Asianet Suvarna News Asianet Suvarna News

Karnataka Politics: ನಿಮ್ಹಾನ್ಸ್‌ಗೆ ಸೇರಬೇಕಾದವರ ಮಾತಿಗೆ ಪ್ರತಿಕ್ರಿಯಿಸಲ್ಲ: ಜಾರಕಿಹೊಳಿಗೆ ಡಿಕೆಶಿ ಟಾಂಗ್‌

*   ಬಿಜೆಪಿಯ ಸಚಿವರೊಬ್ಬರು ತಾವು ಸಿದ್ದರಾಮಯ್ಯ ಜತೆ ಮಾತನಾಡಿರುವುದು ನಿಜ 
*   ಸಮಯವೇ ಎಲ್ಲದಕ್ಕೂ ಉತ್ತರ ನೀಡಲಿದೆ 
*   ಸಿದ್ದು, ಡಿಕೆಶಿಗೆ ಸಚಿವ ಶಿವರಾಮ್‌ ಹೆಬ್ಬಾರ್‌ ತಿರುಗೇಟು
 

DK Shivakumar Taunt to BJP Leader Ramesh Jarkiholi grg
Author
Bengaluru, First Published Jan 27, 2022, 9:43 AM IST

ಬೆಂಗಳೂರು(ಜ.27):  ‘ನಿಮ್ಹಾನ್ಸ್‌ನಲ್ಲಿ(NIMHANS) ಅಡ್ಮಿಟ್‌ ಆಗಬೇಕಾದವರ ಹೇಳಿಕೆ ಬಗ್ಗೆ ನಾನು ಪ್ರತಿಕ್ರಿಯಿಸಲ್ಲ. ಅವರ ಪಕ್ಷದವರಿಗೆ ಪಟ್ಟಿನೀಡಿ ಅವರಿಗೆ ಏನು ಬೇಕೋ ಮಾಡಿಕೊಳ್ಳಲಿ’ ಎಂದು ಮಾಜಿ ಸಚಿವ ರಮೇಶ್‌ ಜಾರಕಿಹೊಳಿ(Ramesh Jarkiholi) ಅವರಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌(DK Shivakumar) ಪರೋಕ್ಷ ತಿರುಗೇಟು ನೀಡಿದ್ದಾರೆ.

ಕಾಂಗ್ರೆಸ್‌ನ(Congress) 16 ಮಂದಿ ಶಾಸಕರು ತಮ್ಮ ಸಂಪರ್ಕದಲ್ಲಿದ್ದಾರೆ ಎಂಬ ರಮೇಶ್‌ ಜಾರಕಿಹೊಳಿ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ನಿಮ್ಹಾನ್ಸ್‌ನಲ್ಲಿ ಅಡ್ಮಿಟ್‌ ಮಾಡಬೇಕಾದವರ ಹೇಳಿಕೆ ಬಗ್ಗೆ ನಾನು ಪ್ರತಿಕ್ರಿಯಿಸಲ್ಲ. ಬಿಜೆಪಿಯ(BJP) ಸಚಿವರೊಬ್ಬರು ತಾವು ಸಿದ್ದರಾಮಯ್ಯ(Siddaramaiah) ಅವರ ಜತೆ ಮಾತನಾಡಿರುವುದು ನಿಜ ಎಂದು ಒಪ್ಪಿಕೊಂಡಿದ್ದಾರೆ. ಈಗಾಗಲೇ ಕೇಂದ್ರದಲ್ಲಿ ಮಾಜಿ ಸಚಿವರಾಗಿದ್ದ ಹಾಗೂ ಮುಖ್ಯಮಂತ್ರಿ ಆಗಲು ಬಯಸುತ್ತಿರುವವರು ತಮ್ಮ ಪಕ್ಷದವರು ಕಾಂಗ್ರೆಸ್‌ ಜತೆ ಸಂಪರ್ಕದಲ್ಲಿದ್ದಾರೆ ಎಂದಿದ್ದಾರೆ. ಹೀಗಿರುವಾಗ ಬಿಜೆಪಿಯವರು ತಮ್ಮ ಜತೆ ಸಂಪರ್ಕದಲ್ಲಿದ್ದಾರೆ ಎಂದು ನಾನು ಏನನ್ನೂ ಹೇಳುವ ಅಗತ್ಯವಿಲ್ಲ. ಸಮಯವೇ ಎಲ್ಲದಕ್ಕೂ ಉತ್ತರ ನೀಡಲಿದೆ ಎಂದು ಹೇಳಿದರು.

