‘ಅತಂತ್ರ’ ಸ್ಥಿತಿ ನಿಭಾಯಿಸಲು ಇಂದು ಡಿಕೆ ಶಿವಕುಮಾರ ತೆಲಂಗಾಣಕ್ಕೆ!
ತೆಲಂಗಾಣ ವಿಧಾನಸಭೆ ಚುನಾವಣೆ ಫಲಿತಾಂಶ ಡಿ.3ರ ಭಾನುವಾರ ಹೊರಬೀಳುತ್ತಿರುವ ಹಿನ್ನೆಲೆಯಲ್ಲಿ ಅತಂತ್ರ ಫಲಿತಾಂಶ ಉಂಟಾದರೆ ಕಾಂಗ್ರೆಸ್ ಶಾಸಕರನ್ನು ನಿಭಾಯಿಸಲು ಶನಿವಾರವೇ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತೆಲಂಗಾಣಕ್ಕೆ ತೆರಳಲಿದ್ದಾರೆ.
ಬೆಂಗಳೂರು (ಡಿ.2) : ತೆಲಂಗಾಣ ವಿಧಾನಸಭೆ ಚುನಾವಣೆ ಫಲಿತಾಂಶ ಡಿ.3ರ ಭಾನುವಾರ ಹೊರಬೀಳುತ್ತಿರುವ ಹಿನ್ನೆಲೆಯಲ್ಲಿ ಅತಂತ್ರ ಫಲಿತಾಂಶ ಉಂಟಾದರೆ ಕಾಂಗ್ರೆಸ್ ಶಾಸಕರನ್ನು ನಿಭಾಯಿಸಲು ಶನಿವಾರವೇ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತೆಲಂಗಾಣಕ್ಕೆ ತೆರಳಲಿದ್ದಾರೆ.
ಚುನಾವಣೋತ್ತರ ಸಮೀಕ್ಷೆಗಳಲ್ಲಿ ಕಾಂಗ್ರೆಸ್ ಮೇಲುಗೈ ಸಾಧಿಸಿದ್ದು, ಒಂದೊಮ್ಮೆ ಅತಂತ್ರ ಫಲಿತಾಂಶ ಉಂಟಾದರೆ ಕಾಂಗ್ರೆಸ್ ಶಾಸಕರನ್ನು ಆಪರೇಷನ್ ಮಾಡುವ ಸಾಧ್ಯತೆಯಿದೆ.
ತೆಲಂಗಾಣದಲ್ಲಿ ಈ ಬಾರಿ ಅಧಿಕಾರ ಬದಲಾಗುತ್ತಾ..? ಕಾಂಗ್ರೆಸ್ -ಬಿಆರ್‌ಎಸ್ ನಡುವೆ ಭಾರೀ ಪೈಪೋಟಿ !
ಹೀಗಾಗಿ ಕಾಂಗ್ರೆಸ್ ಶಾಸಕರಿಗೆ ರಕ್ಷಣೆ ನೀಡಿ ತೆಲಂಗಾಣದಲ್ಲೂ ಕಾಂಗ್ರೆಸ್ ಸರ್ಕಾರ ರಚನೆಗೆ ಕಾರ್ಯತಂತ್ರ ರೂಪಿಸುವ ಸಲುವಾಗಿ ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಕಾಂಗ್ರೆಸ್ ಪಾಲಿನ ಟ್ರಬಲ್ ಶೂಟರ್ ಡಿ.ಕೆ. ಶಿವಕುಮಾರ್ ತೆರಳಲಿದ್ದಾರೆ. 119 ವಿಧಾನಸಭೆ ಸದಸ್ಯರನ್ನು ಹೊಂದಿರುವ ತೆಲಂಗಾಣದ ಫಲಿತಾಂಶ ಕಾಂಗ್ರೆಸ್ ಪಾಲಿಗೆ ಮಹತ್ವದ್ದಾಗಿದೆ.
ಪಂಚರಾಜ್ಯ ಪೈಕಿ 3ರಲ್ಲಿ ಕಾಂಗ್ರೆಸ್ ಜಯ ಖಚಿತ: ಸಿಎಂ ಸಿದ್ದರಾಮಯ್ಯ
ಶೇ.70.60 ರಷ್ಟು ಮತದಾನ ದಾಖಲಾಗಿರುವುದರಿಂದ ಕಾಂಗ್ರೆಸ್ ಅಥವಾ ಬಿಆರ್‌ಎಸ್ ಯಾವ ಪಕ್ಷ ಹೆಚ್ಚು ಸ್ಥಾನ ಗಳಿಸಲಿದೆ ಎಂಬ ಕಾತುರ ಉಂಟಾಗಿದೆ. ಫಲಿತಾಂಶದ ಬಳಿಕ ಡಿ.ಕೆ. ಶಿವಕುಮಾರ್ ಯಾವ ನಡೆಗಳನ್ನು ಅನುಸರಿಸಲಿದ್ದಾರೆ ಎಂಬುದು ಸಹ ಕುತೂಹಲ ಹೆಚ್ಚಿಸಿದೆ.