ಕರ್ನಾಟಕದಲ್ಲಿ ಮತ್ತೆ ಡಬಲ್ ಇಂಜಿನ್‌ ಸರ್ಕಾರ: ಗೋವಾ ಸಿಎಂ ಪ್ರಮೋದ್ ಸಾವಂತ್

ಗೋವಾದಲ್ಲೂ ಡಬಲ್ ಇಂಜಿನ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಸಾಕಷ್ಟು ಅಭಿವೃದ್ಧಿಯಾಗಿದೆ. ಚುನಾವಣೆಯ ನಂತರ ರಾಜ್ಯದಲ್ಲಿರುವ ಕಾಂಗ್ರೆಸ್ ಸರ್ಕಾರ ಉರುಳಲಿದ್ದು, ಮತ್ತೆ ಬಿಜೆಪಿಯ ಡಬಲ್ ಇಂಜಿನ್ ಸರ್ಕಾರ ಕರ್ನಾಟಕದಲ್ಲಿ ರಚನೆಯಾಗಲಿದೆ: ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ 

Double Engine Government again in Karnataka Says Goa CM Pramod Sawant grg

ಮಂಡ್ಯ(ಏ.05):  ಕರ್ನಾಟಕದಲ್ಲಿ ಡಬಲ್ ಇಂಜಿನ್ ಸರ್ಕಾರ ಮತ್ತೆ ರಚನೆಯಾಗಲಿದೆ. ಮತ್ತೆ ರಾಜ್ಯ ಅಭಿವೃದ್ಧಿಯತ್ತ ದಾಪುಗಾಲಿಡಲಿದೆ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ರಾಜ್ಯದಲ್ಲಿ ಅಭಿವೃದ್ಧಿ ಸ್ಥಗಿತಗೊಂಡಿದೆ ಎಂದು ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಹೇಳಿದರು.

ಗುರುವಾರ ಮಂಡ್ಯ ವಿಶ್ವವಿದ್ಯಾಲಯದ ಆವರಣದಲ್ಲಿ ಜೆಡಿಎಸ್-ಬಿಜೆಪಿ ಬಹಿರಂಗ ಸಮಾವೇಶ ಉದ್ಘಾಟಿಸಿ ಮಾತನಾಡಿ, ಗೋವಾದಲ್ಲೂ ಡಬಲ್ ಇಂಜಿನ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಸಾಕಷ್ಟು ಅಭಿವೃದ್ಧಿಯಾಗಿದೆ. ಚುನಾವಣೆಯ ನಂತರ ರಾಜ್ಯದಲ್ಲಿರುವ ಕಾಂಗ್ರೆಸ್ ಸರ್ಕಾರ ಉರುಳಲಿದ್ದು, ಮತ್ತೆ ಬಿಜೆಪಿಯ ಡಬಲ್ ಇಂಜಿನ್ ಸರ್ಕಾರ ಕರ್ನಾಟಕದಲ್ಲಿ ರಚನೆಯಾಗಲಿದೆ ಎಂದು ವಿಶ್ವಾಸದಿಂದ ನುಡಿದರು.

ರಾಜ್ಯದ ಉದ್ದಗಲಕ್ಕೂ ಬಿಜೆಪಿ-ಜೆಡಿಎಸ್ ಅಲೆ: ಯಡಿಯೂರಪ್ಪ

ಕಾಂಗ್ರೆಸ್ ಜಾತಿ ಆಧಾರದ ಮೇಲೆ ರಾಜಕಾರಣ ಮಾಡಿದರೆ, ಬಿಜೆಪಿ ವಿಕಾಸದ ಮೇಲೆ ರಾಜಕಾರಣ ಮಾಡುತ್ತಿದೆ. ರಾಜ್ಯದ ಕಾಂಗ್ರೆಸ್ ಸರ್ಕಾರ ಭ್ರಷ್ಟ ಸರ್ಕಾರವಾಗಿದೆ ಎಂದ ಅವರು, ನಾರಿ ಶಕ್ತಿ, ಯುವ ಶಕ್ತಿ, ಕಿಸಾನ್ ಶಕ್ತಿ ಮತ್ತು ಗರೀಬ್ ಕಲ್ಯಾಣ್ ಎಂಬ ನಾಲ್ಕು ಸ್ಥಂಭಗಳ ಸರ್ಕಾರ ಮುನ್ನಡೆಯಲು ಜನರು ಬೆಂಬಲ ನೀಡಬೇಕು ಎಂದು ಕೋರಿದರು.

