ಸೋಲಿಗೆ ಎದೆಗುಂದಬೇಡಿ: ಬಿಜೆಪಿ ಕಾರ್ಯಕರ್ತರಿಗೆ ವಿಜಯೇಂದ್ರ ಪತ್ರ
ನಿರೀಕ್ಷೆಯಂತೆ ಕಾಂಗ್ರೆಸ್ಸಿನ ಅಧಿಕಾರ ದುರುಪಯೋಗ ಮತ್ತು ಆಮಿಷಗಳು ಮತದಾರರನ್ನು ದಿಕ್ಕು ತಪ್ಪಿಸುವ ನಿಟ್ಟಿನಲ್ಲಿ ಪರಿಣಾಮ ಬೀರಿದೆ ಎಂಬುದು ನಿಸಂಶಯ. ಉಪಚುನಾವಣೆ ಫಲಿತಾಂಶಗಳು ಪಕ್ಷ ಸಂಘ ಟನೆಯ ಸಾಮರ್ಥ ಹಾಗೂ ಪ್ರಭಾವವನ್ನು ಬಿಂಬಿಸುವ ಅಳತೆಗೋಲಾಗಿರುವುದಿಲ್ಲ. ಸ್ಥಳೀಯ ಸಮಸ್ಯೆಗಳು ಹಾಗೂ ಸರ್ಕಾರದ ಪ್ರಭಾವವನ್ನು ಆಧರಿಸಿ ಈ ಚುನಾವಣಾ ಫಲಿತಾಂಶಗಳು ಹೊರಹೊಮ್ಮುತ್ತವೆ ಎಂದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ
ಬೆಂಗಳೂರು (ನ.27): ಉಪಚುನಾವಣೆ ಸೋಲಿನಿಂದ ಯಾರೂ ಎದೆಗುಂದಬೇಕಿಲ್ಲ. ಇದನ್ನು ಹಿನ್ನಡೆ ಎಂದುಪರಿಗಣಿಸುವ ಪ್ರಶ್ನೆಯೇ ಉದ್ಭವಿಸುವುದಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಪಕ್ಷದ ಕಾರ್ಯಕರ್ತರಿಗೆ ಧೈಯ್ಯ ತುಂಬುವ ಪ್ರಯತ್ನ ಮಾಡಿದ್ದಾರೆ.
ಈ ಸಂಬಂಧ ಅವರು ಸಾಮಾಜಿಕ ಜಾಲತಾಣದ ಮೂಲಕ 'ಸಹೃದಯ ಕಾರ್ಯಕರ್ತ ಬಂಧುಗಳೇ' ಎಂದು ಸಂಬೋಧಿಸಿ ಸುದೀರ್ಘ ಬಹಿರಂಗ ಪತ್ರ ಬರೆದಿದ್ದಾರೆ. ನಿರೀಕ್ಷೆಯಂತೆ ಕಾಂಗ್ರೆಸ್ಸಿನ ಅಧಿಕಾರ ದುರುಪಯೋಗ ಮತ್ತು ಆಮಿಷಗಳು ಮತದಾರರನ್ನು ದಿಕ್ಕು ತಪ್ಪಿಸುವ ನಿಟ್ಟಿನಲ್ಲಿ ಪರಿಣಾಮ ಬೀರಿದೆ ಎಂಬುದು ನಿಸಂಶಯ. ಉಪಚುನಾವಣೆ ಫಲಿತಾಂಶಗಳು ಪಕ್ಷ ಸಂಘ ಟನೆಯ ಸಾಮರ್ಥ ಹಾಗೂ ಪ್ರಭಾವವನ್ನು ಬಿಂಬಿಸುವ ಅಳತೆಗೋಲಾಗಿರುವುದಿಲ್ಲ. ಸ್ಥಳೀಯ ಸಮಸ್ಯೆಗಳು ಹಾಗೂ ಸರ್ಕಾರದ ಪ್ರಭಾವವನ್ನು ಆಧರಿಸಿ ಈ ಚುನಾವಣಾ ಫಲಿತಾಂಶಗಳು ಹೊರಹೊಮ್ಮುತ್ತವೆ ಎಂದಿದ್ದಾರೆ.
