ಭಯೋತ್ಪಾದನೆ ವಿರುದ್ಧ ನಮ್ಮ ಯೋಧರು ಪ್ರಾಣ ಪಣಕ್ಕಿಟ್ಟು ಹೋರಾಡುತ್ತಿರುವ ಈ ಸೂಕ್ಷ್ಮ ಸಂದರ್ಭದಲ್ಲಿ ಮೇ 15 ರಂದು ಯಾರೂ ನನ್ನ ಜನ್ಮ ದಿನಾಚರಣೆ ಮಾಡುವುದು ಬೇಡ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಮನವಿ ಮಾಡಿದ್ದಾರೆ.
ಬೆಂಗಳೂರು (ಮೇ.10): ಭಯೋತ್ಪಾದನೆ ವಿರುದ್ಧ ನಮ್ಮ ಯೋಧರು ಪ್ರಾಣ ಪಣಕ್ಕಿಟ್ಟು ಹೋರಾಡುತ್ತಿರುವ ಈ ಸೂಕ್ಷ್ಮ ಸಂದರ್ಭದಲ್ಲಿ ಮೇ.15 ರಂದು ಯಾರೂ ನನ್ನ ಜನ್ಮ ದಿನಾಚರಣೆ ಮಾಡುವುದು ಬೇಡ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಮನವಿ ಮಾಡಿದ್ದಾರೆ. ನನ್ನ ಜನ್ಮದಿನದ ಹೆಸರಿನಲ್ಲಿ ಯಾರೊಬ್ಬರೂ ಸಂಭ್ರಮಾಚರಣೆ ಮಾಡಬಾರದು. ಅಂದು ನಾನು ಊರಿನಲ್ಲಿ ಇರುವುದಿಲ್ಲ. ಅಂದು ನನ್ನನ್ನು ಭೇಟಿ ಮಾಡಲು ಯಾರೂ ನನ್ನ ನಿವಾಸ, ಕಚೇರಿಗೆ ಬರುವುದು ಬೇಡ. ಯಾರೂ ಅನ್ಯತಾ ಭಾವಿಸಬಾರದು. ಪರಿಸ್ಥಿತಿಯನ್ನು ಅರ್ಥ ಮಾಡಿಕೊಂಡು ಸಹಕರಿಸಬೇಕು ಎಂದು ಡಿ.ಕೆ.ಶಿವಕುಮಾರ್ ಅವರು ವಿನಂತಿ ಮಾಡಿದ್ದಾರೆ.
ಜನ್ಮದಿನದ ಶುಭ ಕೋರುವ ಫ್ಲೆಕ್ಸ್, ಬ್ಯಾನರ್ ಗಳನ್ನು ಹಾಕುವುದಾಗಲಿ, ಜಾಹೀರಾತುಗಳನ್ನು ನೀಡುವುದಾಗಲಿ ಮಾಡಬಾರದು ಎಂದು ಅಭಿಮಾನಿಗಳು, ಪಕ್ಷದ ನಾಯಕರು ಹಾಗೂ ಕಾರ್ಯಕರ್ತರಲ್ಲಿ ಮನವಿ ಮಾಡಿದ್ದಾರೆ. 'ದೇಶದ ಐಕ್ಯತೆ, ಸಾರ್ವಭೌಮತೆ ರಕ್ಷಣೆಗೆ ನಾವು ಯೋಧರ ಜತೆ ನಿಲ್ಲಬೇಕು. ಅವರು ಸುರಕ್ಷಿತವಾಗಿ ಈ ಹೋರಾಟವನ್ನು ಗೆದ್ದು ಬರಲಿ ಎಂದು ದೇವರಲ್ಲಿ ಪ್ರಾರ್ಥಿಸೋಣ' ಎಂದು ತಿಳಿಸಿದ್ದಾರೆ.
