ಬೆಂಗಳೂರು, (ಜೂ.15): ಕೆಪಿಸಿಸಿ ಅಧ್ಯಕ್ಷರಾಗಿ ಡಿ.ಕೆ.ಶಿವಕುಮಾರ್ ಜುಲೈ 2ರಂದು ಅಧಿಕಾರ ಸ್ವೀಕರಿಸಲು ಸಮಯ ನಿಗದಿಯಾಗಿದೆ.

ಜುಲೈ 2ರಂದು ಬೆಂಗಳೂರಿನ ರಾಜರಾಜೇಶ್ವರಿ ನಗರದ ಗ್ಲೋಬಲ್ ಕಾಲೇಜು ಆವರಣದಲ್ಲಿ ಡಿಕೆಶಿ ಅಧಿಕಾರ ಸಮಾರಂಭ ನಡೆಯಲಿದ್ದು, ಇದಕ್ಕೆ ಎಲ್ಲಾ ಸಿದ್ಧತೆಗಳು ಜೋರಾಗಿ ನಡೆದಿದೆ.

ವಿಭಿನ್ನ ರೀತಿಯಲ್ಲಿ ರಾಜಕೀಯ ಶಕ್ತಿ ಪ್ರದರ್ಶನ: ಲೇಟ್ ಆದ್ರೂ ಲೆಟೆಸ್ಟ್ ಡಿಕೆಶಿ

ಮಾರ್ಚ್ 12ರಂದು ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಡಿ.ಕೆ.ಶಿವಕುಮಾರ್‍ಅವರನ್ನು ಕಾಂಗ್ರೆಸ್ ರಾಜ್ಯಾಧ್ಯಕ್ಷರನ್ನಾಗಿ ನೇಮಿಸಿದ್ದರು. ಆ ಕ್ಷಣದಿಂದಲೇ ಕಾರ್ಯಭಾರ ಆರಂಭಿಸಿರುವ ಡಿ.ಕೆ.ಶಿವಕುಮಾರ್ ಅವರು ಅಧಿಕೃತವಾಗಿ ಈವರೆಗೆ ಅಧಿಕಾರ ಸ್ವೀಕಾರ ಮಾಡಿಲ್ಲ.

ಪದಗ್ರಹಣ ಕಾರ್ಯಕ್ರಮಕ್ಕೆ  ಮೇ 31, ಅನಂತರ ಜುಲೈ 7 ಮತ್ತು 14ಕ್ಕೆ ಒಟ್ಟು ಮೂರು ಬಾರಿ ದಿನಾಂಕ ನಿಗದಿಯಾಗಿತ್ತು. ಲಾಕ್‍ಡೌನ್ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಕಾರ್ಯಕ್ರಮಕ್ಕೆ ಅನುಮತಿ ನಿರಾಕರಿಸಿತ್ತು.

ಡಿ.ಕೆ.ಶಿವಕುಮಾರ್ ಅವರು ಎರಡು ಬಾರಿ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಕಾರ್ಯಕ್ರಮ ನಡೆಸಲು ಅನುಮತಿ ನೀಡುವಂತೆ ಮನವಿ ಮಾಡಿದ್ದರು. ಆದರೆ ಕೇಂದ್ರ ಸರ್ಕಾರದ ನಿಯಮಾವಳಿಗಳ ಅನುಸಾರ ಲಾಕ್ ಡೌನ್ ಸಂದರ್ಭದಲ್ಲಿ ಅನುಮತಿ ನೀಡಲು ನಿರಾಕರಿಸಿತ್ತು.ಬಳಿಕ ಬಿಎಸ್‌ವೈ ಕರೆ ಮಾಡಿ ಅನುಮತಿ ನೀಡಿದ್ದರು.

ಬೆಂಗಳೂರಿನಲ್ಲಿ 150 ಮಂದಿ ಹಿರಿಯ ನಾಯಕರು ಭಾಗವಹಿಸಲಿದ್ದಾರೆ. ಜಿಲ್ಲಾ, ತಾಲೂಕು ಹಾಗೂ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಸುಮಾರು 10 ಸಾವಿರ ಕಡೆ ಎಲ್ ಇ ಡಿ ಅಳವಡಿಸಿ ಕಾರ್ಯಕ್ರಮ ನೇರ ಪ್ರಸಾರ ಮಾಡಲಾಗುತ್ತದೆ. ಜೊತೆಗೆ ಜೊತೆಗೆ ಸಂವಿಧಾನದ ಪೀಠಿಕೆ ಪಠಣ ಹಾಗೂ ಒಂದೇ ಮಾತರಂ ಗಾಯನ, ಸಾಮೂಹಿಕ ಪ್ರತಿಜ್ಞಾ ವಿಧಿ ಸ್ವೀಕಾರ ಕಾರ್ಯಕ್ರಮ ಏಕಕಾಲಕ್ಕೆ ನಡೆಯಲಿವೆ.