Karnataka Budget 2022 ಸಿಎಂ ಬಸವರಾಜ ಬೊಮ್ಮಾಯಿಗೆ ಅಭಿನಂದನೆ ಹೇಳಿದ ಡಿಕೆ ಶಿವಕುಮಾರ್

* ಚೊಚ್ಚಲ ಬಜೆಟ್ ಮಂಡಿಸಿದ ಬಸವರಾಜ ಬೊಮ್ಮಾಯಿ
* ಸಿಎಂ ಬಸವರಾಜ ಬೊಮ್ಮಾಯಿಗೆ  ಅಭಿನಂದನೆ ಹೇಳಿದ ಡಿಕೆ ಶಿವಕುಮಾರ್ 
* ಕಾಂಗ್ರೆಸ್‌ ಪರೋಕ್ಷವಾಗಿ ಟಕ್ಕರ್ ಕೊಟ್ರಾ ಸಿಎಂ ಬೊಮ್ಮಾಯಿ?

DK Sivakumar congratulates to  Bommai Over 1 thousand crores for Mekedatu Project In Budget 2022 rbj

ಬೆಂಗಳೂರು, (ಮಾ.04): ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು (Basavaraj Bommai) ತಮ್ಮ ಚೊಚ್ಚಲ ಆಯವ್ಯಯವನ್ನು ಇಂದು(ಶುಕ್ರವಾರ) ಮಂಡಿಸಿದ್ದಾರೆ. 2022-23ನೇ ಸಾಲಿನ ಕರ್ನಾಟಕ ಬಜೆಟ್‌ನಲ್ಲಿ (Karnataka Budget 2022) ಸಿಎಂ ಬೊಮ್ಮಾಯಿ ಅವರು ಮೇಕೆದಾಟು ಯೋಜನೆಗೆ 1 ಸಾವಿರ ಕೋಟಿ ರೂ ನೀಡಿದ್ದಾರೆ. ಈ ಮೂಲಕ ಕಾಂಗ್ರೆಸ್ ಮೇಕೆದಾಟು ಪಾದಯಾತ್ರೆಗೆ ಟಾಂಗ್ ಕೊಟ್ಟಿದ್ದಾರೆ ಎಂದು ವಿಶೇಷಿಸಿಲಾಗಿದೆ.

ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಡಿ.ಕೆ.ಶಿವಕುಮಾರ್ ಹಾಗೂ ಸಿದ್ದರಾಮಯ್ಯ ನೇತೃತ್ವದ ಕರ್ನಾಟಕ ಕಾಂಗ್ರೆಸ್ (Karnataka Congress) ನಮ್ಮ ನೀರು, ನಮ್ಮ ಹಕ್ಕು ಎಂದು ಮೇಕೆದಾಟು ಯೋಜನೆಗೆ (Mekedatu Project) ಆಗ್ರಹಿಸಿ ಬೃಹತ್ ಮಟ್ಟದ ಪಾದಯಾತ್ರೆ ಮಾಡಿತು. 

Karnataka Budget 2022 ಬೊಮ್ಮಾಯಿ ಚೊಚ್ಚಲ ಬಜೆಟ್‌ಗೆ ಯಾರು ಏನ್ ಹೇಳಿದ್ರು? ಬಿಎಸ್‌ವೈ ಬಣ್ಣಿಸಿದ್ದು ಹೀಗೆ

ಈ ಪಾದಯಾತ್ರೆಯ ಎಫೆಕ್ಟ್ ನಿಂದಾಗಿ ಬಜೆಟ್‌ನಲ್ಲಿ ಮೇಕೆದಾಟು ಯೋಜನೆಗಾಗಿ 1 ಸಾವಿರ ಕೋಟಿ ರೂ ಹಣ ಮೀಸಲಿಡಲಾಯಿತಾ ಎನ್ನುವ ಪ್ರಶ್ನೆ ಉದ್ಭವಿಸಿದೆ. ಅಲ್ಲದೇ ನಮ್ಮ ಪಾದಯಾತ್ರೆಯಿಂದ ಅನುಮಾದನ ನೀಡಿದ್ದಾರೆ ಎಂದು ಕಾಂಗ್ರೆಸ್ ನಾಯಕರು ಹೇಳಿಕೊಳ್ಳುತ್ತಿದ್ದಾರೆ.

