ಕಾಂಗ್ರೆಸ್ ಸರ್ಕಾರ 5 ವರ್ಷ ಪೂರೈಸೋದೆ ಅನುಮಾನ: ಸಂಸದ ರಾಘವೇಂದ್ರ ಭವಿಷ್ಯ

ಕಾಂಗ್ರೆಸ್ ಸರ್ಕಾರ ಐದು ವರ್ಷ ಪೂರ್ಣಗೊಳಿಸೋದು ಅನುಮಾನ ಇದೆ, ಈ ಸರ್ಕಾರ ಯಾವ್ಯಾಗ ಬೀಳುತ್ತೆ ಗೊತ್ತಿಲ್ಲ ಎಂದು ಸಂಸದ ಬಿ.ವೈ.ರಾಘವೇಂದ್ರ ಭವಿಷ್ಯ ನುಡಿದರು. 

Doubt if Congress government will complete 5 years Says MP BY Raghavendra gvd

ಶಿವಮೊಗ್ಗ (ಜು.16): ಕಾಂಗ್ರೆಸ್ ಸರ್ಕಾರ ಐದು ವರ್ಷ ಪೂರ್ಣಗೊಳಿಸೋದು ಅನುಮಾನ ಇದೆ, ಈ ಸರ್ಕಾರ ಯಾವ್ಯಾಗ ಬೀಳುತ್ತೆ ಗೊತ್ತಿಲ್ಲ ಎಂದು ಸಂಸದ ಬಿ.ವೈ.ರಾಘವೇಂದ್ರ ಭವಿಷ್ಯ ನುಡಿದರು. ಇಲ್ಲಿನ ಗೋಪಾಲಗೌಡ ಬಡಾವಣೆಯಲ್ಲಿರುವ ಬಂಟರ ಭವನದಲ್ಲಿ ಜಿಲ್ಲಾ ಬಿಜೆಪಿ ವಿಶೇಷ ಕಾರ್ಯಕಾರಣಿ ಸಭೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ಸೇಡಿನ ರಾಜಕಾರಣ ಮಾಡುತ್ತಿದೆ. ನಮ್ಮ ಜಿಲ್ಲೆಯ ಅಭಿವೃದ್ಧಿಗೆ ಒಂದು ರೂಪಾಯಿ ಹಣ ಈ ಸರ್ಕಾರ ನೀಡುತ್ತಿಲ್ಲ. ಅಧಿಕಾರದ ಮದ ಕಾಂಗ್ರೆಸ್ ನಾಯಕರಿಗೆ ಬಂದಿದೆ. ಚಾಮರಾಜನಗರದಲ್ಲಿ ಮನವಿ ಪತ್ರವನ್ನು ಕಸದ ಬುಟ್ಟಿಗೆ ಹಾಕಿದ್ದಾರೆ. 

ಇದು ಕಾಂಗ್ರೆಸ್ ನಾಯಕರ ಕಾಳಜಿ ತೋರಿಸುತ್ತದೆ. ಕಾಂಗ್ರೆಸ್‌ ನಾಯಕರಿಗೆ ಜನರ ಬಗ್ಗೆ ಕಾಳಜಿ ಇಲ್ಲ ಎಂದು ವಾಗ್ದಾಳಿ ನಡೆಸಿದರು. ಮುಖ್ಯ ಮಂತ್ರಿಗೆ ನೀಡಿದ ಮನವಿ ಪತ್ರಗಳು ಕಸದ ಬುಟ್ಟಿಗೆ ಸೇರಿವೆ. ಜನರಿಗೆ ಮೋಸ ಮಾಡುತ್ತಿರುವ ಇರುವ ಕಾಂಗ್ರೆಸ್ ಸರ್ಕಾರದ ಬಗ್ಗೆ ಕಾರ್ಯಕರ್ತರು ಜನರಿಗೆ ತಿಳಿಸಬೇಕು ಎಂದರು. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ವರ್ಷ ಕಳೆದಿದೆ. ಕಾಂಗ್ರೆಸ್ ನವರು ಜನರಿಗೆ ನೀಡಿದ್ದ ಆಶ್ವಾಸನೆಯನ್ನು ನಿರೀಕ್ಷೆ ಮಟ್ಟದಲ್ಲೂ ಮುಟ್ಟಲು ಸಾಧ್ಯವಾಗಿಲ್ಲ. ಭ್ರಷ್ಟಾಚಾರ, ಬೆಲೆ ಏರಿಕೆಯಲ್ಲೇ ಮುಳು ಗಿರುವ ಕಾಂಗ್ರೆಸ್ ಸರ್ಕಾರ ಲೋಕಸಭೆಯಲ್ಲಿ ಗ್ಯಾರೆಂಟಿ ವಿಷಯಗಳನ್ನು ತಂದು ಚುನಾವಣೆಯಲ್ಲಿ ಗೆಲ್ಲಬಹುದು ಎಂದು ಬಂದಿದ್ದರು. 