ಡಿಕೆಶಿ ಸ್ವಂತ ಜಾಗದಲ್ಲಿ ಕೈ ಭವನ ನಿರ್ಮಾಣ: ಕೆಪಿಸಿಸಿ ಅಧ್ಯಕ್ಷರು ಆದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ರವರ ತವರು ಜಿಲ್ಲೆ ರಾಮನಗರದ ಖಾಸಗಿ ಬಡಾವಣೆಯಲ್ಲಿ ಕೋಟ್ಯಂತರ ರುಪಾಯಿ ವೆಚ್ಚದಲ್ಲಿ ಸುಸಜ್ಜಿತ ಕಾಂಗ್ರೆಸ್ ಭವನ ನಿರ್ಮಾಣಗೊಳ್ಳುತ್ತಿದೆ. ಜಿಲ್ಲಾ ಕೇಂದ್ರ ರಾಮನಗರದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸ್ವಂತ ಕಟ್ಟಡ ಇರಲಿಲ್ಲ. ಬಾಡಿಗೆ ಕಟ್ಟಡಗಳಲ್ಲಿಯೇ ಪಕ್ಷ ಸಂಘಟನೆಗೆ ಸಂಬಂಧಿಸಿದ ಸಭೆ, ಸಮಾರಂಭಗಳು ನಡೆಯುತ್ತಿದ್ದವು. ಇದೀಗ ಕಾಂಗ್ರೆಸ್ ಭವನದ ಹೆಸರಿನಲ್ಲಿ ಪಕ್ಷಕ್ಕೆ ಸ್ವಂತ ಕಟ್ಟಡವೊಂದು ತಲೆ ಎತ್ತುತ್ತಿದೆ.
1000 ರು. ಕೊಟ್ರೆ ಮನೆಗೆ ಕಾವೇರಿ ನೀರು ಸಂಪರ್ಕ: ಡಿ.ಕೆ.ಶಿವಕುಮಾರ್
ಬಾಡಿಗೆ ಕಟ್ಟಡದಲ್ಲಿರುವ ಕೈ ಕಚೇರಿ : ಬೆಂಗಳೂರು ಗ್ರಾಮಾಂತರ ಜಿಲ್ಲೆಯಿಂದ ರಾಮನಗರ ಪ್ರತ್ಯೇಕ ಜಿಲ್ಲೆಯಾಗಿ 2007ರಲ್ಲಿ ರಚನೆಗೊಂಡಿತು. ಜಿಲ್ಲೆಯಲ್ಲಿ ಘಟಾನುಘಟಿ ಕಾಂಗ್ರೆಸ್ ನಾಯಕರಿದ್ದರು ಇಲ್ಲಿವರೆಗೂ ಕಾಂಗ್ರೆಸ್ ಪಕ್ಷಕ್ಕೆ ಸ್ವಂತ ಸೂರು ಇರಲಿಲ್ಲ. ನಾಲ್ಕೈದು ವರ್ಷಗಳಿಗೊಮ್ಮೆ ಕಾಂಗ್ರೆಸ್ ಕಚೇರಿ ಸ್ಥಳಾಂತರಗೊಳ್ಳುತ್ತಲೇ ಇತ್ತು. ಈ ಮೊದಲು ಗುಂಡಪ್ಪ ಬಿಲ್ಡಿಂಗ್ , ಹಳೇ ಆರ್ ಟಿಒ ಕಚೇರಿ ಪಕ್ಕಲ್ಲಿದ್ದ ಕಾಂಗ್ರೆಸ್ ಕಚೇರಿ ಆನಂತರ ಮಿನಿವಿಧಾನಸೌಧದ ಎದುರಿನ ಕಟ್ಟಡಕ್ಕೆ ಸ್ಥಳಾಂತರಗೊಂಡಿತು. ಈಗ ಹಳೇ ಬೆಂಗಳೂರು - ಮೈಸೂರು ಹೆದ್ದಾರಿ ಪಕ್ಕದಲ್ಲಿರುವ ಮಾರುತಿ ನಗರ ಬಡಾವಣೆಯಲ್ಲಿರುವ ಖಾಸಗಿ ಲೇಔಟ್ ನಲ್ಲಿ ಕಚೇರಿ ನಿರ್ಮಾಣ ಕಾರ್ಯ ವೇಗವಾಗಿ ಸಾಗಿದೆ.

