Asianet Suvarna News

ಕೋಲಂಬೋ ಪ್ರವಾಸ ಕಥನ: ಜಮೀರ್ ಹೇಳಿಕೆ ಬೆನ್ನಲ್ಲೇ ಎಳೆ-ಎಳೆಯಾಗಿ ಬಿಚ್ಚಿಟ್ಟ ಎಚ್‌ಡಿಕೆ

ಈ ಹಿಂದೆ ಜೆಡಿಎಸ್​ನ 26 ಶಾಸಕರು ಎಚ್​.ಡಿ.ಕುಮಾರಸ್ವಾಮಿ ಸಹಿತ ಕೊಲಂಬೋಗೆ ಹೋಗಿದ್ವಿ ಎಂದ ಜಮೀರ್ ಅಹ್ಮದ್ ಹೇಳಿಕೆಗೆ ಮಾಜಿ ಸಿಎಂ ಎಚ್​ಡಿಕೆ ಟ್ವೀಟ್​ ಮೂಲಕ ತಿರುಗೇಟು ನೀಡಿದ್ದಾರೆ.

Drugs Mafia HD Kumaraswamy Reacts Congress MLA Zameer Ahmed Khan Colombo Tour Statement
Author
Bengaluru, First Published Sep 12, 2020, 4:16 PM IST
  • Facebook
  • Twitter
  • Whatsapp

ಬೆಂಗಳೂರು, (ಸೆ.12) : ಜೆಡಿಎಸ್ ಪಕ್ಷದ ಗೌಪ್ಯ ಕಾರ್ಯಸೂಚಿ ಹಾಗೂ ಮುಂದಿನ ರಾಜಕೀಯ ಕಾರ್ಯತಂತ್ರಗಳ ಬಗ್ಗೆ ಚರ್ಚಿಸಲು ಶಾಸಕರು, ವಿಧಾನಪರಿಷತ್ ಸದಸ್ಯರು, ಮಾಜಿ ಶಾಸಕರು ಹಾಗೂ ಪ್ರಮುಖ ನಾಯಕರೊಂದಿಗೆ ಶ್ರೀಲಂಕಾದ ಕೊಲಂಬೋಗೆ ಒಮ್ಮೆ ಪ್ರವಾಸ ಹೋಗಿದ್ದು ನಿಜ. ಆದರೆ, ಕದ್ದು ಮುಚ್ಚಿ 'ಕೊಲಂಬೋ ಯಾತ್ರೆ' ಮಾಡಿರಲಿಲ್ಲ ಎಂದು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ.

"

ಕುಮಾರಸ್ವಾಮಿ ಸಹಿತ ಕೊಲಂಬೋಗೆ ಹೋಗಿದ್ದೆ ಎಂದು ಮಾಜಿ ಶಿಷ್ಯ ಜಮೀರ್ ಅಹ್ಮದ್ ಖಾನ್ ಹೇಳಿಕೆಗೆ ಎಚ್‌ಡಿಕೆ ಸರಣಿ ಟ್ವಿಟ್ ಮಾಡಿ ಅಂದು ಶ್ರೀಲಂಕಾಗೆ ಹೋಗಿರುವ ಬಗ್ಗೆ ಎಳೆ-ಎಳೆಯಾಗಿ ಬಿಚ್ಚಿಟ್ಟಿದ್ದಾರೆ.

