ಬೆಂಗಳೂರು, (ಜುಲೈ, 01): ಡಿಕೆ ಶಿವಕುಮಾರ್ ಅವರ 'ಪ್ರತಿಜ್ಞಾ ದಿನ' ಕಾರ್ಯಕ್ರಮಕ್ಕೆ ಕೇವಲ 1 ದಿನ ಮಾತ್ರ ಬಾಕಿ ಇದ್ದು, ಇದಕ್ಕಾಗಿ ಸಕಲ ಸಿದ್ಧತೆಗಳು ಬಹುತೇಕ ಪೂರ್ಣಗೊಂಡಿವೆ. 

ರಾಜ್ಯದ ಲಕ್ಷಾಂತರ ಕಾರ್ಯಕರ್ತರ ಆಶೀರ್ವಾದದಿಂದ 2 ಜುಲೈ 2020 ರಂದು ಕರ್ನಾಟಕ ಕಾಂಗ್ರೆಸ್ ಪಕ್ಷದ ಪ್ರತಿಜ್ಞೆ ಸ್ವೀಕರಿಸಲಿದ್ದಾರೆ. ಟಿವಿ ಹಾಗೂ ಜೂಮ್ ಮೂಲಕ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಡಿಕೆ ಶಿವಕುಮಾರ್ ಅಭಿಮಾನಿಗಳಲ್ಲಿ ಮನವಿ ಮಾಡಿಕೊಂಡಿದ್ದಾರೆ. 

ವಿಭಿನ್ನ ರೀತಿಯಲ್ಲಿ ರಾಜಕೀಯ ಶಕ್ತಿ ಪ್ರದರ್ಶನ: ಲೇಟ್ ಆದ್ರೂ ಲೆಟೆಸ್ಟ್ ಡಿಕೆಶಿ

'ಪ್ರತಿಜ್ಞಾ' ಕಾರ್ಯಕ್ರಮ ಯಶಸ್ವಿಯಾಗಿ ನೆರವೇರಲಿ ಎಂದು ಪ್ರಾರ್ಥಿಸಿ, ಶ್ರೀ ಧರ್ಮಸ್ಥಳ ಮಂಜುನಾಥ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿ, ತಮ್ಮ ಕಾರ್ಯದರ್ಶಿ ಕೃಷ್ಣಾಸಿಂಗ್ ಮೂಲಕ ನನಗೆ ಪ್ರಸಾದ ತಲುಪಿಸಿದ ಧರ್ಮಾಧಿಕಾರಿ ಶ್ರೀ ವೀರೇಂದ್ರ ಹೆಗ್ಗಡೆಯವರಿಗೆ ಹೃದಯಪೂರ್ವಕ ಧನ್ಯವಾದಗಳು.

 ಡಿಕೆಶಿಗೆ ಸಿಕ್ತು ವಿಶೇಷ ಆಶೀರ್ವಾದ

ಹೌದು..ಕೆಪಿಸಿಸಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಲಿರುವ ಡಿಕೆ ಶಿವಕುಮಾರ್ ಅವರು ಇದ್ದಲ್ಲಿಗೇ ಧರ್ಮಸ್ಥಳ ಮಂಜುನಾಥ ಸ್ವಾಮಿಯ ಆಶೀರ್ವಾದ ಸಿಕ್ಕಿದೆ.

‘ಪ್ರತಿಜ್ಞಾ ದಿನ’ ಕಾರ್ಯಕ್ರಮ ಯಶಸ್ವಿಯಾಗಲೆಂದು ಶ್ರೀ ಧರ್ಮಸ್ಥಳ ಮಂಜುನಾಥ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿ ಧರ್ಮಾಧಿಕಾರಿಗಳಾದ ವೀರೇಂದ್ರ ಹೆಗ್ಗಡೆಯವರು ತಮ್ಮ ಕಾರ್ಯದರ್ಶಿ ಕೃಷ್ಣಾ ಸಿಂಗ್ ಮೂಲಕ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರಿಗೆ ಬುಧವಾರ ಪ್ರಸಾದ ತಲುಪಿಸಿದ್ದಾರೆ.

ಇದನ್ನು ಸ್ವತಃ ಡಿಕೆ ಶಿವಕುಮಾರ್ ಅವರು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದು, ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಯವರಿಗೆ ಹೃದಯಪೂರ್ವಕ ಧನ್ಯವಾದಗಳು ತಿಳಿಸಿದ್ದಾರೆ.

ಸುತ್ತೂರು ದೇಶೀಕೇಂದ್ರ ಸ್ವಾಮೀಜಿ ಆಶೀರ್ವಾದ

ಮಂಜುನಾಥ್ ಸ್ವಾಮಿ ಮಾತ್ರವಲ್ಲೇ ಡಿಕೆ ಶಿವಕುಮಾರ್ ಇದ್ದಲ್ಲಿಗೆಯೇ ಸುತ್ತೂರು ದೇಶಿಕೇಂದ್ರ ಸ್ವಾಮೀಜಿಗಳ ಆಶೀರ್ವಾದವು ಸಹ ಸಿಕ್ಕಿದೆ.