ನಾವು ವಕ್ಫ್ ವಿರುದ್ಧ ಹೋರಾಟ ಮಾಡಿದ್ರೆ ನಿಮಗ್ಯಾಕೆ ಭಯ, ಟೆನ್ಶನ್? ಬಿವೈ ವಿಜಯೇಂದ್ರ ವಿರುದ್ಧ ಯತ್ನಾಳ್ ವಾಗ್ದಾಳಿ
ಪತ್ರದಲ್ಲೇನಿದೆ?:
ಸದ್ಯ ರಾಜ್ಯದಲ್ಲಿ ನಡೆದ ಮೂರು ಕ್ಷೇತ್ರಗಳ ಉಪಚುನಾವಣೆಯಲ್ಲಿ ನಮ್ಮ ಪಕ್ಷ ಎರಡು ಕ್ಷೇತ್ರಗಳಲ್ಲಿ, ಮಿತ್ರ ಪಕ್ಷ ಒಂದು ಕ್ಷೇತ್ರದಲ್ಲಿ ಪರಾಜಯಗೊಂಡಿರುವ ಕಾರಣದಿಂದ ನಾವ್ಯಾರೂ ಎದೆಗುಂದಬೇಕಿಲ್ಲ. ನಿರೀಕ್ಷೆಯಂತೆ ಆಡಳಿತ ಪಕ್ಷ ಕಾಂಗ್ರೆಸ್ನ ಅಧಿಕಾರ ದುರುಪಯೋಗ ಹಾಗೂ ಆಮಿಷಗಳು ಮತದಾರರನ್ನು ದಿಕ್ಕು ತಪ್ಪಿಸುವ ನಿಟ್ಟಿನಲ್ಲಿ ಪರಿಣಾಮ ಬೀರಿದೆ ಎಂಬುದು ನಿಸ್ಸಂಶಯ, ಆದರೂ ಉಪಚುನಾವಣೆಯ ಈ ಸೋಲನ್ನು ನಾವು ಸಕಾರಾತ್ಮಕವಾಗಿಯೇ ಸ್ವೀಕರಿಸೋಣ, ಈ ಫಲಿತಾಂಶ ಭವಿಷ್ಯತ್ತಿನಲ್ಲಿ ನಮಗೆ ಮುಂದಿರುವ ಸವಾಲುಗಳನ್ನು ಎಚ್ಚರಿಸುವ ಸಂಕೇತವೂ ಆಗಿದೆ ಎಂದು ಭಾವಿಸೋಣ.
ಬಿಜೆಪಿ ಅಧಿಕಾರದ ಬೆನ್ನು ಹತ್ತಿ ರಾಜಕಾರಣ ಮಾಡುವುದಕ್ಕಾಗಿ ಜನ್ಮತಾಳಿದ್ದಲ್ಲ. ಉದಾತ್ತ ಉದ್ದೇಶ ಹಾಗೂ ಗುರಿಯನ್ನಿಟ್ಟುಕೊಂಡು ಯೋಜಿತವಾಗಿ ಬೆಳೆದು ಕೋಟ್ಯಂತರ ಸಮರ್ಪಣಾ ಕಾರ್ಯಕರ್ತರನ್ನು ದೇಶ ಕಟ್ಟುವ ಬದ್ಧತೆಗಾಗಿ ಸಜ್ಜುಗೊಳಿಸಿದ ಪಕ್ಷ, ಕರ್ನಾಟಕದಲ್ಲಿ ಪಕ್ಷದ ಬೆಳವಣಿಗೆಯ ಪ್ರತಿ ಹಂತವೂ ಚಾರಿತ್ರಿಕ ದಾಖಲೆಗಳಾಗಿವೆ. ಪಕ್ಷದಕಾರ್ಯಕರ್ತರಾಗಿ ನಾವೆಲ್ಲರೂ ಹೆಮ್ಮೆ ಪಡುವ ನಿಟ್ಟಿನಲ್ಲಿ ದಕ್ಷಿಣ ಭಾರತದಲ್ಲಿ ಪಕ್ಷಕ್ಕೆ ಹೆಬ್ಬಾಗಿಲು ತೆರೆದು ಕೊಟ್ಟ ರಾಜ್ಯ 'ಕರ್ನಾಟಕ' ಎಂಬ ಹೆಗ್ಗಳಿಕೆ ನಮ್ಮದಾಗಿದೆ.
