ನವದೆಹಲಿ, (ಸೆ.29):  ಬೆಂಗಳೂರಿನ R.R.ನಗರ ಮತ್ತು ತುಮಕೂರು ಜಿಲ್ಲೆಯ ಶಿರಾ  ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ಘೋಷಣೆಯಾಗಿದೆ.

ಇಂದು (ಮಂಗಳವಾರ) ಭಾರತೀಯ ಚುನಾವಣೆ ಆಯೋಗ ದಿನಾಂಕ ಪ್ರಕಟಿಸಿದ್ದು,  ನವೆಂಬರ್ 3ರಂದು 2 ಕ್ಷೇತ್ರಗಳಿಗೆ ಉಪಚುನಾವಣೆ ನಡೆಯಲಿದೆ. 

ಶಿರಾ ಬೈ ಎಲೆಕ್ಷನ್: ಡಿಕೆಶಿ ತಂತ್ರ ಸಕ್ಸಸ್, ಕಾಂಗ್ರೆಸ್ ಅಭ್ಯರ್ಥಿ ಫೈನಲ್

ನವೆಂಬರ್ 10ರಂದು ಉಪಚುನಾವಣೆಯ ಫಲಿತಾಂಶ ಪ್ರಕಟವಾಗಲಿದೆ. ಅಕ್ಟೋಬರ್ 9ರಂದು ಚುನಾವಣಾ ಅಧಿಸೂಚನೆ ಪ್ರಕಟಗೊಳ್ಳಲಿದೆ. ಅಕ್ಟೋಬರ್ 16 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದ್ದು, ಅ. 19 ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನವಾಗಿದೆ.

ಜೆಡಿಎಸ್ ಶಾಸಕರಾಗಿದ್ದ ಸತ್ಯನಾರಾಯಣ್ ಅವರ ಅಕಾಲಿಕ ನಿಧನದಿಂದ ತುಮಕೂರು ಜಿಲ್ಲೆಯ ಶಿರಾ ವಿಧಾನಸಭಾ ಕ್ಷೇತ್ರಕ್ಕೆ ಚುನಾವಣೆ ನಡೆಯಲಿದೆ. ಇನ್ನು 2018ರ ಚುನಾವಣೆಯಲ್ಲಿ  ಬೆಂಗಳೂರಿನ ಆರ್‌ಆರ್‌ ನಗರ ಕ್ಷೇತ್ರದಿಂದ ಕಾಂಗ್ರೆಸ್‌ ಅಭ್ಯರ್ಥಿಯಾಗಿದ್ದ ಮುನಿರತ್ನ ಅವರು ಗೆಲುವು ಸಾಧಿಸಿದ್ದರು.

ಆದ್ರೆ, ಬದಲಾದ ರಾಜಕೀಯ ವಿದ್ಯಾಮಾನಗಳಿಂದ ಮುನಿರತ್ನ ಅವರು ಕಾಂಗ್ರೆಸ್ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರಿದ್ದರು. ಈ ಹಿನ್ನೆಲೆಯಲ್ಲಿಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಿ ಅಂದಿನ ಸ್ಪೀಕರ್ ರಮೇಶ್ ಕುಮಾರ್ ಆದೇಶಿಸಿದ್ದರು. ಅಲ್ಲದೇ ಸುಪ್ರೀಂಕೋರ್ಟ್‌ ಸಹ ಅನರ್ಹರು ಎಂದು ತೀರ್ಪು ನೀಡಿತ್ತು. ಅಲ್ಲದೇ ಈ ಕ್ಷೇತ್ರದ ತಕರಾರು ಕೋರ್ಟ್‌ನಲ್ಲಿತ್ತು.