ಮೋದಿಯವರ ಬಣ್ಣದ ಮಾತುಗಳಿಗೆ ಮರುಳಾಗದಿರಿ: ನಟಿ ಭಾವನಾ

ಹೊಳಲ್ಕೆರೆ ಕ್ಷೇತ್ರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಎಚ್‌.ಆಂಜನೇಯ ಪ್ರಚಾರವನ್ನು ಮತ್ತಷ್ಟುತೀವ್ರಗೊಳಿಸಿದ್ದು, ನಟಿ ಭಾವನಾ ಉರಿ ಬಿಸಿಲನ್ನು ಲೆಕ್ಕಿಸದೆ ಶುಕ್ರವಾರ ರಾರ‍ಯಲಿಯಲ್ಲಿ ಪಾಲ್ಗೊಂಡು ಮತಯಾಚಿಸಿದರು.

Dont believe narendraModi s colorful words says actress bhavana at chitradurga congress campaign rav

ಹೊಳಲ್ಕೆರೆ (ಮೇ.6) : ಹೊಳಲ್ಕೆರೆ ಕ್ಷೇತ್ರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಎಚ್‌.ಆಂಜನೇಯ ಪ್ರಚಾರವನ್ನು ಮತ್ತಷ್ಟುತೀವ್ರಗೊಳಿಸಿದ್ದು, ನಟಿ ಭಾವನಾ ಉರಿ ಬಿಸಿಲನ್ನು ಲೆಕ್ಕಿಸದೆ ಶುಕ್ರವಾರ ರಾರ‍ಯಲಿಯಲ್ಲಿ ಪಾಲ್ಗೊಂಡು ಮತಯಾಚಿಸಿದರು.

ಹಿರೇಕಂದವಾಡಿ, ಕಲ್ಲವ್ವನಾಗ್ತಿಹಳ್ಳಿ, ಬಿ.ದುರ್ಗದಲ್ಲಿ ನಡೆದ ಪ್ರಚಾರ(Congress campaigning) ಸಭೆಯಲ್ಲಿ ಮಾತನಾಡಿದ ಭಾವನಾ, ಸುಳ್ಳುಗಳ ಸರಮಾಲೆ, ಕೋಮು ಸಂಘರ್ಷದ ಮೂಲಕ ಅಧಿಕಾರಕ್ಕೆ ಬಂದಿರುವ ಬಿಜೆಪಿ ಯುವ ಪೀಳಿಗೆಯ ಬದುಕಿಗೆ ಕಂಟಕವಾಗಿದೆ. ಈಗಾಗಲೇ ನಿರುದ್ಯೋಗ, ಬೆಲೆ ಏರಿಕೆ, ಖಾಸಗೀಕರಣದಿಂದ ಯುವಪೀಳಿಗೆ, ರೈತರು, ಕಾರ್ಮಿಕರ ಬದುಕು ಮೂರಾಬಟ್ಟೆಯಾಗಿದ್ದು, ನರೇಂದ್ರ ಮೋದಿ(Narendra Modi) ಬಣ್ಣದ, ಸುಳ್ಳಿನ ಮಾತಿಗೆ ಮಾರು ಹೋದರೆ ಯುವ ಪೀಳಿಗೆ ವಿನಾಶದ ಅಂಚಿಗೆ ತಲುಪುವುದು ಖಚಿತ ಎಂದರು.

Karnataka election 2023: ಬಿಜೆಪಿ ಎಷ್ಟೇ ಹೆದರಿಸಿ, ಬೆದರಿಸಿದ್ರೂ 141 ಕ್ಷೇತ್ರ ಗೆದ್ದೇ ಗೆಲ್ತೀವಿ: ಡಿಕೆಶಿ

ಎಚ್‌.ಆಂಜನೇಯ(H Anjaneya) ಅಧಿಕಾರ ಅವಧಿ ಸುವರ್ಣಯುಗ ಆಗಿತ್ತು ಎಂದು ಜನ ಸ್ಮರಿಸುತ್ತಿದ್ದಾರೆ. ಹೊಳಲ್ಕೆರೆ ಕ್ಷೇತ್ರದಲ್ಲಿ ನಾಮಪತ್ರ ಸಲ್ಲಿಸಿದ ದಿನವೇ ಕಾಂಗ್ರೆಸ್‌ ಅಭ್ಯರ್ಥಿ ಆಂಜನೇಯ ಅವರು ಗೆಲುವು ನಿಶ್ಚಿತವಾಗಿದ್ದು, ಘೋಷಣೆಯೊಂದು ಬಾಕಿ ಉಳಿದಿದೆ. ಕ್ಷೇತ್ರದ ಯಾವ ಹಳ್ಳಿಗೆ ಹೋದರು ಶಾಸಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಬಿಜೆಪಿಯ ಸಾವಿರಾರು ಕಾರ್ಯಕರ್ತರು ಸ್ವಯಂ ಪ್ರೇರಿತರಾಗಿ ಆಂಜನೇಯ ಅವರ ಕೈಬಲಪಡಿಸುತ್ತಿದ್ದಾರೆ ಎಂದರು.

