ಕಾಂಗ್ರೆಸ್ ಪಕ್ಷದ ಚಟುವಟಿಕೆಯಿಂದ ದೂರವಿದ್ದು ಕ್ಷೇತ್ರಕ್ಕೆ ಸೀಮಿತವಾಗಿರುವ ಮಾಜಿ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅವರು ಭಾನುವಾರ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಸುದೀರ್ಘ ಮಾತುಕತೆ ನಡೆಸಿದ್ದಾರೆ.
ಬೆಂಗಳೂರು (ಮೇ.30): ಕಾಂಗ್ರೆಸ್ ಪಕ್ಷದ ಚಟುವಟಿಕೆಯಿಂದ ದೂರವಿದ್ದು ಕ್ಷೇತ್ರಕ್ಕೆ ಸೀಮಿತವಾಗಿರುವ ಮಾಜಿ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅವರು ಭಾನುವಾರ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಸುದೀರ್ಘ ಮಾತುಕತೆ ನಡೆಸಿದ್ದಾರೆ. ಇತ್ತೀಚೆಗೆ ಪಕ್ಷದ ಚಟುವಟಿಕೆಯಿಂದ ದೂರ ಉಳಿದಿದ್ದ ಅವರು ಶನಿವಾರ ತುಮಕೂರಲ್ಲಿ ನಡೆದ ಕುರುಬರ ಜಾಗೃತಿ ಸಮಾವೇಶಕ್ಕೂ ಗೈರಾಗಿದ್ದರು. ಇದು ತೀವ್ರ ಚರ್ಚೆಗೆ ಗ್ರಾಸವಾದ ಬೆನ್ನಲ್ಲೇ ಭಾನುವಾರ ಸಿದ್ದರಾಮಯ್ಯ ಅವರ ಬೆಂಗಳೂರಿನ ಅಧಿಕೃತ ನಿವಾಸದಲ್ಲಿ ಭೇಟಿ ಮಾಡಿ ಚರ್ಚಿಸಿದ್ದು ಗಮನಾರ್ಹ.
ಬಳಿಕ ಮಾತನಾಡಿದ ಪರಮೇಶ್ವರ್, ‘ಪಕ್ಷದ ಕಾರ್ಯಕ್ರಮಗಳಿಂದ ನಾನು ದೂರ ಉಳಿದಿಲ್ಲ. ನನಗೆ ಪಕ್ಷದ ಮೇಲಾಗಲಿ ನಾಯಕರ ಮೇಲಾಗಲಿ ಸಿಟ್ಟಿಲ್ಲ. ವೈಯಕ್ತಿಕ ಕಾರಣಗಳಿಂದ ಎರಡ್ಮೂರು ಕಾರ್ಯಕ್ರಮಗಳಿಗೆ ಹೋಗಿಲ್ಲ ಅಷ್ಟೇ. ಅದನ್ನು ಬಿಟ್ಟು ಕ್ಷೇತ್ರದಲ್ಲಿ ಕೆಲಸ ಮಾಡುತ್ತಿದ್ದೇನೆ. ಇತ್ತೀಚೆಗೆ ನಡೆದ ವಿಧಾನಪರಿಷತ್ ಚುನಾವಣೆಯಲ್ಲಿ ಜಿಲ್ಲೆಯಲ್ಲಿ ಓಡಾಡಿ ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸಿದ್ದೇವೆ’ ಎಂದು ಸ್ಪಷ್ಟನೆ ನೀಡಿದರು.
