Asianet Suvarna News Asianet Suvarna News

ಕೆಪಿಸಿಸಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಸಿಎಂಗೆ ಮೊದಲ ಪತ್ರ ಬರೆದ ಡಿಕೆಶಿ

ಡಿಕೆ ಶಿವಕುಮಾರ್ ಅವರು ಕೆಪಿಸಿಸಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಮೊದಲ ಬಾರಿಗೆ ಸಿಎಂ ಬಿಎಸ್‌ವೈಗೆ ಮಹತ್ವದ ಪತ್ರವೊಂದನ್ನು ಬರೆದಿದ್ದಾರೆ.

DK Shivakumar Writes To CM BSY For permission Congress activists Work as coronavirus warriors
Author
Bengaluru, First Published Jul 8, 2020, 10:40 PM IST

ಬೆಂಗಳೂರು, (ಜುಲೈ.08): ಕೊರೋನಾ ಮಹಾಮಾರಿ ಎದುರಿಸುವಲ್ಲಿ ಸಾರ್ವಜನಿಕರಿಗೆ ನೆರವಾಗಲು ಕಾಂಗ್ರೆಸ್ ಕಾರ್ಯಕರ್ತರಿಗೂ ಅವಕಾಶ ನೀಡಿ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಆಗ್ರಹಿಸಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು ಪತ್ರ ಬರೆದಿದ್ದಾರೆ.

ಕಾಂಗ್ರೆಸ್ ಕಾರ್ಯಕರ್ತರಿಗೆ ಸ್ವಯಂ ಸೇವಕರಾಗಿ ಕೆಲಸ ಮಾಡಲು ಅವಕಾಶ ಕೊಡಬೇಕು ಎಂದು ಡಿಕೆ ಶಿವಕುಮಾರ್, ಸಿಎಂ ಬಿಎಸ್ ಯಡಿಯೂರಪ್ಪ ಅವರಿಗೆ ಪತ್ರ ಬರೆದಿದ್ದಾರೆ.

ಕೆಪಿಸಿಸಿ ಪದಗ್ರಹಣ: ಕನಕಪುರ ರಣಕಲಿ ಶಿಕಾರಿವೀರನ ಮನ ಗೆದ್ದದ್ದು ಹೇಗೆ?

ಜನಸೇವೆ ವಿಚಾರದಲ್ಲಿ ನಮ್ಮ ಪಕ್ಷ ಯಾವಾಗಲೂ ಮುಂಚೂಣಿಯಲ್ಲಿರುತ್ತದೆ. ಕೋವಿಡ್ ಸಂತ್ರಸ್ತರ ನೆರವಿಗೆ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಎಲ್ಲಾ ಜಿಲ್ಲಾ, ತಾಲೂಕು ಹಾಗೂ ಪಂಚಾಯಿತಿ ಮಟ್ಟದಲ್ಲಿ ನಮ್ಮ ಪಕ್ಷದ ಕಾರ್ಯಕರ್ತರು ಹಗಲಿರುಳು ದುಡಿದು, ತನು ಮನ ಧನ ಸಹಾಯ ಮಾಡುತ್ತಿದ್ದಾರೆ.

ನಮ್ಮ ಪಕ್ಷದ ಕಾರ್ಯಕರ್ತರು ಸ್ವಯಂ ಸೇವಕರಾಗಿ ಕೆಲಸ ಮಾಡಲು ಸದಾ ಸನ್ನದ್ಧರಾಗಿದ್ದು, ಜನಸೇವೆಗೆ ಲಭ್ಯರಿದ್ದಾರೆ. ಹೀಗಾಗಿ ಸರ್ಕಾರ ಅಧಿಕೃತವಾಗಿ ನಮ್ಮ ಕಾರ್ಯಕರ್ತರಿಗೂ ಕೊರೊನಾ ವಾರಿಯರ್ಸ್ ಆಗಿ ಸೇವೆ ಸಲ್ಲಿಸಲು ಅವಕಾಶ ನೀಡಬೇಕು ಎಂದು ಸಿಎಂ ಬಿಎಸ್ ಯಡಿಯೂರಪ್ಪ ಅವರಿಗೆ ಪತ್ರ ಬರೆದಿದ್ದಾರೆ.

ಇದ್ದಕ್ಕಿದ್ದಂತೆ ಯಡಿಯೂರಪ್ಪ ಫೋನ್ ಕಾಲ್: ಥ್ಯಾಂಕ್ಸ್ ಹೇಳಿದ ಡಿಕೆ ಶಿವಕುಮಾರ್

ಇತ್ತೀಚೆಗೆ ಬೆಂಗಳೂರಿನಲ್ಲಿ ಕೊರೋನಾ ನಿರ್ವಹಣೆಗೆ ಬಿಜೆಪಿ ಕಾರ್ಯಕರ್ತರನ್ನು (ಕೊರೊನಾ ವಾರಿಯರ್ಸ್) ಬಳಸಿಕೊಳ್ಳುವುದಾಗಿ ಉಪಮುಖ್ಯಮಂತ್ರಿ ಅಶ್ವತ್ಥ್ ನಾರಾಯಣ ಹೇಳಿದ್ದರು. ಇದರ ಬೆನ್ನಲ್ಲೇ ಇದೀಗ ಕಾಂಗ್ರೆಸ್ ಸಹ ಕೊರೋನಾ ನಿರ್ವಹಣೆಗೆ ಮುಂದೆ ಬಂದಿದೆ.

Follow Us:
Download App:
  • android
  • ios