ಜೆಡಿಎಸ್ ಪಕ್ಷದ ಗೌಪ್ಯ ಕಾರ್ಯಸೂಚಿ ಹಾಗೂ ಮುಂದಿನ ರಾಜಕೀಯ ಕಾರ್ಯತಂತ್ರಗಳ ಬಗ್ಗೆ ಚರ್ಚಿಸಲು ಶಾಸಕರು, ವಿಧಾನಪರಿಷತ್ ಸದಸ್ಯರು, ಮಾಜಿ ಶಾಸಕರು ಹಾಗೂ ಪ್ರಮುಖ ನಾಯಕರೊಂದಿಗೆ ಶ್ರೀಲಂಕಾದ ಕೊಲಂಬೋಗೆ ಒಮ್ಮೆ ಪ್ರವಾಸ ಹೋಗಿದ್ದು ನಿಜ. ಆದರೆ, ಕದ್ದು ಮುಚ್ಚಿ 'ಕೊಲಂಬೋ ಯಾತ್ರೆ' ಮಾಡಿರಲಿಲ್ಲ.  ಒಂದಾನೊಂದು ಕಾಲದಲ್ಲಿ ನಮ್ಮ ಪಕ್ಷದಲ್ಲಿದ್ದ ರಾಜಕಾರಣಿಯೊಬ್ಬರು ಜೆಡಿಎಸ್ ಶಾಸಕರು ಮತ್ತು ನಾನು ಕೊಲಂಬೋ ಪ್ರವಾಸ ಕೈಗೊಂಡಿದ್ದಾಗಿ ನೀಡಿರುವ ಹೇಳಿಕೆ ಎತ್ತಣ ಮಾಮರ ಎತ್ತಣ ಕೋಗಿಲೆ ಎಂಬಂತಿದೆ ಎಂದಿದ್ದಾರೆ.

ಕೊನೆಗೂ ಕೊಲಂಬೋ ಭೇಟಿ ಒಪ್ಪಿಕೊಂಡ ಕಾಂಗ್ರೆಸ್ ಶಾಸಕ ಜಮೀರ್...! 

2014 ರ ಜೂನ್ ತಿಂಗಳಲ್ಲಿ ಪಕ್ಷ ಸಂಘಟನೆಗೆ ಬಗ್ಗೆ ವಿಸ್ತೃತವಾಗಿ ಚರ್ಚಿಸಲು ಕೊಲಂಬೋಗೆ ಪ್ರವಾಸ ಹೋಗುವುದಾಗಿ ಬಹಿರಂಗವಾಗಿಯೇ ಮಾಧ್ಯಮಗಳಿಗೆ ಹೇಳಿ ಹೋಗಿದ್ದಲ್ಲದೇ, ಅಲ್ಲಿ ನಡೆದ ಶಾಸಕರ ಜೊತೆಗಿನ ಚರ್ಚೆಯ ದೃಶ್ಯಾವಳಿಗಳನ್ನು ಮಾಧ್ಯಮಗಳಿಗೆ ಬಿಡುಗಡೆ ಮಾಡಿದ್ದೆವು. ಇದರಲ್ಲಿ ಯಾವುದೇ ಗುಟ್ಟು ಇರಲಿಲ್ಲ ಎಂಬುದಾಗಿ ತಿಳಿಸಿದ್ದಾರೆ.

2014 ರ ಜೂನ್ ತಿಂಗಳಲ್ಲಿ ಪಕ್ಷ ಸಂಘಟನೆ ಬಗ್ಗೆ ವಿಸ್ತೃತವಾಗಿ ಚರ್ಚಿಸಲು ಕೊಲಂಬೋಗೆ ಪ್ರವಾಸ ಹೋಗುವುದಾಗಿ ಬಹಿರಂಗವಾಗಿಯೇ ಮಾಧ್ಯಮಗಳಿಗೆ ಹೇಳಿ ಹೋಗಿದ್ದಲ್ಲದೇ, ಅಲ್ಲಿ ನಡೆದ ಶಾಸಕರ ಜೊತೆಗಿನ ಚರ್ಚೆಯ ದೃಶ್ಯಾವಳಿಗಳನ್ನು ಮಾಧ್ಯಮಗಳಿಗೆ ಬಿಡುಗಡೆ ಮಾಡಿದ್ದೆವು. ಇದರಲ್ಲಿ ಯಾವುದೇ ಗುಟ್ಟು ಇರಲಿಲ್ಲ.