ಕಳೆದ ಒಂದೂವರೆ ವರ್ಷದಿಂದ ರಾಜ್ಯದಲ್ಲಿ ಅಧಿಕಾರ ನಡೆಸುತ್ತಿರುವ ಸಿದ್ದರಾಮಯ್ಯ ಅವರ ನೇತೃತ್ವದ ಕಾಂಗ್ರೆಸ್ ಸರ್ಕಾರ ಜನ ವಿರೋಧಿ ಹಾಗೂ ಅಭಿವೃದ್ಧಿ ಶೂನ್ಯ ಆಡಳಿತದೊಂದಿಗೆ ಹತ್ತು ಹಲವು ಹಗರಣಗಳಲ್ಲಿ ಸಿಲುಕಿಕೊಂಡು ರಾಜ್ಯದ ಗೌರವ ಹಾಗೂ ಘನತೆಯನ್ನು ರಾಷ್ಟ್ರೀಯ ಮಟ್ಟದಲ್ಲಿ ಕುಗ್ಗುವಂತಾಗಲು ಕಾರಣವಾಗಿದೆ. ಹಣ ಬಲ, ಅಧಿಕಾರ ಬಲದ ಜೊತೆಗೆ ಚುನಾವಣೆಯ ಹಿಂದಿನ ದಿನವನ್ನು ಗುರಿಯ ನ್ನಾಗಿಸಿಕೊಂಡು ಗೃಹಲಕ್ಷ್ಮಿ ಯೋಜನೆಯಹಣವನ್ನು ಮತದಾರರಖಾತೆಗೆ ಹಾಕಿದ್ದು ಚುನಾವಣೆಯ ಅನೈತಿಕತೆಯಲ್ಲದೇ ಮತ್ತಿನ್ನೇನು? ದುರ್ಮಾರ್ಗಗಳನ್ನು ಬಳಸಿ ಉಪಚುನಾವಣೆಯನ್ನು ಗೆಲ್ಲುವುದು ಆಡಳಿತ ನಡೆಸುವ ಸಂದರ್ಭದಲ್ಲಿ ಕಾಂಗ್ರೆಸ್ಸಿಗೆ ಹೊಸತೇನೂ ಅಲ್ಲ. ಈ ನಿಟ್ಟಿನಲ್ಲಿ ಈ ಚುನಾವಣೆಯ ಅಪಜಯವನ್ನು ನಾವ್ಯಾರೂ ಹಿನ್ನಡೆ ಎಂದು ಪರಿಗಣಿಸುವ ಪ್ರಶ್ನೆಯೇ ಉದ್ಭವಿಸುವುದಿಲ್ಲ.
ನಮ್ಮ ಬಿಜೆಪಿಯಲ್ಲಿ ಅಭಿಪ್ರಾಯ ಭೇದಗಳಿಗೆ ಮುಕ್ತ ಅವಕಾಶ ಇದ್ದೇ ಇದೆ. ಅದೇ ರೀತಿಯಲ್ಲಿ ಶಿಸ್ತು, ಸಂಯಮಗಳು ಎಲ್ಲೆ ಮೀರದಂತೆ ನೋಡಿಕೊಳ್ಳುವ ವ್ಯವಸ್ಥೆಯೂ ನಮ್ಮಲ್ಲಿದೆ. ಈ ಕ್ಷಣಕೂ ಪ್ರತಿಯೊಬ್ಬ ಕಾರ್ಯಕರ್ತರು, ಪ್ರಮುಖರು ಹಾಗೂ ಹಿರಿಯರೊಂದಿಗೆ ವಿಶ್ವಾಸ, ಪ್ರೀತಿಯನ್ನು ಬೆಳೆಸಿಕೊಂಡು ಪಕ್ಷವನ್ನು ಇನ್ನಷ್ಟು ಗಟ್ಟಿಗೊಳಿಸಬೇಕು ಎನ್ನುವ ಹಂಬಲ ಹಾಗೂ ಸಂಕಲ್ಪ ನನ್ನದಾಗಿದೆ. ಕಾರ್ಯಕರ್ತರಲ್ಲಿ ವಿನಮ್ರ ವಿನಂತಿ ಏನೆಂದರೆ ರಾಜ್ಯದ ಉಪಚುನಾವಣೆಯ ಫಲಿತಾಂಶದ ಪರಿಣಾಮ ನಮ್ಮ ಸಂಘಟನೆಯ ಮೇಲೆ ಯಾವ ಪ್ರಭಾವವನ್ನೂ ಬೀರಲು ಸಾಧ್ಯವಿಲ್ಲ. ಇದನ್ನು ಸಂಪೂರ್ಣವಾಗಿ ಉಪೇಕ್ಷಿಸೋಣ.
