ಬೆಂಗಳೂರು (ನ.15): ‘ಉಪಚುನಾವಣೆ ಫಲಿತಾಂಶದಿಂದ ಕಾಂಗ್ರೆಸ್‌ ಕಾರ್ಯಕರ್ತರು ದೃತಿಗೆಡುವ ಅಗತ್ಯವಿಲ್ಲ. ಈ ಉಪಚುನಾವಣೆಯ ಮಾದರಿಯಲ್ಲೇ ಪಕ್ಷದ ಎಲ್ಲ ನಾಯಕರು, ಕಾರ್ಯಕರ್ತರು ಮುಂದೆ ಬರುವ ಎಲ್ಲ ಚುನಾವಣೆಗಳಲ್ಲೂ ಒಗಟ್ಟಿನಿಂದ ಕೆಲಸ ಮಾಡಿದರೆ ಕಾಂಗ್ರೆಸ್‌ ಮತ್ತೆ ಅಧಿಕಾರಕ್ಕೆ ಬರಲಿದೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ.

ನೆಹರು ಜನ್ಮದಿನ ಆಚರಣೆಯಲ್ಲಿ ಮಾತನಾಡಿದ ಅವರು, ‘ನನ್ನ 30-35 ವರ್ಷಗಳ ರಾಜಕೀಯ ಇತಿಹಾಸ ನೋಡಿದಾಗ ಕಳೆದ ಉಪಚುನಾವಣೆಯಲ್ಲಿ ಪಕ್ಷದ ನಾಯಕರು ಹಾಗೂ ಕಾರ್ಯಕರ್ತರು ಬಹಳ ಒಗ್ಗಟ್ಟಿನಿಂದ ಕೆಲಸ ಮಾಡಿದ್ದಾರೆ.

 ಮುಂದಿನ ದಿನಗಳಲ್ಲಿ ಗ್ರಾಮ ಪಂಚಾಯ್ತಿ ಹಾಗೂ ಜಿಲ್ಲಾ ಪಂಚಾಯ್ತಿ ಚುನಾವಣೆ ಬರಲಿದ್ದು, ಎಲ್ಲರೂ ಒಗ್ಗಟ್ಟಿನಿಂದ ಕೆಲಸ ಮಾಡಿ ಜನರಿಗೆ ಶಕ್ತಿ ತುಂಬೋಣ’ ಎಂದರು.