Asianet Suvarna News Asianet Suvarna News

ಪಕ್ಷ ನಿಷ್ಠರನ್ನು ಕಡೆಗಣಿಸಬೇಡಿ: ಬಿಜೆಪಿ ನಾಯಕ ಡಾ.ಸಿದ್ದರಾಮಯ್ಯ

ಜೆಡಿಎಸ್-ಬಿಜೆಪಿ ಮೈತ್ರಿಗೆ ನಮಗೆ ಯಾವುದೇ ಆಕ್ಷೇಪ ಇಲ್ಲ. ಆದರೆ, ಚುನಾವಣೆಗೆ ನಮ್ಮ ಪಕ್ಷದ ಅಭ್ಯರ್ಥಿಯೇ ಸ್ಪರ್ಧಿಸಬೇಕು. ಸ್ಪರ್ಧೆಗೆ ನಾವು ಸಮರ್ಥರಿದ್ದೇವೆ. ನಾನೂ ಕೂಡ ಪಕ್ಷದ ಟಿಕೆಟ್ ಆಕಾಂಕ್ಷಿಯಾಗಿದ್ದೇನೆ. ಐದು ವರ್ಷಗಳಿಂದ ಪಕ್ಷ ವಹಿಸಿದ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸಿ ಪಕ್ಷವನ್ನು ಕಟ್ಟಿ ಬೆಳೆಸಿದ್ದೇನೆ. ನನಗೊಂದು ಅವಕಾಶ ನೀಡುವಂತೆ ವರಿಷ್ಠರಲ್ಲಿ ಮನವಿ ಮಾಡುತ್ತಿದ್ದೇನೆ: ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯ ಡಾ.ಸಿದ್ದರಾಮಯ್ಯ 

Dr Siddaramaiah Talks Over BJP grg
Author
First Published Feb 3, 2024, 4:00 AM IST

ಮಂಡ್ಯ(ಫೆ.03): ಪಕ್ಷದ ಬಲವರ್ಧನೆಗೆ ಹಗಲಿರುಳು ಶ್ರಮಿಸಿರುವ ನಮ್ಮನ್ನು ಕಡೆಗಣಿಸಬೇಡಿ. ನಮಗೂ ಅವಕಾಶಗಳನ್ನು ಕೊಡಿ. ನಮ್ಮ ಹಾಗೂ ಪಕ್ಷದ ಶಕ್ತಿ ಏನೆಂಬುದನ್ನು ತೋರಿಸುತ್ತೇವೆ ಎಂದು ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯ ಡಾ.ಸಿದ್ದರಾಮಯ್ಯ ಹೇಳಿದರು.

ಶುಕ್ರವಾರ ನಗರದ ತಾವರೆಗೆರೆಯಲ್ಲಿ ಅಭಿಮಾನಿಗಳು ಮತ್ತು ಕಾರ್ಯಕರ್ತರ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ನನಗೆ ಅಧಿಕಾರದ ಆಸೆ ಇಲ್ಲ. ಆದರೆ, ಸಾರ್ವಜನಿಕವಾಗಿ ಕೆಲಸ ಮಾಡುವುದಕ್ಕೆ ಯಾವುದಾದರೊಂದು ಅಧಿಕಾರ ಮುಖ್ಯ. ಜಿಲ್ಲೆಯೊಳಗೆ ಪಕ್ಷವನ್ನು ಸದೃಢವಾಗಿ ಕಟ್ಟಿ ಬೆಳೆಸಿದ್ದೇವೆ. ಅದರ ಫಲವನ್ನು ನಮ್ಮ ಪಕ್ಷದವರು ಅನುಭವಿಸಲು ಅವಕಾಶ ಕೊಡಬೇಕು. ಬೇರೆಯವರಿಗೆ ಕೊಡುವುದರಿಂದ ನಿಷ್ಠೆಯಿಂದ ಪಕ್ಷಕ್ಕೆ ದುಡಿದ ಮುಖಂಡರು,ಕಾರ್ಯಕರ್ತರ ಮನಸ್ಸಿಗೆ ನೋವುಂಟಾಗುತ್ತದೆ ಎಂದು ತಿಳಿಸಿದರು.

ದೇವೇಗೌಡ, ಕುಮಾರಸ್ವಾಮಿಯವ್ರ ಆರೋಗ್ಯ ಕೆಡಿಸಿದ್ದೇ ಚಲುವರಾಯಸ್ವಾಮಿ: ಮಾಜಿ ಸಚಿವ ಪುಟ್ಟರಾಜು ಕಿಡಿ

ಜೆಡಿಎಸ್-ಬಿಜೆಪಿ ಮೈತ್ರಿಗೆ ನಮಗೆ ಯಾವುದೇ ಆಕ್ಷೇಪ ಇಲ್ಲ. ಆದರೆ, ಚುನಾವಣೆಗೆ ನಮ್ಮ ಪಕ್ಷದ ಅಭ್ಯರ್ಥಿಯೇ ಸ್ಪರ್ಧಿಸಬೇಕು. ಸ್ಪರ್ಧೆಗೆ ನಾವು ಸಮರ್ಥರಿದ್ದೇವೆ. ನಾನೂ ಕೂಡ ಪಕ್ಷದ ಟಿಕೆಟ್ ಆಕಾಂಕ್ಷಿಯಾಗಿದ್ದೇನೆ. ಐದು ವರ್ಷಗಳಿಂದ ಪಕ್ಷ ವಹಿಸಿದ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸಿ ಪಕ್ಷವನ್ನು ಕಟ್ಟಿ ಬೆಳೆಸಿದ್ದೇನೆ. ನನಗೊಂದು ಅವಕಾಶ ನೀಡುವಂತೆ ವರಿಷ್ಠರಲ್ಲಿ ಮನವಿ ಮಾಡುತ್ತಿದ್ದೇನೆ ಎಂದು ಹೇಳಿದರು.

ಲೋಕಸಭೆ ಚುನಾವಣೆ ಸಂಬಂಧ ಪಕ್ಷ ಕೈಗೊಳ್ಳುವ ಯಾವುದೇ ತೀರ್ಮಾನಕ್ಕೂ ಬದ್ಧರಿದ್ದೇವೆ. ಪಕ್ಷಕ್ಕಾಗಿ ದುಡಿದವರನ್ನು, ನಿಷ್ಠಾವಂತರನ್ನು ಕಡೆಗಣಿಸಬೇಡಿ ಎಂಬುದಷ್ಟೇ ನನ್ನ ಮನವಿ. ನಾನು ಪಕ್ಷದಲ್ಲಿ ಮಾಡಿರುವ ಸೇವೆಗೆ ಕಾರ್ಯಕರ್ತರು, ಅಭಿಮಾನಿಗಳು ತಮ್ಮ ಅಭಿಮಾನವನ್ನು ಪ್ರದರ್ಶಿಸಿದ್ದೀರಿ. ಮುಂದೆಯೂ ಪಕ್ಷದ ನಿಷ್ಠಾವಂತ ಸೇವಕನಾಗಿ ನಿಮ್ಮ ಜೊತೆ ಇರುತ್ತೇನೆ. ಪಕ್ಷವನ್ನು ಇನ್ನಷ್ಟು ಸದೃಢವಾಗಿ ಕಟ್ಟಿ ಬೆಳೆಸಲು ಕಂಕಣಬದ್ಧನಾಗಿದ್ದೇನೆ ಎಂದರು.

Follow Us:
Download App:
  • android
  • ios