ನೆರೆಯ ರಾಜ್ಯ ಗೋವಾ ಇಲ್ಲವೇ ರಾಜ್ಯದ ರೆಸಾರ್ಟ್ನಲ್ಲಿ ಸಭೆ ನಡೆಸುವುದಕ್ಕಿಂತ ಯಾವುದೇ ಅಡಚಣೆ ಇಲ್ಲದೆ ಶಾಸಕರೊಂದಿಗೆ ಮುಕ್ತವಾಗಿ ಚರ್ಚಿಸಲು ಕೊಲಂಬೋ ಪ್ರವಾಸ ದುಬಾರಿಯಲ್ಲ ಎಂಬ ಕಾರಣಕ್ಕೆ ಇಂತಹ ಸಭೆ ನಡೆಸಿದ್ದು ನಿಜ. ವಿಮಾನ ಹತ್ತುವಾಗಲೂ ಮತ್ತು ವಾಪಸು ಬಂದಾಗ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದೇನೆ ಎಂದು ಹೇಳಿದ್ದಾರೆ. 

ನೆರೆಯ ರಾಜ್ಯ ಗೋವಾ ಇಲ್ಲವೇ ರಾಜ್ಯದ ರೆಸಾರ್ಟ್ ನಲ್ಲಿ ಸಭೆ ನಡೆಸುವುದಕ್ಕಿಂತ ಯಾವುದೇ ಅಡಚಣೆ ಇಲ್ಲದೆ ಶಾಸಕರೊಂದಿಗೆ ಮುಕ್ತವಾಗಿ ಚರ್ಚಿಸಲು ಕೊಲಂಬೋ ಪ್ರವಾಸ ದುಬಾರಿಯಲ್ಲ ಎಂಬ ಕಾರಣಕ್ಕೆ ಇಂತಹ ಸಭೆ ನಡೆಸಿದ್ದು ನಿಜ. ವಿಮಾನ ಹತ್ತುವಾಗಲೂ ಮತ್ತು ವಾಪಸು ಬಂದಾಗ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದೇನೆ.

ಕೊಲಂಬೋ ಪ್ರಯಾಣ ಅದೇ ಮೊದಲು ಮತ್ತು ಕೊನೆ. ಇದರಲ್ಲಿ ಬಚ್ಚಿಡುವುದು ಏನೇನೂ ಇಲ್ಲ. ಅವರು ನಮ್ಮೊಂದಿಗೆ ಬಂದಿದ್ದರೆ ಹೊರತು ನಾವು ಅವರೊಂದಿಗೆ ಹೋಗಿರಲಿಲ್ಲ ಎಂದು ಸ್ಪಷ್ಟ ಪಡಿಸಿದ್ದಾರೆ.

ಆಚಾರವಿಲ್ಲದ ನಾಲಿಗೆ ನಿನ್ನ, ನೀಚ ಬುದ್ಧಿಯ ಬಿಡು ನಾಲಿಗೆ, ವಿಚಾರವಿಲ್ಲದೆ ಪರರ ದುಶಿಸುವುದಕ್ಕೆ, ಚಾಚಿ ಕೊಂಡಿರುವಂತ ನಾಲಿಗೆ, ಸತತವು ನುಡಿ ಕಂಡ್ಯ ನಾಲಿಗೆ, ಚಾಡಿ ಹೇಳಲು ಬೇಡ ನಾಲಿಗೆ, ಪುರಂದರ ದಾಸರು ಎಂಬುದಾಗಿ ಉದ್ಗರಿಸಿದ್ದಾರೆ.

ಆಚಾರವಿಲ್ಲದ ನಾಲಿಗೆ ನಿನ್ನ
ನೀಚ ಬುದ್ಧಿಯ ಬಿಡು ನಾಲಿಗೆ
ವಿಚಾರವಿಲ್ಲದೆ ಪರರ ದುಶಿಸುವುದಕ್ಕೆ
ಚಾಚಿ ಕೊಂಡಿರುವಂತ ನಾಲಿಗೆ
ಸತತವು ನುಡಿ ಕಂಡ್ಯ ನಾಲಿಗೆ
ಚಾಡಿ ಹೇಳಲು ಬೇಡ ನಾಲಿಗೆ
ಪುರಂದರ ದಾಸರು

ಜಮೀರ್ ಹೇಳಿಕೆ: ಎಚ್‌ಡಿಕೆ ಬೆನ್ನಿಗೆ ನಿಂತ ಹೊರಟ್ಟಿ

"

Follow Us:
Download App:
  • android
  • ios