ಬಿಜೆಪಿ ಒಳಗೇ ವಕ್ಫ್ ಸಮರ: ಯತ್ನಾಳ್ ಬಣದ ಬೀದರ್ ಹೋರಾಟದಲ್ಲಿ ಸಂಘರ್ಷ, ಉದ್ವಿಗ್ನ ಸ್ಥಿತಿ
ಪಕ್ಕದ ಮಹಾರಾಷ್ಟ್ರದ ಐತಿಹಾಸಿಕ ಮಹಾ ವಿಜಯವನ್ನು ನಾವು ಪ್ರೇರಣೆಯಾಗಿ ಸ್ವೀಕರಿಸಿ, ಭವಿಷ್ಯದ ದಿನಗಳಲ್ಲಿ ಒಂದು ದಿನವೂ ವ್ಯಯ ಮಾಡದೇ ರಾಜ್ಯದಲ್ಲಿ ಮತ್ತೆ ಪಕ್ಷದ ಸರ್ಕಾರವನ್ನು ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಸಂಕಲ್ಪ ತೊಡೋಣ. ಮುಂದೆಯೂ ಮಿತ್ರ ಪಕ್ಷ ಜೆಡಿಎಸ್ ಜತೆಗೆ ಸಹಕಾರದ ಹೆಜ್ಜೆಗಳನ್ನು ಇಡೋಣ. ನಮ್ಮಗುರಿ ಏನಿದ್ದರೂ ಸಂಘಟನೆ ಜತೆಗೆ ಕಾಂಗ್ರೆಸ್ ಸರ್ಕಾರದ ಬಹುಸಂಖ್ಯಾತ ಜನರ ವಿರೋಧಿ ಧೋರಣೆ ಹಾಗೂ ಭ್ರಷ್ಟ ಆಡಳಿತವನ್ನು ಕೊನೆಗಾಣಿಸುವುದಕ್ಕಾಗಿ ಎಂಬ ಶಪಥ ಮಾಡೋಣ. ಆ ಮೂಲಕ ಜಾಗತಿಕ ಮಟ್ಟದಲ್ಲಿ ಭಾರತವನ್ನು ನಂಬರ್ 1 ಸ್ಥಾನದಲ್ಲಿ ಕಾಣುವ ಮಹಾಸಂಕಲ್ಪ ತೊಟ್ಟಿರುವ ಪ್ರಧಾನಿ ಮೋದಿ ಅವರ ಹಾದಿಯಲ್ಲಿ ಸದೃಢ ಮನಸ್ಸಿನಿಂದಸಾಗೋಣ.
ಬಿಜೆಪಿಯ ಸುಭದ್ರ ಕೋಟೆಯ ನಡುವೆ ಬಿರುಕು ಮೂಡಿಸಲು ಯತ್ನಿಸುವ ಶಕ್ತಿಗಳನ್ನು ಮೆಟ್ಟಿನಿಂತು ನಮ್ಮೆಲ್ಲರ ಒಗ್ಗಟ್ಟಿನಮುಷ್ಟಿದೇಶಕಟ್ಟುವಶಕ್ತಿಯಾಗಲೆಂದು ನಿಮ್ಮೆಲ್ಲರಲ್ಲಿ ಒಬ್ಬ ಸಾಮಾನ್ಯ ಕಾರ್ಯಕರ್ತನಾಗಿ ಭಿನ್ನವಿಸಿಕೊಳ್ಳುತ್ತೇನೆ. ಈ ನಿಟ್ಟಿನಲ್ಲಿಹಿರಿಯರಆಶೀರ್ವಾದ, ಪ್ರಮುಖರ ಮಾರ್ಗದರ್ಶನ ಪಡೆದುಮುಂದಿನ ದಿನಗಳಲ್ಲಿ ಇನ್ನಷ್ಟು ಕ್ರಿಯಾಶೀಲರಾಗಿ ಸಂಘಟನೆಯನ್ನು ಬಲವೃದ್ಧಿಗೊಳಿಸೋಣ. ಬದ್ಧತೆ, ಅಚಲತೆ, ಸಫಲತೆಯ ಪ್ರತೀಕ ಗುರಿಯಿಟ್ಟು ಛಲ ಹೊತ್ತು, ಧೈರ್ಯ ಮಾರ್ಗದಲ್ಲಿ ಸಾಗೋಣ ಎಂದು ವಿಜಯೇಂದ್ರ ಹೇಳಿದ್ದಾರೆ.
ಬಿವೈವಿ ಪತ್ರದಲ್ಲಿ ಏನಿದೆ?
• ಉಪ ಚುನಾವಣೆಯ ಸೋಲು ಹಿನ್ನಡೆ ಅಲ್ಲ, ಹೀಗಾಗಿ ಯಾರೂ ಎದೆಗುಂದುವ ಅಗತ್ಯ ಇಲ್ಲ
• ಬೈ ಎಲೆಕ್ಷನ್ ಫಲಿತಾಂಶಗಳು ಪಕ್ಷ ಸಂಘಟನೆ, ಸಾಮರ್ಥದ ಅಳತೆಗೋಲಲ್ಲ. ಸ್ಥಳೀಯ ಸಮಸ್ಯೆ, ಸರ್ಕಾರದ ಪ್ರಭಾವ ಆಧರಿಸಿ ಫಲಿತಾಂಶ ಬರುತ್ತದೆ
• ಭ್ರಷ್ಟಾಚಾರದಿಂದ ಕಾಂಗ್ರೆಸ್ ಗೆದ್ದಿದೆ, ಹೀಗಾಗಿ ಈ ಫಲಿತಾಂಶ ಉಪೇಕ್ಷಿಸಿ, ಎಚ್ಚರಿಕೆಯಿಂದಿರೋಣ