ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ನಡುವೆ ನಾಲ್ಕು ಗೋಡೆಗಳ ನಡುವೆ ಹೈಕಮಾಂಡ್ ನಾಯಕರ ಮುಂದೆ ಆಗಿರುವ ಮಾತುಕತೆಯ ವಿಚಾರವಾಗಿ ಪಕ್ಷದ ಯಾವುದೇ ಶಾಸಕರಾಗಲಿ, ಸಚಿವರಾಗಲಿ ಅನಗತ್ಯ ಹೇಳಿಕೆಗಳನ್ನು ನೀಡಿ ಗೊಂದಲ ಸೃಷ್ಟಿಸಬಾರದು: ರಣದೀಪ್ ಸಿಂಗ್ ಸುರ್ಜೇವಾಲಾ
ಬೆಂಗಳೂರು(ಮೇ.24): ಮುಖ್ಯಮಂತ್ರಿ ಅಧಿಕಾರಾವಧಿಯ ಬಗ್ಗೆ ಪಕ್ಷದ ಯಾವುದೇ ಶಾಸಕರಾಗಲಿ, ಸಚಿವರಾಗಲಿ ಅನಗತ್ಯವಾಗಿ ಹೇಳಿಕೆಗಳನ್ನು ನೀಡಿ ಗೊಂದಲ ಸೃಷ್ಟಿಸುವ ಕೆಲಸ ಮಾಡಬೇಡಿ. ತಮ್ಮ ಪ್ರತಿಯೊಂದು ಹೇಳಿಕೆಗಳನ್ನೂ ಎಐಸಿಸಿ ಗಮನಿಸುತ್ತಿದೆ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಖಡಕ್ ಎಚ್ಚರಿಕೆ ನೀಡಿದ್ದಾರೆ.
ಸಿದ್ದರಾಮಯ್ಯ ಅವರೇ ಐದು ವರ್ಷ ಮುಖ್ಯಮಂತ್ರಿಯಾಗಿ ಮುಂದುವರೆಯುತ್ತಾರೆ ಎಂಬ ಸಚಿವ ಎಂ.ಬಿ.ಪಾಟೀಲ್ ಹೇಳಿಕೆಗೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಬಣದಿಂದ ತೀವ್ರ ಆಕ್ಷೇಪ, ಅಸಮಾಧಾನ ವ್ಯಕ್ತವಾದ ಬೆನ್ನಲ್ಲೇ ಈ ಸಂಬಂಧ ನಗರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿ ಶಾಸಕ, ಸಚಿವರಿಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ.
ಶಿವಣ್ಣ ಮನೆಗೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲ: ಹ್ಯಾಟ್ರಿಕ್ ಹೀರೋ ಬಗ್ಗೆ ಹೇಳಿದ್ದೇನು?
ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ನಡುವೆ ನಾಲ್ಕು ಗೋಡೆಗಳ ನಡುವೆ ಹೈಕಮಾಂಡ್ ನಾಯಕರ ಮುಂದೆ ಆಗಿರುವ ಮಾತುಕತೆಯ ವಿಚಾರವಾಗಿ ಪಕ್ಷದ ಯಾವುದೇ ಶಾಸಕರಾಗಲಿ, ಸಚಿವರಾಗಲಿ ಅನಗತ್ಯ ಹೇಳಿಕೆಗಳನ್ನು ನೀಡಿ ಗೊಂದಲ ಸೃಷ್ಟಿಸಬಾರದು. ಪಕ್ಷದಲ್ಲಿ ಯಾವುದೇ ನಿರ್ಧಾರಗಳನ್ನು ಎಐಸಿಸಿ ಅಧ್ಯಕ್ಷರು ತೀರ್ಮಾನಿಸುತ್ತಾರೆ. ಅನಗತ್ಯ ಹೇಳಿಕೆ ನೀಡುವುದರಿಂದ ಸರ್ಕಾರ, ಪಕ್ಷದ ವರ್ಚಸ್ಸಿಗೆ ದಕ್ಕೆಯಾಗುತ್ತದೆ. ಅಂತಹ ಹೇಳಿಕೆಗಳನ್ನು ಎಐಸಿಸಿ ಗಮನಿಸುತ್ತಿದ್ದು, ಗಂಭೀರವಾಗಿ ಪರಿಗಣಿಸುತ್ತದೆ ಎಂದು ಹೇಳಿದ್ದಾರೆ.