ದಲಿತ ಎಂಬ ಕಾರಣಕ್ಕೆ ದೇವಸ್ಥಾನಕ್ಕೆ ಸೇರಿಸೋಲ್ಲ: ಪರಮೇಶ್ವರ್ ಅಸಮಾಧಾನ
ಪಕ್ಷದಿಂದ ಅಂತರ ಕಾಯ್ದುಕೊಂಡಿಲ್ಲ: ನನ್ನ ಹಾಗೂ ಸಿದ್ದರಾಮಯ್ಯ ಭೇಟಿಯಲ್ಲಿ ವಿಶೇಷತೆ ಏನೂ ಇಲ್ಲ. ನನ್ನ ಹಾಗೂ ಅವರ ಸಂಬಂಧ ಹಳೆಯದ್ದು. ಹೀಗಾಗಿ ಇತ್ತೀಚೆಗಿನ ಚಟುವಟಿಕೆಗಳ ಬಗ್ಗೆ ಚರ್ಚೆ ನಡೆಸಿದ್ದೇವೆ. ನನ್ನ ಹಾಗೂ ಅವರ ಭೇಟಿಯಲ್ಲಿ ವಿಶೇಷತೆ ಏನೂ ಇಲ್ಲ. . ಪಕ್ಷದೊಂದಿಗೆ ಅಂತರ ಕಾಯ್ದುಕೊಂಡಿದ್ದೇನೆ ಎಂಬುದೂ ಸುಳ್ಳು. ರಾಜ್ಯ ಮಟ್ಟದ ಕಾರ್ಯಕ್ರಮ ಇದ್ದಾಗ ಬರುತ್ತೇನೆ. ಉಳಿದ ಸಮಯದಲ್ಲಿ ಕ್ಷೇತ್ರದಲ್ಲಿ ಇರುತ್ತೆನೆ’ ಎಂದರು.
‘ಇನ್ನು ಕೆ.ಎನ್. ರಾಜಣ್ಣ ಅವರ ಬಗ್ಗೆ ಮುನಿಸಿಕೊಂಡಿದ್ದೀರಿ?’ ಎಂಬ ಪ್ರಶ್ನೆಗೆ, ‘ಹಾಗೇನೂ ಇಲ್ಲ. ರಾಜಣ್ಣನವರ ಮೇಲೆ ಕೋಪ ಮಾಡಿಕೊಳ್ಳಲು ಏನಿದೆ? ಇದೆಲ್ಲವೂ ಊಹಾಪೋಹ’ ಎಂದು ಸ್ಪಷ್ಟಪಡಿಸಿದರು. ‘ರಾಜ್ಯಸಭೆ ಚುನಾವಣೆ ಬಗ್ಗೆ ಹೈಕಮಾಂಡ್ ನಿರ್ಧರಿಸಲಿದೆ. ಹೆಚ್ಚುವರಿ ಅಭ್ಯರ್ಥಿ ಹಾಕುವ ಬಗ್ಗೆ ಪಕ್ಷದ ರಾಜ್ಯಾಧ್ಯಕ್ಷರು ತೀರ್ಮಾನಿಸುತ್ತಾರೆ. ಅದರಲ್ಲಿ ನಮ್ಮ ಪಾತ್ರವಿರುವುದಿಲ್ಲ’ ಎಂದು ಸ್ಪಷ್ಟನೆ ನೀಡಿದರು.
ಕಾಂಗ್ರೆಸ್‌ನಲ್ಲಿ ದಲಿತ ಸಿಎಂಗೆ ಅವಕಾಶ: ಬಿಜೆಪಿಯಲ್ಲಿ ದಲಿತರನ್ನು ಮುಖ್ಯಮಂತ್ರಿ ಮಾಡುವುದಿಲ್ಲ ಎಂದು ಸ್ಪಷ್ಟವಾಗಿ ಹೇಳಿದಂತೆ ಆಗಿದೆ. ಆದರೆ ನಮ್ಮ ಪಕ್ಷದ ವಿದ್ಯಮಾನಗಳ ಬಗ್ಗೆ ಅವರಿಗೆ ಗೊತ್ತಿಲ್ಲ. ಕಾಂಗ್ರೆಸ್ ಪಕ್ಷದಲ್ಲಿ ದಲಿತ ಮುಖ್ಯಮಂತ್ರಿಗೆ ಅವಕಾಶ ನೀಡುತ್ತಾರೆ ಎಂದು ಮಾಜಿ ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ಅಭಿಪ್ರಾಯಪಟ್ಟಿದ್ದಾರೆ. ತನ್ಮೂಲಕ ಮತ್ತೊಮ್ಮೆ ರಾಜ್ಯ ಕಾಂಗ್ರೆಸ್‌ನಲ್ಲಿ ದಲಿತ ಮುಖ್ಯಮಂತ್ರಿ ಕೂಗು ಎದ್ದಂತಾಗಿದೆ.
