ಬೆಂಗಳೂರು, (ಅ.05): ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್​ ಕುಮಾರ್​ಗೂ ಕೊರೋನಾ ಸೋಂಕು ತಗುಲಿದ್ದು ದೃಢಪಟ್ಟಿದೆ.

ಈ ಹಿನ್ನೆಲೆಯಲ್ಲಿ ಅವರು ವೈದ್ಯರ ಸಲಹೆ ಮೇರೆಗೆ ಹೋಂ ಕ್ವಾರಂಟೈನ್​ಗೆ ಒಳಗಾಗಿದ್ದಾರೆ. ವರದಿಯಲ್ಲಿ ಕೊರೋನಾ ಪಾಸಿಟಿವ್ ಬಂದಿರುವ ಬಗ್ಗೆ ಸ್ವತಃ ಅವರೇ ಸುರೇಶ್ ಕುಮಾರ್‌ ಅವರೇ ಸಾಮಾಜಿಕ ಜಾಲತಾಣಗಳಲ್ಲಿ ಬಹಿರಂಗಪಡಿಸಿದ್ದಾರೆ.

ಡಿಕೆಶಿ ಮನೆ ಮೇಲೆ ಸಿಬಿಐ ದಾಳಿ, ನಾಯಕರಿಗೆ ಅಂಟಿಕೊಂಡ ಪಕ್ಷಾಂತರ ಗಾಳಿ; ಅ.5ರ ಟಾಪ್ 10 ಸುದ್ದಿ!

ನನಗೆ ರೋಗದ ಯಾವುದೇ ಲಕ್ಷಣಗಳಿಲ್ಲ. ಆದರೂ ಕೊವಿಡ್​-19 ಸೋಂಕು ಇರುವುದರಿಂದ ವೈದ್ಯರ ಸಲಹೆಯ ಮೇರೆಗೆ ಹೋಂ ಕ್ವಾರಂಟೈನ್ ಆಗುತ್ತಿದ್ದೇನೆ. ಯಾವುದೇ ಆತಂಕವಿಲ್ಲ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಬರೆದುಕೊಂಡಿದ್ದಾರೆ.

ಸಚಿವ ಸುರೇಶ್​ ಕುಮಾರ್ ಅವರು ಇತ್ತೀಚೆಗೆ ರಾಜ್ಯದ ಕೆಲವು ಜಿಲ್ಲೆಗಳಿಗೆ ಕಾರ್ಯನಿಮಿತ್ತ ಭೇಟಿ ಕೊಡುತ್ತಲೇ ಇದ್ದಾರೆ. ಎರಡು ದಿನಗಳ ಹಿಂದಷ್ಟೇ ಚಾಮರಾಜನಗರದ ಜಿಲ್ಲೆಗೆ ಭೇಟಿ ನೀಡಿದ್ದರು.