ಅಪಪ್ರಚಾರಗಳಿಗೆ ಕಿವಿಗೊಡದೇ, ಬಿಜೆಪಿ ಅಭ್ಯರ್ಥಿ ಬೆಂಬಲಿಸಿ: ಸಂಸದ ಬಿ.ವೈ.ರಾಘವೇಂದ್ರ

ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಕ್ಷೇತ್ರದಲ್ಲಿ ಸಾಕಷ್ಟುಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡಿವೆ. ಆದರೂ ಅಪಪ್ರಚಾರ ನಡೆಸಲಾಗುತ್ತಿದೆ. ಮತದಾರರು ಇವುಗಳಿಗೆ ಕಿವಿಗೊಡದೇ ಬಿಜೆಪಿ ಅಭ್ಯರ್ಥಿಯನ್ನು ಬೆಂಬಲಿಸುವಂತೆ ಸಂಸದ ಬಿ.ವೈ. ರಾಘವೇಂದ್ರ ಮನವಿ ಮಾಡಿದರು. 

Dont listen to the slander support the BJP candidate Says MP BY Raghavendra gvd

ಭದ್ರಾವತಿ (ಏ.16): ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಕ್ಷೇತ್ರದಲ್ಲಿ ಸಾಕಷ್ಟುಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡಿವೆ. ಆದರೂ ಅಪಪ್ರಚಾರ ನಡೆಸಲಾಗುತ್ತಿದೆ. ಮತದಾರರು ಇವುಗಳಿಗೆ ಕಿವಿಗೊಡದೇ ಬಿಜೆಪಿ ಅಭ್ಯರ್ಥಿಯನ್ನು ಬೆಂಬಲಿಸುವಂತೆ ಸಂಸದ ಬಿ.ವೈ. ರಾಘವೇಂದ್ರ ಮನವಿ ಮಾಡಿದರು. ಪಕ್ಷದ ತಾಲೂಕು ಮಂಡಲ ಕಚೇರಿಯಲ್ಲಿ ಶನಿವಾರ ಹಮ್ಮಿಕೊಳ್ಳಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕ್ಷೇತ್ರದಲ್ಲಿ ಕಳೆದ 5 ವರ್ಷಗಳಲ್ಲಿ ಪಕ್ಷದಲ್ಲಿ ಸಾಕಷ್ಟು ಬದಲಾವಣೆಗಳಾಗಿವೆ. ಎಲ್ಲರೂ ಸಹ ತಮ್ಮ ಜವಾಬ್ದಾರಿ ಸಮರ್ಥವಾಗಿ ನಿಭಾಯಿಸಿಕೊಂಡು ಬರುತ್ತಿದ್ದಾರೆ. 

ಪ್ರಸ್ತುತ ನೂತನವಾಗಿ ತಾಲೂಕು ಮಂಡಲ ಕಚೇರಿ ನಿರ್ಮಾಣ ಇದಕ್ಕೆ ಸಾಕ್ಷಿಯಾಗಿದೆ ಎಂದರು. ಪಕ್ಷದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಬಹಳಷ್ಟುಕಾರ್ಯಕ್ರಮಗಳು ಯಶಸ್ವಿಯಾಗಿವೆ. ಅಲ್ಲದೇ, ಪಕ್ಷದ ಕಾರ್ಯಕರ್ತರ ಸಂಖ್ಯೆ ಸಹ ಹೆಚ್ಚಳವಾಗಿದೆ. ಸಂಘಟನಾತ್ಮಕವಾಗಿ ಕ್ರಿಯಾಶೀಲವಾಗಿದೆ. ಈ ಹಿನ್ನೆಲೆಯಲ್ಲಿ ಈ ಬಾರಿ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಲು ಬಹಳ ಮಂದಿ ಪೈಪೋಟಿಗೆ ಮುಂದಾಗಿದ್ದರು. ಪಕ್ಷ ಅಧಿಕೃತವಾಗಿ ಮಂಗೋಟೆ ರುದ್ರೇಶ್‌ ಅವರನ್ನು ಅಭ್ಯರ್ಥಿಯನ್ನಾಗಿ ಮಾಡಿದೆ. ಇವರ ಗೆಲುವಿಗೆ ಎಲ್ಲರೂ ಒಗ್ಗಟ್ಟಾಗಿ ಶ್ರಮಿಸಬೇಕಾಗಿದೆ ಎಂದರು.

ಕೊಟ್ಟಮಾತಿನಂತೆ ನಡೆದುಕೊಂಡು ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯ ಮಾಡಿದ್ದೇನೆ: ಸಚಿವ ಬಿ.ಸಿ.ಪಾಟೀಲ್‌

