Asianet Suvarna News Asianet Suvarna News

ಜಾತಿ ಗಣತಿ ಬಗ್ಗೆ ಊಹಾಪೋಹ ಬೇಡ: ಸಚಿವ ಪರಮೇಶ್ವರ್‌

ಶಾಶ್ವತ ಹಿಂದುಳಿದ ವರ್ಗಗಳ ಆಯೋಗವು ನಡೆಸಿದ ಜಾತಿ ಗಣತಿ ವರದಿಯಲ್ಲಿ ಏನಿದೆ ಎಂದು ತಿಳಿದುಕೊಳ್ಳದೇ ಊಹಿಸಿಕೊಂಡು ವ್ಯಾಖ್ಯಾನ ಮಾಡುವುದು ಸರಿಯಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಅಭಿಪ್ರಾಯಪಟ್ಟರು. 

Do not Speculate about Caste Census Says Minister Dr G Parameshwar gvd
Author
First Published Dec 11, 2023, 8:54 PM IST

ಬೆಂಗಳೂರು (ಡಿ.11): ಶಾಶ್ವತ ಹಿಂದುಳಿದ ವರ್ಗಗಳ ಆಯೋಗವು ನಡೆಸಿದ ಜಾತಿ ಗಣತಿ ವರದಿಯಲ್ಲಿ ಏನಿದೆ ಎಂದು ತಿಳಿದುಕೊಳ್ಳದೇ ಊಹಿಸಿಕೊಂಡು ವ್ಯಾಖ್ಯಾನ ಮಾಡುವುದು ಸರಿಯಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಅಭಿಪ್ರಾಯಪಟ್ಟರು. ನಗರದ ಪುಟ್ಟಣ್ಣಚೆಟ್ಟಿ ಪುರಭವನದಲ್ಲಿ ಬೆಂಗಳೂರು ನಗರ ದೇವಾಂಗ ಸಂಘದಿಂದ ಭಾನುವಾರ ಆಯೋಜಿಸಿದ್ದ ‘ಪ್ರತಿಭಾ ಪುರಸ್ಕಾರ’ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಹಿಂದುಳಿದ ವರ್ಗದಲ್ಲಿ ನೂರಕ್ಕೂ ಅಧಿಕ ಜಾತಿಗಳಿವೆ. ಕೆಲವು ಜಾತಿಗಳಿಗೆ ಉದ್ಯೋಗ ಮತ್ತು ಶಿಕ್ಷಣದಲ್ಲಿ ಸಮರ್ಪಕವಾಗಿ ಮೀಸಲಾತಿ ಲಬಿಸುತ್ತಿಲ್ಲ ಎಂಬ ಆರೋಪ ಕೇಳಿಬಂದಿತ್ತು. ಆದ್ದರಿಂದ ಈ ಹಿಂದೆ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದಾಗ ಕಾಂತರಾಜು ಅವರ ಅಧ್ಯಕ್ಷತೆಯಲ್ಲಿ ಆಯೋಗ ರಚಿಸಿದ್ದರು. ಆಯೋಗ ನೀಡಿರುವ ವರದಿಯಲ್ಲಿ ಏನಿದೆ ಎಂದು ಊಹಿಸಿಕೊಂಡು ವ್ಯಾಖ್ಯಾನ ಮಾಡುತ್ತಿರುವುದು ಸರಿಯಲ್ಲ ಎಂದು ಸ್ಪಷ್ಟಪಡಿಸಿದರು.

ದೇವಾಂಗ ಸಮುದಾಯದ ಮಕ್ಕಳು ಇಂಜನಿಯರಿಂಗ್, ವೈದ್ಯಕೀಯ, ಕಾನೂನು‌ ಪದವಿ‌ ಸೇರಿದಂತೆ ಉನ್ನತ ಶಿಕ್ಷಣ ಪಡೆದುಕೊಳ್ಳಬೇಕು. ಐಎಎಸ್, ಐಪಿಎಸ್ ಸೇರಿದಂತೆ ದೇಶದ ಉನ್ನತ ಹುದ್ದೆಗಳನ್ನು‌ ಅಲಂಕರಿಸಬೇಕು. ನಿಮ್ಮ ಮಕ್ಕಳ ವಿದ್ಯಾಭ್ಯಾಸಕ್ಕೆ ಸುಸಜ್ಜಿತ ಹಾಸ್ಟೆಲ್‌ ಅವಶ್ಯಕತೆಯಿದ್ದು ಮುಖ್ಯಮಂತ್ರಿ ಗಳ ಗಮನಕ್ಕೆ ಈ ವಿಷಯ ತರುತ್ತೇನೆ ಎಂದು ಭರವಸೆ ನೀಡಿದರು. ವಿಧಾನ ಪರಿಷತ್ ಮಾಜಿ ಸದಸ್ಯರಾದ ಎಂ.ಸಿ.ವೇಣುಗೋಪಾಲ್, ಎಂ.ಡಿ.ಲಕ್ಷ್ಮೀನಾರಾಯಣ, ಸಂಘದ ಅಧ್ಯಕ್ಷ ಡಾ.ಜಿ.ರಮೇಶ್ ಮತ್ತಿತರರು ಹಾಜರಿದ್ದರು.

ಸರ್ಕಾರ ಬೀಳಿಸುತ್ತೇವೆ ಎಂಬುದು ಪ್ರಜಾಪ್ರಭುತ್ವಕ್ಕೆ ಕೊಡಲಿ ಪೆಟ್ಟು: ಸಚಿವ ಎಚ್.ಕೆ.ಪಾಟೀಲ್

ಮೀಸಲಾತಿ ನೀಡಿದ್ದ ಒಡೆಯರ್‌: ಸ್ವಾತಂತ್ರ್ಯಪೂರ್ವದಲ್ಲಿ ಅಧಿಕಾರ ಮತ್ತು ಆಸ್ತಿ ಕೆಲವೇ ಸಮುದಾಯಗಳಿಗೆ ಮಾತ್ರ ಸೀಮಿತವಾಗಿ ಸಾಮಾಜಿಕ ಅಸಮಾನತೆ ಉಂಟಾಗಿತ್ತು. ಇದನ್ನು ಹೋಗಲಾಡಿಸಿ ಶೋಷಿತರು, ಹಿಂದುಳಿದವರ ಅಭಿವೃದ್ಧಿಗಾಗಿ ಮೈಸೂರು ರಾಜವಂಶಸ್ಥರಾದ ನಾಲ್ವಡಿ ಕೃಷ್ಣರಾಜ ಒಡೆಯರ್‌ ಅವರು ದೇಶದಲ್ಲಿ ಮೊದಲ ಬಾರಿಗೆ ಮೀಸಲಾತಿ ಕಲ್ಪಿಸಿದ್ದರು ಎಂದು ನೆನಪಿಸಿಕೊಂಡರು.

Follow Us:
Download App:
  • android
  • ios