ರಾಜ್ಯ ಸರ್ಕಾರ ಕೇಳಿದಷ್ಟು ಬರ ಪರಿಹಾರ ಬರೋದಿಲ್ಲ: ಎಚ್.ಡಿ.ಕುಮಾರಸ್ವಾಮಿ

ಬರ ಪರಿಹಾರ ವಿಚಾರದಲ್ಲಿ ರಾಜ್ಯ ಸರ್ಕಾರ ಕೇಳಿದಷ್ಟು ನೀಡಲು ಸಾಧ್ಯವಿಲ್ಲ. ಹಣ ಸಾಕಾಗಲಿಲ್ಲ ಎಂದರೆ ಸರ್ಕಾರ ಕೇಳಿದಷ್ಟು ಹಣ ನೀಡಲು ಸಾಧ್ಯವೇ? ಎಂದು ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಟೀಕಾಪ್ರಹಾರ ನಡೆಸಿದ್ದಾರೆ. 

Drought relief has not come as requested by the state government Says HD Kumaraswamy gvd

ಬೆಂಗಳೂರು (ಏ.28): ಬರ ಪರಿಹಾರ ವಿಚಾರದಲ್ಲಿ ರಾಜ್ಯ ಸರ್ಕಾರ ಕೇಳಿದಷ್ಟು ನೀಡಲು ಸಾಧ್ಯವಿಲ್ಲ. ಹಣ ಸಾಕಾಗಲಿಲ್ಲ ಎಂದರೆ ಸರ್ಕಾರ ಕೇಳಿದಷ್ಟು ಹಣ ನೀಡಲು ಸಾಧ್ಯವೇ? ಎಂದು ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಟೀಕಾಪ್ರಹಾರ ನಡೆಸಿದ್ದಾರೆ. ನಗರದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಬರ ಸೇರಿದಂತೆ ರಾಜ್ಯ ಎದುರಿಸುತ್ತಿರುವ ಪ್ರತಿಯೊಂದು ಸಮಸ್ಯೆಯ ಬಗ್ಗೆ ಕೇಂದ್ರದ ಕಡೆ ಕೈ ತೋರಿಸುವ ಕಾಂಗ್ರೆಸ್ ಸರ್ಕಾರ ಬರದಿಂದ ನೊಂದಿರುವ ಜನರಿಗೆ ಏನು ಮಾಡಿದೆ? ಕೇಂದ್ರ ಸರ್ಕಾರ 3,454 ಕೋಟಿ ರು. ಪರಿಹಾರ ನೀಡಿದೆ. ಕಡಿಮೆ ಬಂದಿದೆ ಎಂದರೆ ಕೇಳಬಹುದು, ಅದು ಬಿಟ್ಟು ರಾಜಕೀಯ ಮಾಡಿಕೊಂಡಿದ್ದರೆ ಉಪಯೋಗವೇನು? ಎಂದರು.

ಹಣ ಬಿಡುಗಡೆ ಮಾಡುವಾಗ ಎಲ್ಲಾ ಅಂಶಗಳನ್ನು ಕೇಂದ್ರ ಸರ್ಕಾರಪರಿಗಣನೆಗೆ ತೆಗೆದುಕೊಂಡಿರು ತ್ತದೆ. ಹಣ ಸಾಕಾಗಲಿಲ್ಲ ಎಂದರೆ ಇವರು ಕೇಳಿದಷ್ಟು ಹಣ ಕೊಡಲು ಸಾಧ್ಯವೇ? ಒಕ್ಕೂಟ ವ್ಯವಸ್ಥೆ ಎನ್ನುವುದು ಇದೆಯಲ್ಲ. 15ನೇ ಹಣಕಾಸಿನ ಆಯೋಗದ ಶಿಫಾರಸಿನ ಹಿನ್ನಲೆಯಲ್ಲಿ ಹಣ ಬರುತ್ತದೆ. 2000. ನೀಡುತ್ತೇವೆ. ಎಂದರು. ಆದರೆ ಯಾರಿಗೆ ಹೋಗಿದೆ? ಎಷ್ಟು ಜನಕ್ಕೆ ಹಣ ತಲುಪಿದೆ? ಆ 2000 ರು.ನಲ್ಲಿ ಕೇಂದ್ರದ್ದೂ ಸೇರಿದ್ದು, ಅದನ್ನು ಈ ಸರ್ಕಾರ ಹೇಳಬೇಕಲ್ಲವೇ? ಇವರನ್ನು ತೃಪ್ತಿಪಡಿಸಲು ಕೇಂದ್ರ ಸಾಧ್ಯವಿಲ್ಲ. ಕೆಲವೊಂದು ಮಾರ್ಗ ದರ್ಶನದ ಮೇಲೆ ಅನುದಾನ ಬಿಡುಗಡೆ ಮಾಡುತ್ತಾರೆ ಎಂದು ಹೇಳಿದರು.

