ಕಾಂಗ್ರೆಸ್‌ ಹಾಗೂ ಜೆಡಿಎಸ್‌ನಲ್ಲಿ ಆನುವಂಶಿಕ ನಾಯಕತ್ವ ಇದೆ. ಇದಕ್ಕೆ ಪ್ರತಿಯಾಗಿ ಬಿಜೆಪಿ ಪ್ರಜಾಪ್ರಭುತ್ವದ ಮೇಲೆ ನಂಬಿಕೆ ಇಟ್ಟಿದೆ. ಕಾಂಗ್ರೆಸ್‌, ಜೆಡಿಎಸ್‌ ಪಕ್ಷಗಳಿಗೆ ಪ್ರಜಾಪ್ರಭುತ್ವದ ಮೇಲೆ ನಂಬಿಕೆ ಇಲ್ಲ. ಬಿಜೆಪಿ ಸಿದ್ಧಾಂತಕ್ಕೆ ಅಂಟಿಕೊಂಡು ರಾಜಕಾರಣ ಮಾಡುತ್ತದೆ. ಬಿಜೆಪಿ ಜನ ಸಾಮಾನ್ಯರ ನೇತೃತ್ವದಲ್ಲಿ ಬೆಳೆದು ಬಂದ ಪಕ್ಷವಾಗಿದೆ ಎಂದು ಹೇಳಿದ ಸಿ.ಟಿ.ರವಿ 

ವಿಜಯಪುರ(ಮಾ.14): ಕಾಂಗ್ರೆಸ್‌ ಹಾಗೂ ಜೆಡಿಎಸ್‌ನಲ್ಲಿ ಲೀಡರ್‌ಶಿಪ್‌ ಡಿಎನ್‌ಎ ಮೂಲಕ ಬರುತ್ತದೆ ಎಂದು ಮಾಜಿ ಸಚಿವ ಸಿ.ಟಿ.ರವಿ ವ್ಯಂಗ್ಯವಾಡಿದರು. ಸೋಮವಾರ ಆಲಮಟ್ಟಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್‌ ಹಾಗೂ ಜೆಡಿಎಸ್‌ನಲ್ಲಿ ಆನುವಂಶಿಕ ನಾಯಕತ್ವ ಇದೆ. ಇದಕ್ಕೆ ಪ್ರತಿಯಾಗಿ ಬಿಜೆಪಿ ಪ್ರಜಾಪ್ರಭುತ್ವದ ಮೇಲೆ ನಂಬಿಕೆ ಇಟ್ಟಿದೆ. ಕಾಂಗ್ರೆಸ್‌, ಜೆಡಿಎಸ್‌ ಪಕ್ಷಗಳಿಗೆ ಪ್ರಜಾಪ್ರಭುತ್ವದ ಮೇಲೆ ನಂಬಿಕೆ ಇಲ್ಲ. ಬಿಜೆಪಿ ಸಿದ್ಧಾಂತಕ್ಕೆ ಅಂಟಿಕೊಂಡು ರಾಜಕಾರಣ ಮಾಡುತ್ತದೆ. ಬಿಜೆಪಿ ಜನ ಸಾಮಾನ್ಯರ ನೇತೃತ್ವದಲ್ಲಿ ಬೆಳೆದು ಬಂದ ಪಕ್ಷವಾಗಿದೆ ಎಂದು ಹೇಳಿದರು.