ಮಾಜಿ ಶಾಸಕ ಎ.ವಿ.ಉಮಾಪತಿ ಮಾತನಾಡಿ, ಈ ಬಾರಿ ಚುನಾವಣೆಗೆ ನಮ್ಮೆಲ್ಲರ ಪ್ರೀತಿಗೆ ಮಣಿದು ಆಂಜನೇಯ ಸ್ಪರ್ಧೆ ಮಾಡಿದ್ದಾರೆ, ಅವರ ಗೆಲುವು ನಮ್ಮೆಲ್ಲರ ಹೊಣೆ ಆಗಿದೆ. ಎಐಸಿಸಿ ಆಂಜನೇಯ ಅವರಿಗೆ ಉನ್ನತ ಸ್ಥಾನಮಾನ ನೀಡಿ, ಪಕ್ಷ ಅಧಿಕಾರಕ್ಕೆ ಬರುತ್ತಿದ್ದಂತೆ ಎಂಎಲ್ಸಿ ಮಾಡಿಕೊಂಡು ಮಂತ್ರಿ ಮಾಡುವುದಾಗಿ ತಿಳಿಸಿತ್ತು. ಆದರೆ, ಹೊಳಲ್ಕೆರೆ ಕ್ಷೇತ್ರದ ಜನರ ಪ್ರೀತಿಗೆ ಈ ಬಾರಿ ಸ್ಪರ್ಧೆ ಮಾಡಿದ್ದಾರೆ, ಅವರು ಹೆಚ್ಚು ಮತಗಳ ಅಂತರದಲ್ಲಿ ಗೆಲ್ಲಿಸಿಕೊಳ್ಳಬೇಕು ಎಂದು ಹೇಳಿದರು.

ಕೆಪಿಸಿಸಿ ಅಸಂಘಟಿತ ಕಾರ್ಮಿಕರ ಘಟಕದ ಅಧ್ಯಕ್ಷ ಜಿ.ಎಸ್‌.ಮಂಜುನಾಥ್‌ ಮಾತನಾಡಿ, ಕ್ಷೇತ್ರದಲ್ಲಿ ಅಹಂಕಾರÜದಿಂದ ಮೆರೆಯುತ್ತಿರುವ ಶಾಸಕ ಚಂದ್ರಪ್ಪನಿಗೆ ತಕ್ಕಪಾಠ ಕಲಿಸಲು ಬಿಜೆಪಿ ಕಾರ್ಯಕರ್ತರು ಸಹಸ್ರಾರು ಸಂಖ್ಯೆಯಲ್ಲಿ ಕಾಂಗ್ರೆಸ್‌ ಪಕ್ಷ ಸೇರುತ್ತಿದ್ದಾರೆ. ಉಡಾಫೆ, ದೊಡ್ಡವರ ಕುರಿತು ಅಶ್ಲೀಲ ಮಾತು, ಸಮುದಾಯಗಳ ಮಧ್ಯೆ ಜಗಳ ತಂದಿಟ್ಟು ರಾಜಕೀಯ ಬೇಳೆ ಬೇಯಿಸಿಕೊಳ್ಳುತ್ತಿರುವ ಚಂದ್ರಪ್ಪನ ನಡವಳಿಕೆಗೆ ಈ ಬಾರಿ ಚುನಾವಣೆ ತಕ್ಕ ಪಾಠವಾಗಲಿದೆ ಎಂದು ಹೇಳಿದರು.

ಮಾಜಿ ಸಚಿವ ಎಚ್‌.ಆಂಜನೇಯ ಮಾತನಾಡಿ, ಕಾಂಗ್ರೆಸ್‌ ಪಕ್ಷದಲ್ಲಿನ ಒಗ್ಗಟ್ಟು, ಬಿಜೆಪಿಯ ಅನೇಕ ನಾಯಕರು ಪಕ್ಷಕ್ಕೆ ಸೇರ್ಪಡೆ ಆಗಿರುವುದು ಕ್ಷೇತ್ರದಲ್ಲಿ ಕಾಂಗ್ರೆಸ್‌ ಪರ ಬಹುದೊಡ್ಡ ಅಲೆ ಸೃಷ್ಟಿಸಿದೆ. ಕಾಂಗ್ರೆಸ್‌ ಪಕ್ಷದ ಸಭೆ, ಪ್ರಚಾರಕ್ಕೆ ವ್ಯಕ್ತವಾಗುತ್ತಿರುವ ಜನಬೆಂಬಲ ಕಂಡು, ಶಾಸಕ ಚಂದ್ರಪ್ಪ ಆತಂಕದಿಂದ ತನ್ನ ನಾಲಿಗೆ ಹರಿಬಿಡುತ್ತಿದ್ದಾರೆ ಎಂದರು.

ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಎಚ್‌.ಟಿ.ಹನುಮಂತಪ್ಪ, ಜಿಪಂ ಮಾಜಿ ಅಧ್ಯಕ್ಷರಾದ ಗಿರಿಜಮ್ಮ ಬಸವರಾಜ್‌, ವಿಶಾಲಾಕ್ಷಿ ನಟರಾಜ್‌, ಸದಸ್ಯರಾದ ಭಾರತೀ ಕಲ್ಲೇಶ್‌, ಎಸ್‌.ಜೆ.ರಂಗಸ್ವಾಮಿ, ಪಿಎಲ್‌ಡಿ ಬ್ಯಾಂಕ್‌ ಅಧ್ಯಕ್ಷ ಕಾಟೀಹಳ್ಳಿ ಶಿವಣ್ಣ, ಕೆಪಿಸಿಸಿ ಕೋ ಆರ್ಡಿನೇಟರ್‌ ಲೋಕೇಶ್‌ನಾಯ್‌್ಕ, ತಾಪಂ ಮಾಜಿ ಉಪಾಧ್ಯಕ್ಷ ಓಂಕಾರಸ್ವಾಮಿ, ಮುಖಂಡ ಗೋಡೆಮನೆ ಹನುಮಂತಪ್ಪ, ರುದ್ರಣ್ಣ ಮೊದಲಾದವರಿದ್ದರು.

ಕಾಂಗ್ರೆಸ್‌ಗೆ ಹೆದರಿ ಮೋದಿ, ಶಾ ರಾಜ್ಯದಲ್ಲಿಯೇ ಮಲಗಿಬಿಟ್ಟಿದ್ದಾರೆ: ಡಿಕೆಶಿ ವಾಗ್ದಾಳಿ

ಗುತ್ತಿಗೆದಾರರ ಆತ್ಮಹತ್ಯೆ ಬಗ್ಗೆ ಮೋದಿ ಮಾತಾಡುತ್ತಿಲ್ಲ:

ನುಡಿದಂತೆ ನಡೆಯುವ ಪಕ್ಷ ಅಂದರೆ ಅದು ಕಾಂಗ್ರೆಸ್‌ ಮಾತ್ರ. ಸಿದ್ದರಾಮಯ್ಯ(Siddaramaiah) ಅವರ ಅವಧಿಯಲ್ಲಿ ಸರ್ವರಿಗೂ ಸಮಾನ ಅವಕಾಶಗಳನ್ನು ಕಲ್ಪಿಸಿದೆ ಎಂದು ನಟಿ ಭಾವನಾ(Actress Bhavana) ಹೇಳಿದರು. ಇದೀಗ ಕಾಂಗ್ರೆಸ್‌ ಪಕ್ಷದ 10 ಕೆಜಿ ಪಡಿತರ, 200 ಯುನಿಟ್‌ ವಿದ್ಯುತ್‌, 3000 ನಿರುದ್ಯೋಗಿ ಭತ್ಯೆ, ಮನೆ ಒಡತಿಗೆ 2000, ಎಲ್ಲ ಮಹಿಳೆಯರಿಗೆ ಉಚಿತ ಬಸ್‌ ಸೌಲಭ್ಯದ ಭರವಸೆ ನೀಡಿದೆ. ಇವು ಜನಸಾಮಾನ್ಯರಿಗೆ ಅತ್ಯವಶ್ಯಕವಾಗಿವೆ ಎಂದರು. ಕಾಂಗ್ರೆಸ್‌ ಆಡಳಿತದಲ್ಲಿ ಬಡವರು, ಶ್ರೀಮಂತರು ಎನ್ನದೇ ಸರ್ವರಿಗೂ ಸಮಾನ ಅವಕಾಶಗಳನ್ನು ನೀಡಲಾಗುತ್ತಿತ್ತು. ಇದೀಗ ಬಿಜೆಪಿ ಸರ್ಕಾರದಲ್ಲಿ ಶೇ.40 ಪರ್ಸೆಂಟೇಜ್‌ ಭ್ರಷ್ಟಾಚಾರ ಕೂಪಕ್ಕೆ ಅನೇಕ ಗುತ್ತಿಗೆದಾರರು ತಮ್ಮ ಪ್ರಾಣವನ್ನೆ ಕಳೆದುಕೊಂಡಿದ್ದಾರೆ. ಇದನ್ನ ಕಾಂಗ್ರೆಸ್‌ ಪಕ್ಷದವರು ಆರೋಪಿಸುತ್ತಿಲ್ಲ . ಬದಲಿಗೆ ಗುತ್ತಿಗೆದಾರರೇ, ಅವರ ಪಕ್ಷದ ಶಾಸಕರೇ ನೇರ ಆರೋಪ ಮಾಡಿದ್ದಾರೆ. ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಚಕಾರವೆತ್ತುತ್ತಿಲ್ಲ. ಎಂದು ಹೇಳಿದರು.

Latest Videos
Follow Us:
Download App:
  • android
  • ios