ಇನ್ನು ಮೇಕೆದಾಟು ಯೋಜನೆ ನಮ್ಮ ಸರ್ಕಾರ ಬದ್ಧ ಎಂದು ಕಾಂಗ್ರೆಸ್‌ಗೆ ಟಾಂಗ್ ಕೊಡಲು ಬಸವರಾಜ ಬೊಮ್ಮಾಯಿ ಅವರು ಮೇಕೆದಾಟು ಯೋಜನೆಗೆ 1 ಸಾವಿರ ಕೋಟಿ ರೂ ನೀಡಿದ್ದಾರೆ ರಾಜಕೀಯ ಪಂಡಿತರ ವಿಶ್ಲೇಷಣೆ.

ಇನ್ನು ಈ ಬಗ್ಗೆ ಡಿಕೆ ಶಿವಕುಮಾರ್ ಅವರು ಪ್ರತಿಕ್ರಿಯಿಸಿದ್ದು, ಮೇಕೆದಾಟು ಯೋಜನೆಗೆ 1 ಸಾವಿರ ಕೋಟಿ ರೂ ನೀಡಿರುವುದಕ್ಕೆ ಬೊಮ್ಮಾಯಿ ಅವರಿಗೆ ಧನ್ಯವಾದ ಹೇಳಿದ್ದಾರೆ.

ಹೌದು..ಸರಣಿ ಟ್ವೀಟ್ ಮಾಡಿರುವ ಡಿಕೆಶಿವಕುಮಾರ್,ಮಹತ್ವಾಕಾಂಕ್ಷೆಯ ಮೇಕೆದಾಟು ಯೋಜನೆಗೆ ಬಜೆಟ್‌ನಲ್ಲಿ ಒಂದು ಸಾವಿರ ಕೋಟಿ ರೂಪಾಯಿ ಅನುದಾನ ಘೋಷಿಸಿರುವುದು ಸ್ವಾಗತಾರ್ಹ. ನೀರಿನ ವಿಷಯದಲ್ಲಿ ಕರ್ನಾಟಕವನ್ನು ಸ್ವಾವಲಂಬಿಯಾಗಿಸುವ ಈ ನಿರ್ಧಾರಕ್ಕಾಗಿ ಮುಖ್ಯಮಂತ್ರಿ ಶ್ರೀ ಬಸವರಾಜ ಬೊಮ್ಮಾಯಿ ಅವರನ್ನು ಅಭಿನಂದಿಸುತ್ತೇನೆ ಎಂದಿದ್ದಾರೆ.

ಮೇಕೆದಾಟು ಯೋಜನೆ ಜಾರಿಗೆ ಆಗ್ರಹಿಸಿ ನಡೆಸಲಾದ ನಮ್ಮ ನೀರು ನಮ್ಮ ಹಕ್ಕು ಪಾದಯಾತ್ರೆಯಲ್ಲಿ ಭಾಗವಹಿಸಿದ ಪ್ರತಿಯೊಬ್ಬ ಕನ್ನಡಿಗರಿಗೂ ಇದರ ಪ್ರತಿಫಲ ಸಲ್ಲುತ್ತದೆ. ಇದು ನಮ್ಮೆಲ್ಲರ ಗೆಲುವು. ಸಾಮೂಹಿಕ ಹೋರಾಟದಿಂದ ಹಕ್ಕುಗಳನ್ನು ಪಡೆಯಬಹುದು ಎಂಬುದಕ್ಕೆ ಇದೊಂದು ನಿದರ್ಶನ. ಪಾದಯಾತ್ರೆಯಲ್ಲಿ ಭಾಗವಹಿಸಿದ ಪ್ರತಿಯೊಬ್ಬರಿಗೂ ಧನ್ಯವಾದಗಳು ಎಂದು ಟ್ವೀಟ್ ಮಾಡಿದ್ದಾರೆ.

ಆದರೆ, ಕಳೆದ ಸಾಲಿನ ಬಜೆಟ್‌ನಲ್ಲಿ ಬೆಂಗಳೂರು ನಗರಕ್ಕೆ ಘೋಷಿಸಿದ್ದ  7,795 ಕೋಟಿ ವೆಚ್ಚದ ಕಾರ್ಯಕ್ರಮವನ್ನು ಸರ್ಕಾರ ಒಂದು ವರ್ಷ ಕಳೆದರೂ ಈಡೇರಿಸಿಲ್ಲ ಎಂಬುದು ಗಮನಾರ್ಹ. ಹಾಗಾಗಿ ಮಹತ್ವಾಕಾಂಕ್ಷೆಯ ಯೋಜನೆಗೆ ಸಾವಿರ ಕೋಟಿ ರೂಪಾಯಿ ಘೋಷಣೆ ಕೇವಲ ಭರವಸೆಯಾಗಿ ಉಳಿಯದೆ ತ್ವರಿತವಾಗಿ ಕಾರ್ಯಗತಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

Latest Videos
Follow Us:
Download App:
  • android
  • ios