ರಾಜೀವ ಗಾಂಧಿ ಕಾಲಾವಧಿಯಲ್ಲಿ ಇದ್ದ ಕಾಂಗ್ರೆಸ್ಸಿನವರೆಲ್ಲ ಕಳ್ಳರೇ ಆಗಿದ್ದರು. ಅದು ರಾಜೀವ ಗಾಂಧಿಗೂ ಗೊತ್ತಿತ್ತು. ನಮಗೆ ನಿಯತ್ತು ಇದೆ. ಅಭಿವೃದ್ಧಿಯ ರಿಪೋರ್ಟ್‌ ಕಾರ್ಡ್‌ ಇಟ್ಟು ನಾವು ಮತ ಕೇಳುತ್ತೇವೆ. ಪ್ರಣಾಳಿಕೆಯಲ್ಲಿ ಹೇಳದೇ ಇರುವ ಯೋಜನೆಗಳನ್ನು ನಾವು ಜನರಿಗೆ ಕೊಟ್ಟಿದ್ದೇವೆ. ಹೇಳದೇ ಕೆಲಸ ಮಾಡಿ ತೋರಿಸಿದ್ದೇವೆ ಎಂದರು.

ರಾಜ್ಯ ಕಾಂಗ್ರೆಸ್‌ ಐಸಿಯುನಲ್ಲಿ: ಜಗದೀಶ ಶೆಟ್ಟರ್‌

ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ನಮ್ಮ ಸೀನಿಯರ್‌ ಲೀಡರ್‌. ಹಾಗಾಗಿ, ಯಡಿಯೂರಪ್ಪನವರ ಮಾರ್ಗದರ್ಶನದಲ್ಲಿಯೇ ನಾವು ಚುನಾವಣೆ ಎದುರಿಸುತ್ತೇವೆ. ರಾಜ್ಯದಲ್ಲಿ ಬಿ.ಎಸ್‌.ಯಡಿಯೂರಪ್ಪನವರ ಮಾರ್ಗದರ್ಶನ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನಾಯಕತ್ವದಲ್ಲಿ ಹಾಗೂ ಕೇಂದ್ರದಲ್ಲಿ ಪ್ರಧಾನಿ ಮೋದಿ ನಾಯಕತ್ವದಲ್ಲಿ ಈ ಬಾರಿ ಚುನಾವಣೆ ಎದುರಿಸಲು ನಾವು ನಿರ್ಧರಿಸಿದ್ದೇವೆ ಎಂದರು.

ಯಾತ್ರೆಗೆ ಅಭೂತಪೂರ್ವ ಬೆಂಬಲ-ನಳಿನ್‌

ರಾಜ್ಯದಲ್ಲಿ ಬಿಜೆಪಿಯಿಂದ ಪ್ರಾರಂಭಿಸಿರುವ ವಿಜಯ ಸಂಕಲ್ಪ ಯಾತ್ರೆಯಲ್ಲಿ ನಾಲ್ಕೂ ಭಾಗಗಳಲ್ಲಿ ಜನಸ್ತೋಮ ಸ್ವಯಂಸ್ಫೂರ್ತಿಯಿಂದ ಸೇರುತ್ತಿರುವುದನ್ನು ಗಮನಿಸಿದರೆ ಈ ಯಾತ್ರೆ ಜನ ಮಾನಸದಲ್ಲಿ ಶಾಶ್ವತವಾಗಿ ಉಳಿಯಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನಕುಮಾರ ಕಟೀಲ್‌ ಅವರು ವಿಶ್ವಾಸ ವ್ಯಕ್ತಪಡಿಸಿದರು. ರಾಜ್ಯದ ಜನತೆ ಬಿಜೆಪಿ ಸಾಧನೆಗಳನ್ನು ಕಂಡು ಪ್ರತಿ ಯಾತ್ರೆಯಲ್ಲಿ ಅಭೂತಪೂರ್ವ ಎಂಬಂತೆ ಸೇರುತ್ತಿದ್ದಾರೆ. ಇದನ್ನು ವಿರೋಧ ಪಕ್ಷದವರಿಗೆ ಸಹಿಸಿಕೊಳ್ಳಲು ಆಗುತ್ತಿಲ್ಲ. ಈ ಬಾರಿಯೂ ರಾಜ್ಯದಲ್ಲಿ ಕಾಂಗ್ರೆಸ್ಸಿಗೆ ಸೋಲೇ ಗತಿಯಾಗಲಿದೆ ಎಂದರು.