ಕರ್ನಾಟಕದ ೨೮ ಕ್ಷೇತ್ರಗಳಲ್ಲೂ ಬಿಜೆಪಿ-ಜೆಡಿಎಸ್ ಮೈತ್ರಿಕೂಟದ ಅಭ್ಯರ್ಥಿಗಳು ಗೆಲುವು ಸಾಧಿಸಿದರೆ, ದೇಶಾದ್ಯಂತ ೪೦೦ಕ್ಕೂ ಹೆಚ್ಚು ಸ್ಥಾನಗಳಲ್ಲಿ ಎನ್‌ಡಿಎ ಮೈತ್ರಿಕೂಟ ಜಯಗಳಿಸಲಿದೆ. ಕುಮಾರಸ್ವಾಮಿ ಅವರನ್ನು ಲೋಕಸಭೆಗೆ ಕಳುಹಿಸಬೇಕು, ಮತ್ತೆ ಕೇಂದ್ರದಲ್ಲಿ ಮೋದಿ ಸರ್ಕಾರ ಅಧಿಕಾರಕ್ಕೆ ಬರಬೇಕು ಎಂದರು.

ಲೋಕಸಭೆ ಚುನಾವಣೆ 2024: ಕಾರಿಲ್ಲದ ಕುಮಾರಸ್ವಾಮಿ 219 ಕೋಟಿ ಆಸ್ತಿ ಒಡೆಯ..!

ಕಾಂಗ್ರೆಸ್ ಸರ್ಕಾರ ಐವತ್ತು ವರ್ಷ ಮಾಡದೇ ಇರುವ ಕೆಲಸವನ್ನು ಮೋದಿ ಸರ್ಕಾರ ಹತ್ತು ವರ್ಷಗಳಲ್ಲಿ ಮಾಡಿದೆ. ಈ ವಿಷಯವಾಗಿ ರಾಹುಲ್ ಗಾಂಧಿ ಅವರು ಸಾರ್ವಜನಿಕವಾಗಿ ಬಹಿರಂಗ ಚರ್ಚೆಗೆ ಬರಲಿ ಎಂದು ಸವಾಲು ಹಾಕಿದರು.

ವಿಧಾನಸಭೆಯಲ್ಲಿ ಮೈತ್ರಿ ಆಗಿದ್ದರೆ ಎಚ್‌ಡಿಕೆ ಸಿಎಂ ಆಗುತ್ತಿದ್ದರು: ಸಾವಂತ್‌

ಬಿಜೆಪಿ -ಜೆಡಿಎಸ್ ಮೈತ್ರಿ ವಿಧಾನಸಭಾ ಚುನಾವಣೆಗೆ ಮುಂಚೆ ಆಗಿದ್ದಿದ್ದರೆ ಕುಮಾರಸ್ವಾಮಿ ಮುಖ್ಯಮಂತ್ರಿ ಆಗಿರುತ್ತಿದ್ದರು. ರಾಜ್ಯದಲ್ಲಿ ಡಬಲ್ ಇಂಜಿನ್ ಸರ್ಕಾರ ರಚನೆಯಾಗುತ್ತಿತ್ತು. ಕರ್ನಾಟಕದಲ್ಲಿ ಸೂಪರ್ ಸಿಎಂ, ಶಾಡೋ ಸಿಎಂ ರೀತಿ ಐದೈದು ಜನ ಸಿಎಂಗಳಿದ್ದಾರೆ ಎಂದು ಮೂದಲಿಸಿದರು.

Latest Videos
Follow Us:
Download App:
  • android
  • ios