ಬೆಂಗಳೂರು, (ಏ.10): ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ನಾಮಪತ್ರ ಸಲ್ಲಿಸಲು ರಜಾದಿನವಾದ ಏ.13 ಮತ್ತು 14 ರಂದು ನಾಮಪತ್ರ ಸಲ್ಲಿಕೆಗೆ ಅವಕಾಶ ಮಾಡಿಕೊಡಲು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ರಾಜ್ಯ ಚುನಾವಣಾ ಆಯುಕ್ತರಿಗೆ ಮನವಿ ಮಾಡಿದ್ದಾರೆ.

ಈ ಕುರಿತು ಪತ್ರ ಬರೆದಿರುವ ಅವರು, ರಾಜ್ಯದ 8 ಜಿಲ್ಲೆಗಳ 10 ನಗರ ಸ್ಥಳೀಯ ಸಂಸ್ಥೆಗಳ 266 ವಾರ್ಡ್‌ಗಳಿಗೆ ನಿಗದಿಯಾಗಿರುವ ಚುನಾವಣೆಗೆ ಏ.15 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನ. ನಾಮಪತ್ರ ಸಲ್ಲಿಕೆಗೆ 8 ದಿನ ಕಾಲಾವಕಾಶ ಇದ್ದರೂ ಅದರಲ್ಲಿ 4 ದಿನ ಸಾರ್ವತ್ರಿಕ ರಜಾ ದಿನ ಇರುತ್ತದೆ. ಹೀಗಾಗಿ, ಚುನಾವಣೆಗೆ ಸ್ಪರ್ಧಿಸುವ ಅಭ್ಯರ್ಥಿಳಿಗೆ ನಾಮಪತ್ರ ಸಲ್ಲಿಸಲು ಸಾಕಷ್ಟು ಕಾಲಾವಕಾಶ ದೊರೆಯುವುದಿಲ್ಲ ಎಂದು ಹೇಳಿದ್ದಾರೆ.

ಮಸ್ಕಿಯಲ್ಲಿ ಬಿಜೆಪಿಯಿಂದ ಹಣ ಹಂಚಿಕೆ: ಗಂಭೀರ ಸ್ವರೂಪ ಪಡೆದ ಪ್ರಕರಣ

ಈ ವಿಚಾರ ಸೂಕ್ಷ್ಮವಾಗಿದ್ದು ಏ.13 ಮತ್ತು 14 ರಂದು ಸಹ ನಾಮಪತ್ರ ಸಲ್ಲಿಕೆಗೆ ಅವಕಾಶ ಮಾಡಿಕೊಡಬೇಕು ಎಂದು ಪತ್ರದಲ್ಲಿ ಕೋರಿದ್ದಾರೆ. 1 ಮಹಾನಗರ ಪಾಲಿಕೆ, 5 ನಗರಸಭೆ, 2 ಪುರಸಭೆ, 2 ಪಟ್ಟಣ ಪಂಚಾಯಿತಿಗಳಿಗೆ ಚುನಾವಣೆ ದಿನಾಂಕ ನಿಗದಿಯಾಗಿದೆ.