Siddaramaiah Big Scoop: ಬಿಜೆಪಿ - ಕಾಂಗ್ರೆಸ್ ನಡುವೆ ಪಕ್ಷಾಂತರ ಬಾಂಬ್, ಏನಿದು ರಿವರ್ಸ್ ಆಪರೇಷನ್.?

ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆ, ಸಂಪುಟ ವಿಸ್ತರಣೆ(Cabinet Expansion0 ವಿಚಾರವಾಗಿ ಉಂಟಾಗಿರುವ ಗೊಂದಲದ ಕುರಿತು, ‘ಅವರ ಪಕ್ಷದ ವ್ಯವಹಾರದಲ್ಲಿ ನಾವು ಹಸ್ತಕ್ಷೇಪ ಮಾಡ ಬಯಸುವುದಿಲ್ಲ. ಈಗಿನ ಸರ್ಕಾರದ ಆಡಳಿತದಲ್ಲಿ ರಾಜ್ಯ 20 ವರ್ಷ ಹಿಂದಕ್ಕೆ ಹೋಗಿದ್ದು, ಉತ್ತಮ ಆಡಳಿತ ನೀಡಲು ಅವರಿಂದ ಸಾಧ್ಯವಾಗಿಲ್ಲ. ಹೀಗಾಗಿ ನಾವು ರಾಜ್ಯದ ಜನರ ಹಿತದ ಬಗ್ಗೆ ಚಿಂತನೆ ನಡೆಸಿದ್ದೇವೆ. ಜನರಿಗೆ ಬದಲಾವಣೆ ಹಾಗೂ ಉತ್ತಮ ಆಡಳಿತದ ಬಗ್ಗೆ ಅರಿವು ಮೂಡಿಸುವತ್ತ ಗಮನಹರಿಸುತ್ತಿದ್ದೇವೆ ಎಂದರು.

ಪರಪ್ಪನ ಅಗ್ರಹಾರ ಜೈಲಲ್ಲಿ ಕೈದಿಗಳಿಗೆ ವಿಶೇಷ ಸೌಲಭ್ಯ ವಿಚಾರವಾಗಿ ಪ್ರತಿಕ್ರಿಯಿಸಿ, ‘ಗೃಹ ಸಚಿವರು ಇದ್ದಾರೆ. ಅವರು ಏನು ಹೇಳುತ್ತಾರೋ ಕಾದು ನೋಡೋಣ. ಬಳಿಕ ಮಾತನಾಡೋಣ’ ಎಂದಷ್ಟೇ ಹೇಳಿದರು.

ಕಾಂಗ್ರೆಸ್‌ನಿಂದ ಪೊಲಿಟಿಕಲ್‌ ಡೈಲಾಗ್‌

ಹಾವೇರಿ(Haveri): ಬಿಜೆಪಿ ಶಾಸಕರು ನಮ್ಮ ಸಂಪರ್ಕದಲ್ಲಿದ್ದಾರೆ ಎಂಬ ಸಿದ್ದು, ಡಿಕೆಶಿ ಹೇಳಿಕೆಗೆ ಪ್ರತಿಕ್ರಿಯಿಸಿದ ಕಾರ್ಮಿಕ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ ಹೆಬ್ಬಾರ್‌(Shivaram Hebbar), ಇದೊಂದು ಪೊಲಿಟಿಕಲ್‌ ಡೈಲಾಗ್‌ ಅಷ್ಟೇ. ಚುನಾವಣೆ ಹತ್ತಿರ ಬಂದಾಗ ಎಲ್ಲ ಪಕ್ಷಗಳೂ ಸಿದ್ಧತೆ ಮಾಡಿಕೊಳ್ಳುತ್ತವೆ. ಇದಕ್ಕೆ ಮುಖ್ಯಮಂತ್ರಿ ಈಗಾಗಲೇ ಉತ್ತರ ನೀಡಿದ್ದಾರೆ ಎಂದು ತಿರುಗೇಟು ನೀಡಿದರು.

