಎಂದೂ ಹೇಳಿದ್ದಾರೆ. ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಹೇಳಿದರೆ ಮುಖ್ಯಮಂತ್ರಿಗಳೇ ಹೇಳಿದಂತೆ. ಅಧಿಕಾರಿಗಳೂ ಸಹ ಶಾಮೀಲಾಗಿದ್ದಾರೆ. ಹೀಗಾಗಿ ದೂರು ದಾಖಲಿಸುತ್ತಿಲ್ಲ ಎಂದರು.