ಮಲೆನಾಡಿನಲ್ಲಿ ಮಳೆ ಬಿರುಸು: ರೀಲ್ಸ್ ಮಾಡಿದ ಹುಚ್ಚಿಗೆ ರಸ್ತೆ ಸಂಪೂರ್ಣ ಹಾಳು, ಐವರು ಪೊಲೀಸ್ ವಶಕ್ಕೆ!

ಅವರಿಗೆ ಜನ ಸರಿಯಾದ ರೀತಿಯಲ್ಲಿ ಉತ್ತರ ಕೊಟ್ಟು ವಿರೋಧ ಪಕ್ಷದಲ್ಲಿ ಕೂರಿಸಿದ್ದಾರೆ. ಕರ್ನಾಟಕದ ಜನ ದೇಶಕ್ಕೆ ಮೋದಿ ಬೇಕು ಎಂದು ಸಂಕಲ್ಪ ಮಾಡಿ ಪಾರ್ಲಿಮೆಂಟ್ ಚುನಾವಣೆಯಲ್ಲಿ ರಾಜ್ಯದ 139ಕ್ಷೇತ್ರದಲ್ಲಿ ಬಿಜೆಪಿಗೆ ಮೊದಲ ಸ್ಥಾನ ಕೊಟ್ಟು ಕಾಂಗ್ರೆಸ್ಗೆ ಒಳ್ಳೆ ಸಂದೇಶವನ್ನು ಕೊಟ್ಟಿದ್ದಾರೆ ಎಂದರು. ಶಾಸಕ ಆರಗ ಜ್ಞಾನೇಂದ್ರ ಮಾತನಾಡಿ, ವಾಲ್ಮೀಕಿ ಅಭಿವೃದ್ಧಿ ಹಗರಣ ಕಾಂಗ್ರೆಸ್ ಮುಖ ಕಳಚಿದೆ. ಈಗಾಗಲೇ ಕಾಂಗ್ರೆಸ್‌ನ ಸಚಿವ ನಾಗೇಂದ್ರ ಅವರನ್ನು ಅರೆಸ್ಟ್ ಮಾಡಲಾಗಿದೆ. ಹಗರಣ ನಡೆದಿರೋದು ನೋಡಿದ್ರೆ ಹಣ ಬೇರೆ ರಾಜ್ಯದ ಹಣ ಚುನಾವಣೆಗೋಸ್ಕರ ರವಾನೆಯಾಗಿರುವುದು ಗೊತ್ತಾಗಿದೆ. 

