ನವದೆಹಲಿ (ಫೆ.20): ಮುಂದಿನ ವಾರ ಬಿಜೆಪಿಗೆ ಸೇರ್ಪಡೆ ಆಗಲಿರುವ ಮೆಟ್ರೋ ಮ್ಯಾನ್‌ ಖ್ಯಾತಿಯ ಇ.ಶ್ರೀಧರನ್‌ (88), ಕೇರಳದಲ್ಲಿ ಬಿಜೆಪಿಯನ್ನು ಅಧಿಕಾರಕ್ಕೆ ತಲುವುದೇ ತಮ್ಮ ಪ್ರಮುಖ ಗುರಿಯಾಗಿದೆ ಎಂದರು. 

ಒಂದು ವೇಳೆ ಕೇರಳದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಮುಖ್ಯಮಂತ್ರಿ ಆಗಲು ಸಿದ್ಧವಿರುವುದಾಗಿ ಹೇಳಿದ್ದಾರೆ. 

ಪಿಟಿಐ ಸುದ್ದಿ ಸಂಸ್ಥೆಯೊಂದಿಗೆ ಮಾತನಾಡಿರುವ ಅವರು, ರಾಜ್ಯಪಾಲ ಹುದ್ದೆ ಒಂದು ಸಂವಿಧಾನಿಕ ಹುದ್ದೆ ಆಗಿರುವ ಕಾರಣ ಯಾವುದೇ ಅಧಿಕಾರ ಇರುವುದಿಲ್ಲ. ಹೀಗಾಗಿ ನನಗೆ ಅದರಲ್ಲಿ ಆಸಕ್ತಿ ಇಲ್ಲ. 

ಮತ್ತೆ ಮೂವರು ಕಾಂಗ್ರೆಸ್‌ ಶಾಸಕರು ರಾಜೀನಾಮೆ: ಖಚಿತಪಡಿಸಿದ ಬಿಜೆಪಿ ನಾಯಕ

ನಾನು ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಬಯಸುತ್ತೇನೆ. ಬಿಜೆಪಿಯನ್ನು ಅಧಿಕಾರಕ್ಕೆ ತರುವುದು ನನ್ನ ಮುಖ್ಯ ಗುರಿಯಾಗಿದೆ. ಒಂದು ವೇಳೆ ಬಿಜೆಪಿ ಅಧಿಕಾರಕ್ಕೆ ಬಂದರೆ ಮೂಲ ಸೌಕರ್ಯ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದು ಹೇಳಿದ್ದಾರೆ.