ಉ.ಕ. ಸಮಸ್ಯೆ ನಿವಾರಿಸುವಲ್ಲಿ ಡಬಲ್‌ ಎಂಜಿನ್‌ ಸರ್ಕಾರ ವಿಫಲ; ಕಾಂಗ್ರೆಸ್ ಪ್ರತಿಭಟನೆ

ಅಧಿಕಾರಕ್ಕೆ ಬರುವ ಮುನ್ನ ಪ್ರಧಾನಿ ನರೇಂದ್ರ ಮೋದಿ ಅವರು ಪ್ರತಿವರ್ಷ ಎರಡು ಕೋಟಿ ಉದ್ಯೋಗ ನೀಡುವುದಾಗಿ ಭರವಸೆ ನೀಡಿದ್ದರು. ಆ ಭರವಸೆ ಇನ್ನೂ ಈಡೇರಿಲ್ಲ ಉತ್ತರ ಕರ್ನಾಟಕ ಭಾಗದ ಸಮಸ್ಯೆ ಬಗೆಹರಿಸುವಲ್ಲಿ ಡಬಲ್‌ ಎಂಜಿನ್‌ ಸರ್ಕಾರ ವಿಫಲವಾಗಿದೆ ಎಂದು ಕಾಂಗ್ರೆಸ್ ಪ್ರತಿಭಟನೆ ನಡೆಸಿತು.

double engine government failed to solve the uttara karnataka problem Congress protest rav

ಹುಬ್ಬಳ್ಳಿ (ಜ.13) : ಹುಬ್ಬಳ್ಳಿ-ಧಾರವಾಡ ಸೇರಿ ಉತ್ತರ ಕರ್ನಾಟಕ ಭಾಗದ ಸಮಸ್ಯೆ ಬಗೆಹರಿಸುವಲ್ಲಿ ಡಬಲ್‌ ಎಂಜಿನ್‌ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿ ಮಹಾನಗರ ಪಾಲಿಕೆ ಕಾಂಗ್ರೆಸ್‌ ಸದಸ್ಯರು ಹಾಗೂ ಕಾರ್ಯಕರ್ತರು ನಗರದಲ್ಲಿ ಪ್ರತಿಭಟನೆ ನಡೆಸಿದರು. ಇದೇ ವೇಳೆ ‘ಪ್ರಧಾನಿ ನರೇಂದ್ರ ಮೋದಿ ಗೋ ಬ್ಯಾಕ್‌’ ಎಂದು ಘೋಷಣೆ ಕೂಗಿದರು.

ಮಹಾನಗರ ಪಾಲಿಕೆ ವಿರೋಧ ಪಕ್ಷದ ನಾಯಕ ದೊರಾಜ್‌ ಮನಿಕುಂಟ್ಲಾ ನೇತೃತ್ವದಲ್ಲಿ ಪಾಲಿಕೆ ಸದಸ್ಯರು ಹಾಗೂ ಮುಖಂಡರು ಬಿಂದಿಗೆ ಹಿಡಿದು ಪ್ರತಿಭಟನೆ ನಡೆಸಿ ಪಾಲಿಕೆ ಮುಂಭಾಗ ಕೆಲಕಾಲ ರಸ್ತೆ ತಡೆ ನಡೆಸಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಬಳಿಕ ತಹಸೀಲ್ದಾರ್‌ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

ಹಕ್ಕುಪತ್ರ ವಿತರಣೆಗೆ ಮೋದಿಯವರನ್ನ ಕರೆಸಿದ್ರೆ ಶಾಸಕರು, ಸಚಿವರು ಯಾಕಿರಬೇಕು? : ಎಚ್‌ಡಿಕೆ

ಅಧಿಕಾರಕ್ಕೆ ಬರುವ ಮುನ್ನ ಪ್ರಧಾನಿ ನರೇಂದ್ರ ಮೋದಿ(Narendra Modi) ಅವರು ಪ್ರತಿವರ್ಷ ಎರಡು ಕೋಟಿ ಉದ್ಯೋಗ ನೀಡುವುದಾಗಿ ಭರವಸೆ ನೀಡಿದ್ದರು. ಆ ಭರವಸೆ ಇನ್ನೂ ಈಡೇರಿಲ್ಲ, ಈಗ ಯುವಕರ ಹೆಸರಲ್ಲಿ ರಾಜಕಾರಣ ಮಾಡಲು ಹುಬ್ಬಳ್ಳಿಗೆ ಬರುತ್ತಿದ್ದಾರೆ. ಯುವಕರನ್ನು ವಂಚಿಸಿದ ಪ್ರಧಾನಿಗೆ ಯುವಕರ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

9 ಕಿಮೀ ಪ್ರಧಾನಿ ಮೋದಿ ರೋಡ್‌ ಶೋ; ದಾರಿಯುದ್ದಕ್ಕೂ ಮೊಳಗಿದ ಜೈಕಾರ!

ಪಾಲಿಕೆ ಸದಸ್ಯೆ ಕವಿತಾ ಕಬ್ಬೇರ ಮಾತನಾಡಿ, ಸ್ವಾಮಿ ವಿವೇಕಾನಂದರ ಹೆಸರಲ್ಲಿ ಕಾರ್ಯಕ್ರಮ ಮಾಡುವ ಇವರು ವಿವೇಕಾನಂದರ ಯಾವ ನೀತಿಗಳನ್ನು ಅನುಸರಿಸುತ್ತಿದ್ದಾರೆ ಎಂಬುದನ್ನು ಆತ್ಮಾವಲೋಕನ ಮಾಡಿಕೊಳ್ಳಬೇಕು. ಸರ್ಕಾರಿ ಕಾರ್ಯಕ್ರಮದ ಸಂದರ್ಭ ತಮ್ಮ ಪಕ್ಷ ಹಾಗೂ ನಾಯಕರ ಭಾವಚಿತ್ರಗಳ ಬ್ಯಾನರ್‌ ಹಾಕಲಾಗಿದೆ. ಜನರ ದುಡ್ಡಲ್ಲಿ ಪಕ್ಷದ ಕಾರ್ಯಕ್ರಮ ಮಾಡುತ್ತಿದ್ದಾರೆ ಎಂದು ಆರೋಪಿಸಿದರು. ಈ ವೇಳೆ ಪಾಲಿಕೆ ಸದಸ್ಯರಾದ ಇಮ್ರಾನ್‌ ಎಲಿಗಾರ ಹಾಗೂ ಮುಖಂಡರಾದ ಪ್ರಕಾಶ ಕ್ಯಾರಕಟ್ಟಿ, ಮೋಹನ ಹಿರೇಮನಿ ಇತರರಿದ್ದರು.

Latest Videos
Follow Us:
Download App:
  • android
  • ios