ಈ ಹಗರಣದಲ್ಲಿ ಸಿಎಂ, ಡಿಸಿಎಂ ಪಾತ್ರ ಇದೆ ಅನ್ನೋದು ಸ್ಪಷ್ಟವಾಗಿದೆ. ಹೀಗಾಗಿ ಎಸ್‌ಐಟಿ ಅಧಿಕಾರಿಗಳನ್ನೇ ಈ ಪ್ರಕರಣದಲ್ಲಿ ಸಿಎಂ ವಿಚಾರಣೆಗೆ ಒಳಪಡಿಸಬೇಕು ಎಂದು ಟೀಕಿಸಿದರು. ರಾಜ್ಯದಲ್ಲಿ ನಾಟಕೀಯವಾಗಿ ಕಾಂಗ್ರೆಸ್ ನಾಯಕರು ಅಧಿಕಾರ ನಡೆಸುತ್ತಿದ್ದಾರೆ. ಇದುವರೆಗೂ ಸಿದ್ದರಾಮಯ್ಯ ನನ್ನ ಮೇಲೆ ಒಂದು ಕಪ್ಪು ಚುಕ್ಕೆ ಇಲ್ಲ ಅಂತಾ ಓಡಾಡುತ್ತಿದ್ದರು. ಈಗ ಮೂಡ ಹಗರಣದಲ್ಲಿ ಅಡ್ಡಡ್ಡ ಸಿಕ್ಕಿಹಾಕಿಕೊಂಡಿದ್ದಾರೆ. ಈ ಹಗರಣದಲ್ಲಿಸಿಎಂ ಭಾಗಿಯಾಗಿದ್ದಾರೆ. ಈ ಪ್ರಕರಣವನ್ನು ಸಿಬಿಐಗೆ ವಹಿಸಬೇಕು ಎಂದರು. ಸಭೆಯಲ್ಲಿ ಬಿಜೆಪಿ ಜಿಲ್ಲಾ ಅಧ್ಯಕ್ಷಟಿ.ಡಿ.ಮೇಘರಾಜ್, ಬಿಜೆಪಿ ರಾಜ್ಯ ಉಪಾಧ್ಯಕ್ಷ ಹರತಾಳು ಹಾಲಪ್ಪ. ವಿಧಾನಸಭಾ ಸದಸ್ಯರಾದ ಡಾ.ಧನಂಜಯ್ ಸರ್ಜಿ ಉಪಸ್ಥಿತರಿದ್ದರು.

ಮಳೆಗೆ ಪ್ರಾರ್ಥಿಸಿ ಗೋರಿಯ ಶವದ ಬಾಯಿಗೆ ನೀರು ಬಿಡ್ತಾರೆ: ವಿಜಯಪುರದಲ್ಲಿ ಮಳೆಗಾಗಿ ಭಯಾನಕ ಆಚರಣೆ!

'ಎಲ್ಲಾ ನಿಗಮಗಳ ವಹಿವಾಟುಗಳ ತನಿಖೆಯಾಗಲಿ': ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದಲ್ಲಿ ಈಗಾಗಲೇ ಸಚಿವರು ರಾಜೀನಾಮೆ ನೀಡಿದ್ದಾರೆ. ಪ್ರಕರಣದ ತನಿಖೆ ಮುಂದುವರೆದಿದೆ. ಇಡಿ ಮತ್ತು ಎಸ್‌ಐಟಿ ಅಧಿಕಾರಿಗಳು ತನಿಖೆ ಮುಂದುವರೆಸಿದ್ದಾರೆ. ಇದೇ ರೀತಿ ಎಲ್ಲಾ ನಿಗಮಗಳದು ವಹಿವಾಟು ತನಿಖೆಯಾಗಬೇಕು ಎಂದು ಮಾಜಿ ಸಚಿವ ಕುಮಾರ ಬಂಗಾರಪ್ಪ ಒತ್ತಾಯಿಸಿದರು. ಸರ್ಕಾರ ತಕ್ಷಣಕ್ಕೆ ಮಾಹಿತಿ ತರಿಸಿಕೊಂಡು ಕಾನೂನು ರೀತಿ ವ್ಯವಹಾರ ಆಗಿದೆಯಾ ಪರಿಶೀಲನೆ ನಡೆಸಬೇಕು. ಆಡಳಿತ ವ್ಯವಸ್ಥೆ ಅಧೋಗತಿಗೆ ಹೋಗಿರೋದು ಶೋಚನೀಯ. ಕೆಲ ಅಧಿಕಾರಿಗಳ ಕೈವಾಡ ಇದೆ ಅನ್ನೋದು ಸಾಬೀತಾಗಿದೆ. ಬಡವರ ಹಣ ದುರ್ಬಳಕೆ ಆಗಿದೆ. ಸರ್ಕಾರ ತೀಕ್ಷ್ಮವಾಗಿ ತೆಗೆದುಕೊಂಡು ತನಿಖೆ ನಡೆಸಬೇಕು. ನಿಮ್ಮ ಬುಡದಲ್ಲಿ ಉರಿಯುತ್ತಿರುವುದನ್ನು ಸರಿಪಡಿಸಕೊಳ್ಳಬೇಕು ಎಂದರು.

Latest Videos
Follow Us:
Download App:
  • android
  • ios