ಜಿಲ್ಲಾ ಕ್ರೀಡಾಂಗಣದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲಾ ಉಸ್ತುವಾರಿ ಹಂಚಿಕೆ ಪಕ್ಷ ಹಾಗೂ ಮುಖ್ಯಮಂತ್ರಿ ತೀರ್ಮಾನವಾಗಿದೆ. ನೀಡಿರುವ ಜವಾಬ್ದಾರಿಯನ್ನು ನಿಷ್ಠೆಯಿಂದ ನಿರ್ವಹಿಸಬೇಕಾಗಿದೆ ಎಂದು ಹೇಳಿದರು.

Karnataka Politics ಸಿದ್ದರಾಮಯ್ಯಗೆ ರಮೇಶ್ ಜಾರಕಿಹೊಳಿ ಸವಾಲ್!

ಉಸ್ತುವಾರಿ ಹಂಚಿಕೆ ವಿಚಾರವಾಗಿ ಅನೇಕ ಸಚಿವರು ತಮ್ಮ ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ. ಸ್ವಂತ ಜಿಲ್ಲೆಯವರಿಗೆ ಅದೇ ಜಿಲ್ಲೆ ಉಸ್ತುವಾರಿ ನೀಡದಿರುವುದರಿಂದ ಏನೂ ಪರಿಣಾಮ ಬೀರುವುದಿಲ್ಲ. ಬೇರೆ ಜಿಲ್ಲೆಗಳಿಗೆ ಉಸ್ತುವಾರಿ ಸಚಿವರಾದರೂ ನಾವು ಏಕಾಂಗಿ ಅಲ್ಲ, ಮುಖ್ಯಮಂತ್ರಿ, ಎಲ್ಲ ಶಾಸಕರ ಮಾರ್ಗದರ್ಶನದ ಮೇರೆಗೆ ಜಿಲ್ಲೆಯ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಶ್ರಮಿಸುತ್ತೇನೆ ಎಂದು ಹೇಳಿದರು.

ಸಂಪರ್ಕದಲ್ಲಿರುವ ಬಿಜೆಪಿ ಶಾಸಕ ಪಟ್ಟಿ ನೀಡಲಿ

ಚಿಕ್ಕಬಳ್ಳಾಪುರ(Chikkaballapur): ಕಾಂಗ್ರೆಸ್‌ ಸಂಪರ್ಕದಲ್ಲಿರುವ ಬಿಜೆಪಿ ಶಾಸಕರ ಪಟ್ಟಿಯನ್ನು ಆ ಪಕ್ಷದ ನಾಯಕರು ಮೊದಲು ಬಿಡುಗಡೆ ಮಾಡಲಿ. ಎದುರಿನಲ್ಲಿ ಸಿಕ್ಕಾಗ ಯಾರು ಬೇಕಾದರೂ ಮಾತನಾಡುತ್ತಾರೆ. ವಿಶ್ವಾಸ ಬೇರೆ, ರಾಜಕಾರಣ ಬೇರೆ. ಹಾಗಾಗಿ, ಯಾರು ಕಾಂಗ್ರೆಸ್‌ಗೆ ಸೇರುತ್ತಾರೆ ಎಂಬುದನ್ನು ಪ್ರಚುರ ಪಡಿಸಿದರೆ, ಅದರ ಆಧಾರದ ಮೇಲೆ ನಾವು ವ್ಯಾಖ್ಯಾನ ಮಾಡಬಹುದು ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್‌(Dr K Sudhakar) ತಿಳಿಸಿದರು

ಚಿಕ್ಕಬಳ್ಳಾಪುರದಲ್ಲಿ ಬುಧವಾರ ತಮ್ಮನ್ನು ಭೇಟಿಯಾದ ಸುದ್ದಿಗಾರರೊಂದಿಗೆ ಮಾತನಾಡಿದ ಸುಧಾಕರ್‌, ಬಿಜೆಪಿ ಶಾಸಕರು ನಮ್ಮ ಸಂಪರ್ಕದಲ್ಲಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌, ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯಿಸಿ, ಅವರು, ಸಂಪರ್ಕದಲ್ಲಿರುವವರ ಪಟ್ಟಿ ಬಿಡುಗಡೆ ಮಾಡಿದರೆ ಒಳ್ಳೆಯದು ಎಂದರು.
 

Follow Us:
Download App:
  • android
  • ios