ಮತದಾರರಿಗೆ ಹಣ ಕೊಡರೇ ರಣಹೇಡಿಗಳು: ತಮ್ಮನ್ನು ರಣಹೇಡಿ ಎಂದು ಕರೆದಿರುವ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಹೇಳಿಕೆಗೆ ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ತೀವ್ರ ಹರಿಹಾಯ್ದಿದ್ದಾರೆ. ರಣಹೇಡಿ ನಾನಲ್ಲ, ನೇರವಾಗಿ ಚುನಾವಣೆ ಎದುರಿಸಲಾಗದೆ ರಾತ್ರೋರಾತ್ರಿ ಮತದಾರರಿಗೆ QR ಕೋಡ್ ಗಿಫ್ಟ್ ಕೂಪನ್, ಹಣ ಹಂಚಿಕೆ ಮಾಡುವವರು ರಣಹೇಡಿಗಳು ಎಂದು ಕಿಡಿಕಾರಿದರು.

ಉತ್ತರ ಕರ್ನಾಟಕದ 13 ಕ್ಷೇತ್ರಗಳಿಗೆ ಕಾಂಗ್ರೆಸ್‌ ‘ಹೆಚ್ಚುವರಿ ಉಸ್ತುವಾರಿ ಸಚಿವರು’: ಡಿಕೆಶಿ

ಜ್ಯೋತಿಷಿ ಅಣತಿಯಂತೆ ಹಣ, ದೇವರ ಲಾಡು!: ಜ್ಯೋತಿಷಿಯೊಬ್ಬರು ಹೇಳಿದಂತೆ ಇವರು ಕನಕಪುರದಲ್ಲಿ ಹಣ, ಗಿಫ್ಟ್ ಕೂಪನ್ ಹಂಚಿದ್ದಾರೆ. ಅವರು ಹೇಳಿದರೆಂದು 505 ರು, ಮಲೆಮಹದೇಶ್ವರ ದೇವಾಲಯದ ಲಾಡು ಮತ್ತು ಗ್ಯಾರಂಟಿ ಕಾರ್ಡ್‌ಗಳನ್ನು ರಾತ್ರಿಯೆಲ್ಲ ಹಂಚಿದ್ದಾರೆ. ಕಾರ್ಡು ಹಂಚಿಕೆ ಮಾಡುತ್ತಿದ್ದ ಕಾಂಗ್ರೆಸ್ ಕಾರ್ಯಕರ್ತರನ್ನು ಬಿಜೆಪಿ, ಜೆಡಿಎಸ್‌ ಪಕ್ಷಗಳ ಕಾರ್ಯಕರ್ತರು ತಡೆದಿದ್ದಾರೆ. ಜಿಲ್ಲಾಧಿಕಾರಿ ಮತ್ತು ಚುನಾವಣಾ ಅಧಿಕಾರಿಗಳ ಗಮನಕ್ಕೂ ಈ ವಿಚಾರ ತಂದಿದ್ದಾರೆ. ಆದರೂ ಅವರು ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ. ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಮುಕ್ತ, ನ್ಯಾಯ ಸಮ್ಮತ ಚುನಾವಣೆ ನಡೆಯುತ್ತಿಲ್ಲ. ಸೋಲಿನ ಭೀತಿಯಿಂದ ಕುತಂತ್ರದ ರಾಜಕಾರಣ ಮಾಡುತ್ತಿದ್ದಾರೆ ಎಂದು ಕುಮಾರಸ್ವಾಮಿ ಆರೋಪಿಸಿದರು.

Latest Videos
Follow Us:
Download App:
  • android
  • ios