ಕ್ಷೇತ್ರದಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಂದ ಕೈಗೊಂಡಿರುವ ಅಭಿವೃದ್ಧಿ ಕಾರ್ಯಗಳನ್ನು ಮುಂದಿಟ್ಟುಕೊಂಡು ಮತಯಾಚನೆ ನಡೆಸಬೇಕಾಗಿದೆ. ವಿಐಎಸ್‌ಎಲ್‌ ಮತ್ತು ಎಂಪಿಎಂ ಈ ಕಾರ್ಖಾನೆಗಳ ವಿಚಾರವಾಗಿರಲಿ ಪೂರಕವಾಗಿ ಸ್ಪಂದಿಸಲಾಗಿದೆ. ಇದರ ಕುರಿತು ಮತದಾರರಿಗೆ ಸರಿಯಾಗಿ ಮನವರಿಕೆ ಮಾಡಬೇಕಾಗಿದೆ. ಕ್ಷೇತ್ರಾದ್ಯಂತ ಕಾರ್ಯಕರ್ತರ ಪಡೆ ಈ ಬಾರಿ ಉತ್ತಮವಾಗಿ ಕಾರ್ಯನಿರ್ವಹಿಸುವ ಮೂಲಕ ಜಿಲ್ಲೆಯ 7 ವಿಧಾನಸಭಾ ಕ್ಷೇತ್ರಗಳ ಪೈಕಿ ಈ ವಿಧಾನಸಭಾ ಕ್ಷೇತ್ರದಲ್ಲೂ ಪಕ್ಷದ ಅಭ್ಯರ್ಥಿ ಗೆಲುವು ಸಾಧಿಸುವ ವಿಶ್ವಾಸವಿದೆ ಎಂದರು.

ಪಕ್ಷದ ಅಭ್ಯರ್ಥಿ ಮಂಗೋಟೆ ರುದ್ರೇಶ್‌ ಮಾತನಾಡಿ, ಒಬ್ಬ ಸಾಮಾನ್ಯ ಕಾರ್ಯಕರ್ತನನ್ನು ಗುರುತಿಸಿ ಚುನಾವಣೆಗೆ ಸ್ಪರ್ಧಿಸಲು ಅವಕಾಶ ನೀಡಿರುವುದಕ್ಕೆ ಪಕ್ಷದ ಮುಖಂಡರಿಗೆ ಕೃತಜ್ಞತೆ ಸಲ್ಲಿಸುತ್ತೇನೆ. ಈ ಬಾರಿ ಚುನಾವಣೆಯಲ್ಲಿ ಎಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡುತ್ತಿದ್ದು, ಗೆಲ್ಲುವ ವಿಶ್ವಾಸ ವ್ಯಕ್ತಪಡಿಸಿದರು. ಇನ್ನು ಕರ್ನಾಟಕದಲ್ಲಿ ಒಂದೇ ಹಂತದಲ್ಲಿ ಮೇ 10ರಂದು ಮತದಾನ ನಡೆಯಲಿದ್ದು, ಮೇ 13ಕ್ಕೆ ಮತ ಎಣಿಕೆ ನಡೆಯಲಿದೆ. ಏಪ್ರಿಲ್ 13ಕ್ಕೆ ಚುನಾವಣೆ ಅಧಿಸೂಚನೆ ಹೊರಡಿಸಲಿದ್ದು, ಏಪ್ರಿಲ್ 13ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ. ನಾಮಪತ್ರ ಹಿಂಪಡೆಯಲು ಏಪ್ರಿಲ್ 24 ಕಡೆಯ ದಿನಾಂಕ.

ಹೊಸ ಮತದಾರರ ಒಲವು ಬಿಜೆಪಿಯತ್ತ: ಸಚಿವ ಸಿ.ಸಿ.ಪಾಟೀಲ್‌

ವಿಧಾನ ಪರಿಷತ್ತು ಸದಸ್ಯ ಎಸ್‌. ರುದ್ರೇಗೌಡ, ಪಕ್ಷದ ಪ್ರಮುಖರಾದ ಮಂಡಲ ಅಧ್ಯಕ್ಷ ಜಿ. ಧರ್ಮಪ್ರಸಾದ್‌, ಚುನಾವಣಾ ಪ್ರಭಾರ ಅಶೋಕ್‌ ಮೂರ್ತಿ, ಚುನಾವಣಾ ಸಂಚಾಲಕ ಎಂ.ಮಂಜುನಾಥ್‌, ಸಹ ಸಂಚಾಲಕ ಎಂ.ಎಸ್‌ ಸುರೇಶಪ್ಪ, ಮುಖಂಡರಾದ ಕೆ.ಪಿ ಪವಿತ್ರ ರಾಮಯ್ಯ, ತೀರ್ಥಯ್ಯ, ಜಿ.ಆನಂದಕುಮಾರ್‌, ಕೆ.ವಿ ಸತೀಶ್‌ಗೌಡ, ಉಷಾ ಸತೀಶ್‌ಗೌಡ, ಅನುಪಮ, ಶಶಿಕಲಾ, ಚನ್ನೇಶ್‌, ಚಂದ್ರು, ಗೋಕುಲ್‌ ಕೃಷ್ಣ, ಧನುಷ್‌ ಬೋಸ್ಲೆ, ಬಿ.ಎಸ್‌. ಶ್ರೀನಾಥ್‌ ಆಚಾರ್‌, ಸಿ.ರಾಘವೇಂದ್ರ, ಕವಿತಾ ಸುರೇಶ್‌, ಕವಿತಾ ರಾವ್‌, ಸಂಪತ್‌ರಾಜ್‌ ಬಾಂಟಿಯಾ, ಅವಿನಾಶ್‌, ಸುನಿಲ್‌ ಗಾಯಕ್ವಾಡ್‌ ಇನ್ನಿತರರು ಉಪಸ್ಥಿತರಿದ್ದರು.

Latest Videos
Follow Us:
Download App:
  • android
  • ios