ಆರೋಗ್ಯ ಸಚಿವರಿಗೆ ಅನಾರೋಗ್ಯ: ಅಧಿವೇಶನದಿಂದ ದೂರ ಉಳಿದ ಸುಧಾಕರ್
ವಿಧಾನಸೌಧದಲ್ಲಿ ನಡೆಯುತ್ತಿರುವ ಮುಂಗಾರು ಅಧಿವೇಶನದಲ್ಲಿ ಆರೋಗ್ಯ ಸಚಿವ ಡಾ.ಕೆ ಸುಧಾಕರ್ ಗೈರಾಗಿರುವುದಕ್ಕೆ ಕಾರಣ ಕೊಟ್ಟಿದ್ದಾರೆ.
ಬೆಂಗಳೂರು, (ಸೆಪ್ಟೆಂಬರ್.15): ಆರೋಗ್ಯ ಸಚಿವ ಡಾ.ಕೆ ಸುಧಾಕರ್ ಅವರು ಅನಾರೋಗ್ಯ ಬಳಲುತ್ತಿದ್ದರಿಂದ ಅವರು ಇದೀಗ ವಿಶ್ರಾಂತಿಯಲ್ಲಿದ್ದಾರೆ. ಈ ಹಿನ್ನೆಲೆಯಲ್ಲಿ ಸುಧಾಕರ್ ಅವರು ಮುಂಗಾರು ಅಧಿವೇಶನಕ್ಕೆ ಗೈರಾಗಿದ್ದಾರೆ.
ಈ ಬಗ್ಗೆ ಸ್ವತಃ ಸುಧಾಕರ್ ಅವರೇ ಟ್ವೀಟ್ ಮೂಲಕ ಮಾಹಿತಿ ನೀಡಿದ್ದು, ಅನಾರೋಗ್ಯ ಹಿನ್ನೆಲೆಯಲ್ಲಿ ವೈದ್ಯರು ಕೆಲ ದಿನಗಳ ವಿಶ್ರಾಂತಿಗೆ ಸೂಚಿಸಿದ್ದಾರೆ. ಈ ಕಾರಣಕ್ಕಾಗಿ ಸದನದ ಕಲಾಪದಲ್ಲಿ ಭಾಗವಹಿಸಲು ಸಾಧ್ಯವಾಗದೇ ಇರುವುದಕ್ಕೆ ವಿಷಾದವಿದೆ. ಆದಷ್ಟು ಶೀಘ್ರದಲ್ಲೇ ಕರ್ತವ್ಯಕ್ಕೆ ಹಾಜರಾಗುತ್ತೇನೆ. ನಿಮ್ಮ ಹಾರೈಕೆ ಇರಲಿ ಎಂದು ಟ್ವೀಟ್ ಮಾಡಿದ್ದಾರೆ.
ಗ್ರಾಮೀಣರಿಗೆ ಉತ್ತಮ ಆರೋಗ್ಯ ನೀಡುವ ಗುರಿ: ಸಚಿವ ಸುಧಾಕರ್
ಸೋಮವಾರದಿಂದ ಆರಂಭವಾಗಿರುವ ಮುಂಗಾರು ಅಧಿವೇಶನದಲ್ಲಿ ಆರೋಗ್ಯ ಸಚಿವರೇ ಕಾಣಿಸಿಕೊಳ್ಳುತ್ತಿಲ್ಲ. ಎನ್ನುವ ಮಾತುಗಳು ಕೇಳಿಬಂದಿದ್ದವು. ಆದ್ರೆ, ಇದೀಗ ಅವರಿಗೆ ಅನಾರೋಗ್ಯ ಹಿನ್ನಲೆಯಲ್ಲಿ ಮುಂಗಾರು ಅಧಿವೇಶನದಿಂದ ದೂರ ಉಳಿದಿದ್ದಾರೆ
ಜನಸ್ಪಂದನ ಸಮಾವೇಶಕ್ಕೆ ಓಡಾಡಿ ಸುಸ್ತಾದ್ರಾ?
ದೊಡ್ಡಬಳ್ಳಾಪುರದಲ್ಲಿ ನಡೆದಿದ್ದ ಬಿಜೆಪಿ ಸೆಪ್ಟೆಂಬರ್ 10ರಂದು ಬಿಜೆಪಿ ಸರ್ಕಾರ ಮೂರು ವರ್ಷ ಪೂರೈಸಿದ ಹಿನ್ನೆಲೆ ಜನಸ್ಪಂದನೆ ಸಮಾವೇಶವನ್ನು ಆಯೋಜಿಸಲಾಗಿತ್ತು. ಈ ಕಾರ್ಯಕ್ರಮವನ್ನು ಯಶಸ್ವಿಯಾಗಿ ನಡೆಸುವ ಜವಾಬ್ದಾರಿ ಅನ್ನು ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಹೆಗಲಿಗೆ ವಹಿಸಲಾಗಿತ್ತು. ಇದರಿಂದ ಸಮಾವೇಶ ಯಶಸ್ವಿಗೆ ಅವರು ಹಗಲು ರಾತ್ರಿ ಎನ್ನದೇ ಸ್ಥಳದಲ್ಲೇ ಇದ್ದುಕೊಂಡು ಸಿದ್ಧತೆಗಳನ್ನ ನೋಡಿಕೊಂಡಿದ್ರು. ಆದ್ದರಿಂದ ಅವರು ದಣಿಕೊಂಡಿದ್ದು, ವೈದ್ಯರು ರೆಸ್ಟ್ ಮಾಡಲು ಸೂಚಿಸಿದ್ದಾರೆ ಎನ್ನಲಾಗಿದೆ.
ಬಿಜೆಪಿಯ ಜನಸ್ಪಂದನ ಸಮಾವೇಶ ಉಸ್ತುವಾರಿ ವಹಿಸಿಕೊಂಡಿದ್ದ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ ಸುಧಾಕರ್, ಪಕ್ಷದ ಕಾರ್ಯಕ್ರಮವನ್ನು ಯಶಸ್ವಿಯಾಗಿ ನಿರ್ವಹಿಸಿದ್ದರು. ಅದಕ್ಕಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಪಕ್ಷದ ನಾಯಕರಿಂದ ಶಹಬ್ಬಾಶ್ ಗಿರಿ ಅನ್ನು ಸಹ ನೀಡಿದ್ದರು.