ಭಾನುವಾರ ವಿಧಾನಸಭೆ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಚರ್ಚಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಕೇಂದ್ರ ಸಚಿವ ಎ. ನಾರಾಯಣಸ್ವಾಮಿ ಅವರು ರಾಜ್ಯದಲ್ಲಿ ದಲಿತ ಮುಖ್ಯಮಂತ್ರಿ ಆಗುವುದಿಲ್ಲ ಎಂದು ಹೇಳಿದ್ದಾರೆ. ಇದರಿಂದ ಬಿಜೆಪಿಯಲ್ಲಿ ದಲಿತರನ್ನು ಮುಖ್ಯಮಂತ್ರಿ ಮಾಡುವುದಿಲ್ಲ ಎಂದು ಸ್ಪಷ್ಟವಾಗಿ ಹೇಳಿದಂತಾಗಿದೆ. ಆದರೆ ಅವರಿಗೆ ನಮ್ಮ ಪಕ್ಷದ ವಿದ್ಯಮಾನಗಳ ಬಗ್ಗೆ ಅರಿವಿಲ್ಲ. ಅವರಿಗೆ ಗೊತ್ತಿರುವುದು ಬಿಜೆಪಿ ಆಂತರಿಕ ವಿಚಾರಗಳು ಮಾತ್ರ. ಕಾಂಗ್ರೆಸ್ ಪಕ್ಷದಲ್ಲಿ ದಲಿತ ಮುಖ್ಯಮಂತ್ರಿಗೆ ಅವಕಾಶ ನೀಡುತ್ತಾರೆ ಎಂಬುದು ನನ್ನ ಅಭಿಪ್ರಾಯ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಪರಮೇಶ್ವರ್‌ರಿಂದ ಪ್ರಜಾಪ್ರಭುತ್ವ ಉಳಿಯಲಿ: ಬರಗೂರು ರಾಮಚಂದ್ರಪ್ಪ
‘ರಾಜ್ಯದಲ್ಲಿ ಮುಖ್ಯಮಂತ್ರಿ ಕನಸು ಕಾಣುವ ದಲಿತರು ಹುಚ್ಚರು’ ಎಂಬ ನಾರಾಯಣಸ್ವಾಮಿ ಹೇಳಿಕೆಗೆ ಪ್ರತಿಕ್ರಿಯಿಸಿ, ‘ಬಿಜೆಪಿಯಲ್ಲಿ ಹಲವು ಹಿರಿಯ ದಲಿತ ನಾಯಕರಿದ್ದಾರೆ. ಸ್ವತಃ ನಾರಾಯಣಸ್ವಾಮಿ ಅವರು ಸಹ ಕೇಂದ್ರ ಸಚಿವರಾಗಿದ್ದಾರೆ. ಅವರು ಮುಖ್ಯಮಂತ್ರಿ ಕನಸು ಕಾಣುವ ದಲಿತರನ್ನು ಹುಚ್ಚರು ಎಂದಿರುವುದರಿಂದ ಬಿಜೆಪಿಯವರು ದಲಿತರಿಗೆ ಅವಕಾಶವಿಲ್ಲ ಎಂಬುದು ಸ್ಪಷ್ಟವಾಗಿದೆ. ಅವರು ಬಿಜೆಪಿ ಬಗ್ಗೆ ಮಾತ್ರ ಮಾತನಾಡದೆ ನನ್ನ ಹಾಗೂ ಮಲ್ಲಿಕಾರ್ಜುನ ಖರ್ಗೆ ಹೆಸರನ್ನು ಪ್ರಸ್ತಾಪಿಸಿದ್ದಾರೆ. ನಮ್ಮ ಪಕ್ಷದಲ್ಲಿ ಬಿಜೆಪಿಯಂತಹ ವಾತಾವರಣ ಇಲ್ಲ. ನಮ್ಮಲ್ಲಿ ದಲಿತ ಮುಖ್ಯಮಂತ್ರಿ ಆಗುವ ಅವಕಾಶ ಇದೆ’ ಎಂದರು.
